

ಬೆಂಗಳೂರು, ಮೇ 19; ರಾಜ್ಯದಲ್ಲಿ ಶಾಲಾ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ತಿಳಿದುಬಂದಿದೆ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಾಯುಭಾರ ಕುಸಿತದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು, ಜಿಲ್ಲಾಡಳಿತವು ವಿವಿಧ ಪ್ರದೇಶಗಳಿಗೆ ನೇಮಿಸಲಾದ ಇನ್ಸಿಡೆಂಟ್ಮಾಂಡರ್ ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ತತ್ಕ್ಷಣ ಸ್ಪಂದಿಸಬೇಕು,
ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕದಲ್ಲಿರಬೇಕು. ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹಾಗು ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿ ತೀರ, ಸಮುದ್ರ ತೀರಕ್ಕೆ ತೆರಳಬಾರದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದರಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.