ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.
ಪಟ್ಟಣದ ಬಿಇಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳಲ್ಲಿ 2772 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲ್ಲೂಕಿಗೆ ವಲಸೆ ಬಂದಿರುವ 12 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾ
ಡಲಾಗಿದೆ. ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಸಿಬ್ಬಂದಿಯನ್ನು ಮಾತ್ರ ಪರೀಕ್ಷಾ ಕಾರ್ಯಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಆರೋಗ್ಯ ಕಾರ್ಯಕರ್ತರು ಉಷ್ಣಾಂಶ ಪರೀಕ್ಷೆ ನಡೆಸುವರು, ವಿದ್ಯಾರ್ಥಿಗಳು ಕುಡಿಯಲು ಬಿಸಿ ನೀರು ತರುವಂತೆ ಸೂಚಿಸಲಾಗಿದೆ. ಎಸ್‍ಒಪಿ ನಿಯಮಗಳನ್ನು ಪಾಲಿಸಲಾಗುತ್ತಿದೆ. ಪರೀಕ್ಷೆ ಬರೆಯುವ ಬಗ್ಗೆ ಈಗಾಗಲೆ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಮಾರ್ಗದರ್ಶನ ಮಾಡಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು, ಉತ್ಸಾಹದಿಂದ ಪರೀಕ್ಷೆ ಬರೆಯಬೇಕು. ಪೋಷಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
3
ಶ್ರೀನಿವಾಸಪುರದಲ್ಲಿ ಈಚೆಗೆ ಕೋವಿಡ್‍ನಿಂದ ನಿಧನರಾದ ಪತ್ರಕರ್ತ ನಾಗೇಂದ್ರ ಅವರ ಕುಟುಂಬಕ್ಕೆ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಶನಿವಾರ ರೂ.50 ಸಾವಿರದ ಚೆಕ್ ನೀಡಿದರು. ಮುಖಂಡರಾದ ಜಯರಾಮರೆಡ್ಡಿ, ಅಶೋಕರೆಡ್ಡಿ, ಎಸ್.ಶಿವಮೂರ್ತಿ ಇದ್ದರು.
4
ಶ್ರೀನಿವಾಸಪುರ ಹೊರವಲಯದ ಗವಿಘಟ್ಟ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.
5
ಪಟ್ಟಣದ ವಿದ್ಯುತ್ ಗಣಪತಿ ದೇವಾಲಯದಲ್ಲಿ ಶನಿವಾರ ದೇವಾಲಯದ ವಾರ್ಷಿಕೋತ್ಸವದ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.