

ಹಾಸನ : ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಕಾರು ಹಾಗೂ ಟಿಪ್ಪರ್ ಮಧ್ಯೆ ಭೀಕರ ರಸ್ತೆ ಅಪಘಾತವಾಗಿ
ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಭೀಕರ ಘಟನೆ ನೆಡೆದಿದೆ. ಈ ಅಪಘಾತದಲ್ಲಿ ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮೃತರು ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿಯ ಅಶೋಕ್, ತಟ್ಟಿಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ
ಚಿಗಳೂರಿನ ದಿನೇಶ್ ಎಂದು ತಿಳಿದುಬಂದಿದೆ. ಟಿಪ್ಪರ್ ಹಾಸನದಿಂದ ಸಕಲೇಶಪುರಕ್ಕೆ ತೆರಳುತ್ತಿದ್ದು, ಇನ್ನೊವಾ ಕಾರು ಸಕಲೇಶಪುರದಿಂದ ಹಾಸನಕ್ಕೆ ತೆರೆಳುತಿತ್ತು. ಇವೆರೇಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಮ ಕಾರಿನಲ್ಲಿದ್ದ ನಾಲ್ವರು ಮೃತದಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನ ನಡೆಸಿ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ ಎಂದು.
ತಿಳಿದು ಬಂದಿದೆ.