ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ ಸಮುಧಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ನಿರೀಕ್ಷೆಗಳಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಇಲಾಖೆಯ ಮುಖ್ಯಸ್ತರು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಪ್ರಸ್ತುತ 2023ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ ವಿವಿಧ ಇಲಾಖೆಗಳಿಂದ ನಿಗಧಿಪಡಿಸಿರುವ ಗುರಿಗಳಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಗೆ ಒಟ್ಟು 16739.33 ಲಕ್ಷಗಳು ಹಂಚಿಕೆಯಾಗಿದ್ದು ಒಟ್ಟು
811.89 ಲಕ್ಷಗಳು ಬಿಡುಗಡೆಯಾಗಿರುತ್ತದೆ.
ಗಿರಿಜನ ಉಪ ಯೋಜನೆಯಡಿಯಲ್ಲಿ ಒಟ್ಟು 5018.94 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 1553.51 ಲಕ್ಷಗಳು ಬಿಡುಗಡೆಯಾಗಿರುತ್ತದೆ. ಈ ಪೈಕಿ 2023 ನವೆಂಬರ್ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ.71 ಹಾಗೂ ಗಿರಿಜನ ಉಪಯೋಜನೆಯಡಿ ಶೇ.68 ಮೊತ್ತದ ಅನುದಾನ ವೆಚ್ಚ ಮಾಡಲಾಗಿದೆ. ಪ್ರಸ್ತುತ 3ನೇ ತ್ರೈಮಾಸಿಕದ ಅನುದಾನದ ಬಿಡುಗಡೆಯಾಗಿದ್ದು, ಶೀಘ್ರವಾಗಿ ಶೇ.100 ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಮೂಲಕ ರಾಜ್ಯದ ಪ್ರಗತಿಯಲ್ಲಿ ಜಿಲ್ಲೆಯ ಸಾಧನೆಯು ಉನ್ನತ ಮಟ್ಟ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ಸುಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಸೌಮ್ಯ ವರ್ಣಿಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.