
ಕುಂದಾಪುರ, ಡಿ. 3: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ ಸಂತ ಜೋಸೆಫ್ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ 03-12-2022 ರಂದು ನಡೆಯಿತು. ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡುತ್ತಾ “ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ದೃಢತೆಗೆ ಸಹಕಾರಿಯಾಗುತ್ತದೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ” ಎಂದರು. ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಕ್ರೀಡೋತ್ಸವದ ಅಧ್ಯಕ್ಷರಾದ ಸಿಸ್ಟರ್ ಸಂಗೀತಾ ರವರು ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯ ನುಡಿಗಳನ್ನು ಆಡಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಪ್ರೇಮಿಕಾ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ರವಿ ಪೂಜಾರಿ ಅವರು ಉಪಸಿತರಿದ್ದರು. ಶಿಕ್ಷಕಿ ಶ್ರೀಮತಿ ಸ್ವಾತಿ ಅವರು ವಂದಿಸಿದರು. ದೈಹಿಕ ಶಿಕ್ಷಕರಾದ ಮೈಕಲ್ ಇವರು ನಿರೂಪಿಸಿದರು

ಕುಂದಾಪುರ, ಡಿ. 3: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ ಸಂತ ಜೋಸೆಫ್ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ 02-12-2022 ರಂದು ನಡೆಯಿತು. ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡುತ್ತಾ “ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ದೃಢತೆಗೆ ಸಹಕಾರಿಯಾಗುತ್ತದೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ” ಎಂದರು. ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಕ್ರೀಡೋತ್ಸವದ ಅಧ್ಯಕ್ಷರಾದ ಸಿಸ್ಟರ್ ಸಂಗೀತಾ ರವರು ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯ ನುಡಿಗಳನ್ನು ಆಡಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಪ್ರೇಮಿಕಾ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ರವಿ ಪೂಜಾರಿ ಅವರು ಉಪಸಿತರಿದ್ದರು. ಶಿಕ್ಷಕಿ ಶ್ರೀಮತಿ ಸ್ವಾತಿ ಅವರು ವಂದಿಸಿದರು. ದೈಹಿಕ ಶಿಕ್ಷಕರಾದ ಮೈಕಲ್ ಇವರು ನಿರೂಪಿಸಿದರು






