ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಅವರಿಗೆ ಸನ್ಮಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನಿಕಟ ಪೂರ್ವ ಕಾರ್ಯದರ್ಶಿ, ಅಂತರಿಕ ಲೆಕ್ಕಪರಿಶೋಧಕರು, ಮಾಜಿ ಕೋಶಾಧಿಕಾರಿಯಾಗಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ದಶಮಾನೋತ್ಸವ ವರ್ಷದ ಕಾರ್ಯದರ್ಶಿ, ಹಲವಾರು ಕಾರ್ಯಕ್ರಮಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು ಉದ್ಯೋಗದ ನಿಮಿತ್ತ ವಿದೇಶ ಪ್ರಯಾಣ ಬೆಳೆಸುತ್ತಿರುವ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
 ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸತೀಶ್ ಪೂಜಾರಿ, ಉದಯ ಅಂಚನ್, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ನಂದೀಶ್, ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಆರತಿ ಕುಮಾರಿ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್, ಅಶ್ವಿನಿ ಪೂಜಾರಿ, ಮಂಜುನಾಥ ಆಚಾರ್ಯ, ರಾಜೇಂದ್ರ ಶೆಟ್ಟಿಗಾರ್,  ಮೊದಲಾದವರು ವೇದಿಕೆಯಲ್ಲಿದ್ದರು.
ಸಂಘದ ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.