ಶಿವಮೊಗ್ಗ: ತಮ್ಮಪಾಡಿಗೆ ಕೆಲಸಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಯುವತಿ ಸಾವಿಗೆ ರೋಚಕ ತಿರುವು ಪಡೆದುಕೊಂಡಿದ್ದು ಶವ ಪತ್ತೆಯಾಗಿದೆ. ಜೂನ್ 30 ರ೦ದು ಕಾಣೆಯಾಗಿದ್ದ ಆಗುಂಬೆಯ ಕುಶಾಲ್ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಇನ್ನು ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಪೂಜಾಳ ಸ್ನೇಹಿತನನ್ನು ವಿಚಾರನೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ
ಒಪ್ಪಿಕೊಂಡಿದ್ದಾನೆ ಎಂದು ತಿಳಿದಬಂದಿದೆ. ಕತ್ತು ಹಿಸುಕಿ ಕೊ೦ದು, ನಂತರ ಹೊಂಡದಲ್ಲಿ ಶವ ಹಾಕಿದ್ದಾಗಿ ನಾಲೂರಿನ ಮಣಿ ಪೊಲೀಸರ ವಿಚಾರಣ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.