

ಕುಂದಾಪುರದ ವಿ.ಕೆ.ಎಂ. ಆತ್ರಾಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ತುಳಸಿ ವಿದ್ಯಾಮಂದಿರ, ಹಳ್ನಾಡು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸಾಕ್ಷರ್ ಆರ್. ಶೆಟ್ಟಿ ಅವರು ಟ್ರೆಡಿಷನಲ್ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 7ನೇ ತರಗತಿಯ ಆಶಿಕ್ ಅವರು ಆರ್ಟಿಸ್ಟಿಕ್ ಸಿಂಗಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಹಾಗೆಯೇ, 8ನೇ ತರಗತಿಯ ಶಶಾಂಕ್ ಮತ್ತು 9ನೇ ತರಗತಿಯ ಸುಶಾನ್ ಅವರು ರಿದಮಿಕ್ ಪೇರ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀಯುತ ಕೃಷ್ಣರಾಯ ಶಾನುಭೋಗ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಷ್ಮಾ ಪ್ರದೀಪ್, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

