


ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೃತ ಮಹಿಳೆ ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಎಂದು ತಿಳಿದು ಬಂದಿದೆ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು, ಆದರೆ ದಾರಿ ಮಧ್ಯದಲ್ಲೇ ಮೃತಪಟ್ಟರು.
ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.