ಶ್ರೀನಿವಾಸಪುರ: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಅಟಲ್ ಭೂಜಲ್ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಂತುರು ಹಾಗೂ ಹನಿ ನೀರಾವರಿ ಘಟಕಗಳಿಗೆ ಸಣ್ಣ ಮತ್ತು ಅತಿ ಸಣ್ಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರಷ್ಟು ಮತ್ತು ದೊಡ್ಡ ರೈತರಿಗೆ ಶೇ.45 ರಷ್ಟು ಸಹಾಯ ಧನ ನೀಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸವಲತ್ತು ಪಡೆಯಲು ಇಚ್ಛಿಸುವ ರೈತರು ನಿಗದಿತ ನಮೂನೆಯಲ್ಲಿ ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಭಾವಚಿತ್ರ, ಕೃಷಿ ಬೆಳೆ ದೃಢೀಕರಣ, ರೂ.20 ರಛಾಪಾ ಕಾಗದ, ಕೊಳವೆ ಬಾವಿ ದೃಢೀಕರಣ, ಸಣ್ಣ ಅಥವಾ ಅತಿಸಣ್ಣ ಪ್ರಮಾಣ ಪತ್ರ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಿಂದ ನಿರಪೇಕ್ಷಣಾ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಲಗತ್ತಿಸಿ, ಸಂಬಂಧಿಸಿದ ಹೋಬಳಿ ರೈತ ಸಂಪರ್ಕ ಕೇಂದ್ರಲ್ಲಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವಿಚಾರಿಸುವಂತೆ ಕೋರಿದ್ದಾರೆ.