ಕೋಟೇಶ್ವರ:ಸರಕಾರಿ ಶಾಲೆಯ ಅಭಿವೃದ್ದಿಯಲ್ಲಿ ದಾನಿಗಳು,ಪೋಷಕರು, ಹಳೆ ವಿದ್ಯಾರ್ಥಿಗಳು ಕೈ ಜೋಡಿಸಿದಾಗ ಅಭಿವೃದ್ದಿ ಸಾಧ್ಯ.ಬೀಜಾಡಿ ಮೂಡು ಶಾಲೆ ಅಮೃತ ಮಹೋತ್ಸವದ ಈ ಹೊತ್ತಿನಲ್ಲಿ ಇನ್ನೂ ಎತ್ತರಕ್ಕೆ ಏರಲಿ ಎಂದು ಕುಂದಾಪುರದ ಶಾಸಕ ಎ.ಕಿರಣಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಸಂಭ್ರಮ ‘ಪರಿಕ್ರಮ-2024’ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾ.ಪಂ.ಅಧ್ಯಕ್ಷ ಪ್ರಕಾಶ ಜಿ.ಪೂಜಾರಿ ವಹಿಸಿದ್ದರು. ಶಾಲಾ ವಾಹನದ ಕೀಯನ್ನು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಶಾಲೆಗೆ ಹಸ್ತಾಂತರಿಸಿದರು.ಮಾರಣಕಟ್ಟೆ ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ ಪ್ರವರ್ತಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಶಾಲೆಯಲ್ಲಿ ಹಿಂದೆ ಸೇವೆ ಸಲ್ಲಿಸಿದ ಗುರುಗಳನ್ನು ಸನ್ಮಾನಿಸಿದರು.ಹೊಟೇಲ್ ಉದ್ಯಮಿ ರಾಮಚಂದ್ರ ರಾವ್ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು.ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ ಎಂ, ಸಿಆರ್ಪಿ ಪ್ರಕಾಶ್ ಎಚ್.ಎನ್,ಶಾಲಾ ಮುಖ್ಯ ಶಿಕ್ಷಕಿ ಪ್ರವೀಣಾ ಶೆಟ್ಟಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಾ ಸಂಜನಾ, ಖುಷಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿಗಳಾದ ಗಣೇಶ ಕಾಂಚನ್, ರಾಘವೇಂದ್ರ ಅಮೀನ್ ಅವರನ್ನು ಗುರುತಿಸಲಾಯಿತು.
ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಕೃಷ್ಣ ಬಾಯರಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ ಗಾಣಿಗ, ಅಮೃತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಪ್ರಶಾಂತ್ ತೋಳಾರ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಅಮೀನ್, ವಿದ್ಯಾರ್ಥಿ ನಾಯಕ ಮಾ.ಪ್ರೀತಮ್ ಉಪಸ್ಥಿತರಿದ್ದರು.
ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ಕುಮಾರ್ ಬಿ.ಆರ್ ವಂದಿಸಿದರು. ಶಾಲಾ ಶಿಕ್ಷಕಿಯರಾದ ಮಂಜುಳಾ, ಅಶ್ವಿನಿ, ಸುಮಾನ ಬಹುಮಾನಿತರ ಪಟ್ಟಿ ವಾಚಿಸಿದರು. ಹಳೆ ವಿದ್ಯಾರ್ಥಿ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕøತಿ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಚಿಣ್ಣರಿಂದ ಚಿಣ್ಣರ ಚಿಲಿಪಿಲಿ, ಹಳೆ ವಿದ್ಯಾರ್ಥಿಗಳಿಂದ ನೃತ್ಯಾಮೃತ, ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಯಕ್ಷಗಾನ ಅಭಿಮನ್ಯು ಕಾಳಗ ಪ್ರದರ್ಶನಗೊಂಡಿತು.