

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಲಹೆಗಾರರಾದ ಮಂಜುಳಾ ಶೆಟ್ಟಿ ಮಾತನಾಡಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಹಿಸಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.
ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡೋ.ಸರೋಜ ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
