ನಂದಳಿಕೆ : ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಹೊಸತನದ ಕಾರ್ಯಕ್ರಮಗಳ ಮೂಲಕ ಸಂಘ ಸಂಸ್ಥೆಗಳಲ್ಲಿ ಯುವ ಜನತೆ ಹೆಚ್ಚಾಗಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಕೌಟುಂಬಿಕ ಮನೋಭಾವನೆ ವೃದ್ಧಿಯಾಗುತ್ತದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಬೋಳ ಬೀರೊಟ್ಟಿನಲ್ಲಿ ಆದಿತ್ಯವಾರ ಜರಗಿದ 23ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಕುಟುಂಬೋತ್ಸವ” ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಾಸ್ಯ, ಚಿಂತನ, ನೃತ್ಯ, ಗಾಯನ, ವಿವಿಧ ಮನೋರಂಜನಾ ಸ್ಪರ್ಧೆಗಳು ಜರಗಿದವು.
ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಬೋಳ ಉದಯ ಅಂಚನ್, ಪೂರ್ವಾಧ್ಯಕ್ಷ ರಘುವೀರ್ ಶೆಟ್ಟಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ರಾಝೇಶ್ ಕೋಟ್ಯಾನ್ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಆರತಿ ಕುಮಾರಿ, ಹರಿಣಾಕ್ಷಿ, ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪದ್ಮಶ್ರೀ, ಪುಷ್ಪ ಕುಲಾಲ್, ರಾಜೇಂದ್ರ ಶೆಟ್ಟಿಗಾರ್, ಸಂಧ್ಯಾ ಶೆಟ್ಟಿ, ಸುದರ್ಶನ್ ಕುಂದರ್, ಸುಲೋಚನಾ ಕೋಟ್ಯನ್, ಸುರೇಶ್ ಅಬ್ಬನಡ್ಕ, ವೀಣಾ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರಿದ್ದರು.