ಕೊರೊನಾ ಸೋಂಕಿನಿಂದ ರಕ್ಷಣೆಗೆ ಎಲ್ಲ ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಳ್ಳಬೇಕು-ಡಿ.ಶೇಖರರೆಡ್ಡಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಎಲ್ ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅಂಗ ವಿಕಲರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. .
ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್.ರಾಜೇಶ್ವರಿ, ಆರೋಗ್ಯ ತಪಾಸಣಾಧಿಕಾರಿ ಪೃಥ್ವಿರಾಜ್, ಗೋವಿಂದಮ್ಮ, ನಾಗೇಶ್ ಇದ್ದರು.
ಲಸಿಕೆ ನೀಡಿಕೆ: ಪಟ್ಟಣದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬೆಸ್ಕಾಂ ಸಿಬ್ಬಂದಿಗೆ ಕೋವಿಡ್ ವಿರುದ್ಧ ಲಸಿಕೆ ನೀಡಲಾಯಿತು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಹಾಕಿಸಿಕೊಂಡರು.