ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಉಡುಪಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ಶನಿವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಯೋಗ ಶಿಬಿರದ ಉದ್ಘಾಟನೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಯೋಗ ತರಬೇತುದಾರರಾದ ಲಲಿತಾ ಆಚಾರ್ಯ, ನಿಯಾ ಶೆಟ್ಟಿ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಸದಸ್ಯರಾದ ಪದ್ಮಶ್ರೀ ಪೂಜಾರಿ, ಜ್ಯೋತಿ ಶೆಟ್ಟಿ ಮೊದಲಾದವರಿದ್ದರು. ನಂತರ ಒಂದು ಗಂಟೆಗಳ ಕಾಲ ಯೋಗಾಭ್ಯಾಸ ತರಬೇತಿ ಶಿಬಿರ ನಡೆಸಲಾಯಿತು.