ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಕೆಸರ್‍ಡೊಂಜಿ ದಿನ ಕಾರ್ಯಕ್ರಮ

ವರದಿ:  ವಾಲ್ಟರ್ಮೊಂತೇರೊ, ಬೆಳ್ಮಣ್ಣು

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಂದ 22ನೇ ವರ್ಷಾಚರಣೆ ಅಂಗವಾಗಿ ನಂದಳಿಕೆಯ ಕುಡುಂದೂರಿನ ಬೆರಣಗುಡ್ಡೆಯ ಗದ್ದೆಯಲ್ಲಿ ಕೆಸರ್‍ಡೊಂಜಿ ದಿನ ಕಾರ್ಯಕ್ರಮ ಆದಿತ್ಯವಾರ ಜರಗಿತು.
ಕಾರ್ಕಳ ರಶ್ಮಿ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಿ.ಆರ್. ರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದವರು ಕೃಷಿ ಚಟುವಟಿಕೆಗಳಿಂದ ಮಾತ್ರ ನಮ್ಮ ಸಂಸ್ಕøತಿ ಉಳಿಯಲು ಸಾಧ್ಯ ಎಂದು ಹೇಳಿದರು.

ಗದ್ದೆಗೆ ಹಾಲೇರೆದು ಕಾರ್ಯಕ್ರಮದ ಉದ್ಘಾಟನೆ


ಭೂಮಿ ತಾಯಿಗೆ ಹಾಲೇರೆಯುವ ಮೂಲಕ ಕೆಸರ್‍ಡೊಂಜಿ ಕಾರ್ಯಕ್ರಮವನ್ನು ವಿಶಿಷ್ಠ ರೀತಿಯಲ್ಲಿ ಉದ್ಘಾಟಿಸಲಾಯಿತು.


ಕಂಬಳ ಶೈಲಿಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ


ಕೆಸರ ಗದ್ದೆಯಲ್ಲಿ ಕಂಬಳದ ಕೋಣಗಳು ಗಮನ ಸೆಳೆದವು. ಅವುಗಳನ್ನು ಓಡಿಸುವ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಛತ್ರಪತಿ ಫೌಂಡೇಶನ್ ಅಧ್ಯಕ್ಷ ಗಿರೀಶ್ ರಾವ್, ಮೀನುಗಾರಿಕಾ ನಿಗಮ ಮಂಡಳಿಯ ನಿರ್ದೇಶಕರಾದ ಗೀತಾಂಜಲಿ ಸುವರ್ಣ, ನಾರಾಯಣಗುರು ಕೋ-ಅಪರೇಟಿವ್ ಬ್ಯಾಂಕ್‍ನ ನಿರ್ದೇಶಕರಾದ ಪ್ರಭಾಕರ್ ಬಂಗೇರ, ಉದ್ಯಮಿ ಉದಯ ಕುಮಾರ್ ಹೆಗ್ಡೆ ಎರ್ಲಪಾಡಿ, ಸಂಜೀವಿ ಶೆಟ್ಟಿ ಬೆರಣಗುಡ್ಡೆ, ಭಕ್ತಿ ಶೆಟ್ಟಿ, ತುಕಾರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸದ್ದರು.
ವೇದಿಕೆಯಲ್ಲಿ ಕಾರ್ಯಕ್ರಮದ ನಿರ್ದೇಶಕ ರಾಜೇಶ್ ಕೋಟ್ಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬೀರೋಟ್ಟು, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಘುವೀರ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷರಾದ ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತಿತರಿದ್ದರು.
ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಪದ್ಮಶ್ರೀ ಪೂಜಾರಿ ಪ್ರಾರ್ಥನೆಗೈದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು.


ಸಾಧಕರಿಗೆ ಗೌರವ


ಅಂತರಾಷ್ಟ್ರೀಯ ಪವರ್ ಲಿಪ್ಟರ್ ಬೋಳ ಅಕ್ಷತಾ ಪೂಜಾರಿ ಹಾಗೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಯಿರಾಜ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.


ಕಾರ್ಯಕ್ರಮದುದ್ದಕ್ಕೂ ಅತಿಥಿ ಗಣ್ಯರ ಆಗಮನ


ಕೆಸರ್‍ಡೊಂಜಿ ದಿನ ಕಾರ್ಯಕ್ರಮಕ್ಕೆ ಬೆಳಿಗ್ಗೆಯಿಂದ ಸಂಜೆವರೆಗೆ ಅತಿಥಿ ಗಣ್ಯರು ಆಗಮಿಸುತ್ತಿದ್ದರು. ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬೋಳ ಜಯರಾಮ್ ಸಾಲ್ಯಾನ್, ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಇನ್ನ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶ ಆರ್. ಮೂಲ್ಯ, ಬೋಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬೋಳ ಸತೀಶ್ ಪೂಜಾರಿ, ನಂದಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ನಂದಳಿಕೆ, ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸಾದ್ ಶೆಟ್ಟಿ, ಗಿರೀಶ್ ಶೆಟ್ಟಿ, ಸುಧಾಕರ್, ಪದ್ಮಶ್ರೀ ಪೂಜಾರಿ, ಯಶೋಧ ದೇವಾಡಿಗ, ಸುಜಾತ ಪೂಜಾರಿ, ಅನ್ನಪೂರ್ಣ, ಬೆಳ್ಮಣ್ಣು ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಅಂಚನ್, ಬೆಳ್ಮಣ್ಣು ಸೂರಜ್ ಹೊಟೇಲ್ ಮಾಲಕರಾದ ಶೋಧನ್ ಕುಮಾರ್ ಶೆಟ್ಟಿ, ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ದಿನೇಶ್ ಕುಲಾಲ್, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ವೀಣೇಶ್ ಅಮೀನ್, ಸಾಣೂರು ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ನಂದಳಿಕೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ಅಧ್ಯಕ್ಷ ಹರಿಪ್ರಸಾದ್ ನಂದಳಿಕೆ, ಹೊಸಮಾರು ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಜೇಶ್ ಕುಲಾಲ್, ಕೆದಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಚಿನ್ ಭಂಡಾರಿ, ಬೆಳ್ಮಣ್ಣು ಬಿಲ್ಲವ ಸಂಘದ ಕಾರ್ಯದರ್ಶಿ ಕರುಣಾಕರ್ ಪೂಜಾರಿ, ಮಂಜರಪಲ್ಕೆ ವಿಶ್ವಕರ್ಮ ಸಂಘದ ಮಾಜಿ ಅಧ್ಯಕ್ಷ ಗಣಪತಿ ಆಚಾರ್ಯ, ಬೆಳ್ಮಣ್ಣು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಸುರೇಶ್ ರಾವ್, ಬೆಳ್ಮಣ್ಣು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಶ್ಯಾಮ ಶೆಟ್ಟಿ, ಇಟ್ಟಮೇರಿ ಲಿಟ್ಲ್ ಫ್ಲವರ್ ಫ್ರೆಂಡ್ಸ್‍ನ ಅಧ್ಯಕ್ಷ ಕಿರಣ್ ಶೆಟ್ಟಿ ಮೊದಲಾದವರು ಆಗಮಿಸಿದ್ದರು.


ಕೆಸರಿನಲ್ಲಿ ಮಿಂದೆದ್ದ ಯುವಜನತೆ ಕಾರ್ಯಕ್ರಮದುದ್ದಕ್ಕೂ ಯುವಜನತೆ ಕೆಸರಿನಲ್ಲಿ ಕುಣಿದು ಕುಪ್ಪಳಿಸಿ ಸಂತಸ ಪಟ್ಟರು.

ರಂಗೇರಿದ ಕೆಸರ್‍ಡೊಂಜಿ ದಿನ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳು


ಪುರುಷರ ಹಾಗೂ ಮಹಿಳೆಯ ವಿಭಾಗದ ಹಗ್ಗಾಜಗಾಟ ಸ್ಪರ್ಧೆಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಪುರುಷರ ವಿಭಾಗದಲ್ಲಿ ಪೊಳಿಪು ವೀರಾಂಜನೇಯ ತಂಡ ಪ್ರಥಮ ಸ್ಥಾನ, ನಮನ ಫ್ರೆಂಡ್ಸ್ ಬೋಳ – ಬಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಮಹಿಳೆಯರ ವಿಭಾಗದಲ್ಲಿ ಮಂಜರಪಲ್ಕೆ ಗಾಯತ್ರಿ ಮಹಿಳಾ ಮಂಡಳಿ ಪ್ರಥಮ ಸ್ಥಾನ, ಪಕಲ ಅನ್ನಪೂರ್ಣ ಟೀಮ್ ದ್ವೀತಿಯ ಸ್ಥಾನ ಪಡೆದು ಕೊಂಡಿತು. ಪುರುಷರ ವಿಭಾಗದಲ್ಲಿ ಮಡಿಕೆ ಹೊಡೆಯುವ ಸ್ಪರ್ಧೆ, 100ಮೀ ಓಟ, ಮಹಿಳೆಯ ವಿಭಾಗದಲ್ಲಿ ಮಡಿಕೆ ಹೊಡೆಯುವ ಸ್ಪರ್ಧೆ, ಮೂರು ಕಾಲಿನ ಓಟ, ಬಾಲಕರ ವಿಭಾಗದಲ್ಲಿ ಮಡಿಕೆ ಹೊಡೆಯುವ ಸ್ಫರ್ಧೆ, 100ಮೀ ಓಟ, ಉಪ್ಪು ಮುಡಿ ಓಟ, ಬಾಲಕಿಯರ ವಿಭಾಗದಲ್ಲಿ ಮಡಿಕೆ ಹೊಡೆಯುವ ಸ್ಫರ್ಧೆ, 100ಮೀ ಓಟ, ಪಾಲೆದ ಗೊಬ್ಬು ಸ್ಪರ್ಧೆಗಳು ಜರಗಿದವು.