JANANUDI.COM NETWORK
ಟೆಕ್ಸಾಸ್: ಅಮೆರಿಕದ ಟೆಕ್ಸಾಸ್ ನ ಪ್ರಾಥಮಿಕ ಶಾಲೆಯಲ್ಲಿ 18 ವರ್ಷ ವಯಸ್ಸಿನ ಯುವಕನೋರ್ವ ಗನ್ ಹಿಡಿದು ಶಾಲೆಗೆ ನುಗ್ಗಿ ಅಮಾನವೀಯವಾಗಿ ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ 18 ಮಂದಿ ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ಸೇರಿದಂತೆ ಒಟ್ಟು 21 ಮಂದಿ ಮೃತಪಟ್ಟಿದ್ದಾರೆ.
ಸಾಲ್ವಡಾರ್ ರಾಮೋಸ್ ಎಂದು ಗುರುತಿಸಲಾದ 18 ವರ್ಷದ ಬಂದೂಕು ಧಾರಿ ಯುವಕ ಮಂಗಳವಾರ ರಾಜ್ ಎಲಿಮೆಂಟರಿ ಶಾಲೆಗೆ ನುಗ್ಗಿ ಭೀಕರ ದಾಳಿ ನಡೆಸಿದ್ದಾನೆ. ದಾಳಿಕೋರನು ಸಮೀಪದ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದ್ದ.
ಅಮೇರಿಕಾದಲ್ಲಿ 2012ರಲ್ಲಿ ಕನೆಕ್ಟಿಕಟ್ ನ ನ್ಯೂಟೌನ್ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದ ದಾಳಿ ನಂತರ ಎಲಿಮೆಂಟ್ರಿ ಶಾಲೆಯೊಂದರಲ್ಲಿ ನಡೆದ ಅತಿ ಭೀಕರ ದಾಳಿ ಇದಾಗಿದೆ.
ಶಾಲೆಗೆ ತೆರಳುವುದಕ್ಕೂ ಮುನ್ನ ದಾಳಿಕೋರನು ಅಜ್ಜಿಯೊಬ್ಬರ ಮೇಲೂ ಗುಂಡು ಹಾರಿಸಿದ್ದು, ಆಕೆಯ ಸ್ಥಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಆ ಬಳಿಕ ವಾಹನದಲ್ಲಿ ಬಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.
ಈತನು ದೇಹಕ್ಕೆ ರಕ್ಷಾ ಕವಚ ಧರಿಸಿದ್ದು, ರೈಫಲ್ ಮತ್ತು ಬ್ಯಾಕ್ ‘ಪ್ಯಾ ಹೊಂದಿದ್ದ. ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲು ಗುಂಡು ಹಾರಿಸಿದ್ದು, ಪೊಲೀಸರ ಎನ್ ಕೌಂಟರ್ ನಲ್ಲಿ ದಾಳಿಕೋರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಟೆಕ್ಸಾಸ್ ಶಾಲೆಯ ಗುಂಡಿನ ದಾಳಿಗೆ ಬಲಿಯಾದವರಿಗೆ ಗೌರವಾರ್ಥವಾಗಿ ಶನಿವಾರದವರೆಗೆ ಶ್ವೇತಭವನ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಗಳು ಅರ್ಧ ಮಟ್ಟದಲ್ಲಿ ಹಾರಿಸಲಾಗಿದೆ.