

ಶ್ರೀನಿವಾಸಪುರ: ಪಟ್ಟಣದಲ್ಲಿ ಸ್ಥಳೀಯ ಕೆಎಸ್‍ಆರ್‍ಟಿಸಿ ನೌಕರರ ಸಂಘದ ವತಿಯಿಂದ ಗುರುವಾರ ಅಂಬೇಡ್ಕರ್ ದಿನಾಚರಣೆ ಆಚರಿಸಲಾಯಿತು.
ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಉದ್ಯಾನದಲ್ಲಿನ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳ್ಳಿ ರಥದಲ್ಲಿ ಅಳವಡಿಸಲಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಸಂಘದ ನೌಕರರು ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಹಿ ಹಂಚಿ ಜಯಘೋಷ ಮಾಡಿದರು.