

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಕೃಷ್ಣನ್ ತಿಳಿಸಿದ್ದಾರೆ.
ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾಸ್ಕಾರ್ಡ್ ಬ್ಯಾಂಕ್‍ನ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.