ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಗುಂಡಮತ್ತ ಗ್ರಾಮದ ಮನೆಯೊಂದರ ಮೇಲೆ ಬುಧವಾರ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡು, ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ದೂರನ್ನು ಅನುಸರಿಸಿ, ದಾಳಿ ನಡೆಸಿದ ಅಧಿಕಾರಿಗಳು ಮದ್ಯ ಮಾರಾಟದಲ್ಲಿ ತೊಡಗಿದ್ದ ನಾರಾಯಣಸ್ವಾಮಿ ಎಂಬುವವರನ್ನು ಬಂಧಿಸಿ, ಮನೆಯಲ್ಲಿ ದಾಸ್ತಾನು ಮಾಡಿದ್ದ 42 ಲೀಟರ್ ಮದ್ಯ ಹಾಗೂ 34 ಲೀಟರ್ ಬಿಯರ್ ವಶಪಡಿಸಿಕೊಂಡಿದ್ದಾರೆ.
ನಾರಾಯಣಸ್ವಾಮಿ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಅಬಕಾರಿ ನಿರೀಕ್ಷಕ ಬಿ.ಎಸ್.ರೋಹಿತ್, ಉಪ ನಿರೀಕ್ಷಕ ಕೃಷ್ಣಪ್ಪ, ಪೇದೆ ಮಂಜುನಾಥ್, ವಾಹನ ಚಾಲಕ ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದ್ದರು.