

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಇವರು ಪಕ್ಷದ ಸಕ್ರಿಯ ಸದಸ್ಯರಾಗಿದ್ದು ಗ್ರಾಮಪಂಚಾಯತ್ ಸದಸ್ಯರಾಗಿ, ಕಾರ್ಕಳ ಬ್ಲಾಕ್ ಮಹಿಳಾ ಅಧ್ಯಕ್ಸರಾಗಿ ಸೇವೆ ಸಲ್ಲಿಸಿರುವ, ಅವರ ಪಕ್ಷದಲ್ಲಿನ ಕಾರ್ಯದಕ್ಷತೆ, ಸಮಾಜ ಸೇವೆಯನ್ನು ಗುರುತಿಸಿ ಪಕ್ಷವು ಅವರಿಗೆ ಈ ಹುದ್ದೆಯನ್ನು ನೀಡಿದೆ.