

ಶಿರೂರು : ಉಡುಪಿಯ ಕಟಪಾಡಿಯಲ್ಲಿ ಆ.16ರಂದು KEN–MABUNI SHITO-RYU KARATE SCHOOL OF INDIA ವತಿಯಿಂದ R.V. Construction ಸಹಯೋಗದಲ್ಲಿ ಆಯೋಜಿಸಲಾಗಿದ್ದ COMPETE 5.0 – 3rd Invitational National Level Karate Championshipನಲ್ಲಿ ಶಿರೂರಿನ ಜ್ಞಾನದಾ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಚಾಂಪಿಯನ್ಶಿಪ್ನ ಕುಮಿಟೆ ವಿಭಾಗದಲ್ಲಿ ಜ್ಞಾನದಾ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ಸಾಕ್ಷಾತ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಹಾಗೂ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೇ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ನಿಖಿಲ್ ಅವರು ಉತ್ತಮ ಪ್ರದರ್ಶನ ನೀಡಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.
ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಾದ ಸಾಕ್ಷಾತ್ ಹಾಗೂ ನಿಖಿಲ್ ಅವರನ್ನು ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಅವರು ಟ್ರೋಫಿ ಹಾಗೂ ಪ್ರಮಾಣಪತ್ರ ನೀಡಿ ಅಭಿನಂದಿಸಿದರು.
ಈ ಪ್ರತಿಭಾವಂತ ವಿದ್ಯಾರ್ಥಿಗಳಿಗೆ MUKEN KAI KARATE DO FEDERATION OF INDIAಯ ವಿಜಯ್ ಶೆಟ್ಟಿ, ನವೀನ್ ಪಟ್ವಾಲ್ ಹಾಗೂ ಧನರಾಜ್ ಅವರು ಕರಾಟೆ ತರಬೇತಿ ನೀಡುತ್ತಿದ್ದಾರೆ. ತರಬೇತುದಾರರ ಮಾರ್ಗದರ್ಶನ, ವಿದ್ಯಾರ್ಥಿಗಳ ನಿರಂತರ ಅಭ್ಯಾಸ, ಶಿಸ್ತು, ಪರಿಶ್ರಮ ಹಾಗೂ ಕ್ರೀಡಾ ಮನೋಭಾವವೇ ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಜ್ಞಾನದಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಸಾಕ್ಷಾತ್ ಹಾಗೂ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ ನಿಖಿಲ್ ಅವರು ಜ್ಞಾನದಾ ಶಿಕ್ಷಣ ಸಂಸ್ಥೆಯ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿಯನ್ನು ಮೂಡಿಸಿದ್ದಾರೆ.



