JANANUDI.COM NETWORK
ಮಂಗಳೂರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ ಸುಮಾರು 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 3 ದಿನ ಭಾರೀ ಮಳೆ ನಿರೀಕ್ಷರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನೆರೆಯ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆ ಇದೆ, ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ತಿಳಿಸಿದೆ..
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುಂಜಾಗ್ರತೆ ನೀಡಿದೆ.