

ಕುಂದಾಪುರ :ಅನಗಳ್ಳಿ ಗ್ರಾಮ ಪಂಚಾಯತ್ನ 2ನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಚ್. ಕೆ.ಸವಿತಾ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಉದಯ ಪೂಜಾರಿ ಇವರು ಆಯ್ಕೆಯಾದರು.
ಈ ಗ್ರಾಮ ಪಂಚಾಯತ್ನಲ್ಲಿ ಒಟ್ಟು 8 ಸ್ಥಾನಗಳಿದ್ದು. 3 ಕಾಂಗ್ರೆಸ್ , 3 ಬಿಜೆಪಿ, 2 ಪಕ್ಷೇತರ. ಸೋಮವಾರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಕಾಂಗ್ರೆಸ್ ಆಭ್ಯರ್ಥಿಗೆ 4 ಮತ ಮತ್ತು ಬಿಜೆಪಿ ಬೆಂಬಲಿತ ಆಭ್ಯರ್ಥಿ 4 ಮತಗಳನ್ನು ಸಮಬಲವಾಗಿ ಪಡೆದುಕೊಂಡಿದ್ದರು. ಇಬ್ಬರು ಆಭ್ಯರ್ಥಿಗಳಿಗೂ ಸಮಬಲವಾಗಿ ಮತ ಚಲಾವಣೆಯಾದ್ದರಿಂದ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಪ್ರಕ್ರಿಯೆ ಕೈಗೊಂಡಾಗ ಅಧ್ಯಕ್ಷ ಸ್ಥಾನ ಎನ್ನುವುದು ಕಾಂಗ್ರೆಸ್ ಬೆಂಬಲಿತ ಆಭ್ಯರ್ಥಿ ಎಚ್ ಕೆ ಸವಿತಾ ಇವರ ಪಾಲಾಯಿತು. ಉಪಾಧ್ಯಕ್ಷರಾಗಿ ಉದಯ ಪೂಜಾರಿ ಇವರು ಅವಿರೋಧವಾಗಿ ಆಯ್ಕೆಯಾದರು.
ಆನಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಹಿಂ.ವ.ಅ(ಮ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮನ್ಯ ಸ್ಥಾನಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ಕುಂದಾಪುರ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ ಎಮ್, ಕರ್ತವ್ಯ ನಿರ್ವಹಿಸಿದರು.
