

ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದು ಉತ್ತಮ ಸಾಧನೆಗೈದಿದ್ದಾರೆ.
ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ಹದಿನಾರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೆರ್ಗಡೆಗೊಂಡಿದ್ದಾರೆ.
ಚೇತನ್ ಯೆರಬೋವಿ 610 (97.60%) ಅಂಕಗಳಿಸುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ.
ಉಳಿದಂತೆ ವಿದ್ಯಾರ್ಥಿಗಳಾದ ರಾಕೇಶ್ ಚಂದ್ರ ನಾಯಕ್- 598 (95.68) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ನುಮಾ ಸುರಯ್ಯಾ 587 (93.82) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಅಂಕಗಳೊಂದಿಗೆ ಉತಿರ್ಣಾರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.




