

ಅಂಕೋಲಾ:ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಕಣ್ಮರೆಯಾಗಿದ್ದರು. ಐವರ ಪೈಕಿ ಮೂವರ ಮೃತದೇಹ ಪತ್ತೆಯಾಗಿತ್ತು. ಲಕ್ಷ್ಮಣ ನಾಯ್ಕ, ಪತ್ನಿ ಶಾಂತಿ ನಾಯ್ಕ, ಮಗ ರೋಶನ್ ನಾಯ್ಕ ಮೃತದೇಹ ಪತ್ತೆಯಾಗಿತ್ತು. ಇದೀಗ ಬಾಲಕಿ ಅವಂತಿಕಾ ಮೃತದೇಹ (6) ಕೂಡ ಪತ್ತೆಯಾಗಿದ್ದು, ಗ್ಯಾಸ್ ಟ್ಯಾಂಕರ್ ಚಾಲಕ ಮುರುಗನ್ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿದೆ.
ಗಂಗಾವಳಿ ನದಿಯಲ್ಲಿ ಇಬ್ಬರು ಲಾರಿ ಚಾಲಕರ ಮೃತದೇಹ ಸಿಕ್ಕಿದೆ. ಅದರಲ್ಲೊಬ್ಬರನ್ನು ಗ್ಯಾಸ್ ಟ್ಯಾಂಕರ್ ಚಾಲಕ ಮುರುಗನ್ ಮೃತದೇಹ ಎಂದು ಗುರುತಿಸಲಾಗಿದೆ. ಶಿರೂರು ಗುಡ್ಡ ಕುಸಿತದ ವೇಳೆ ಲಾರಿ ಸಮೇತ 45 ವರ್ಷದ ಮುರುಗನ್ ನೀರಿಗೆ ಬಿದ್ದಿದ್ದರು ಅವರದೇ ಮ್ರತದೇಹ ಎಂದು ಅಂದಾಜಿಸಲಾಗಿದೆ.
ಮತ್ತೋರ್ವ ವ್ಯಕ್ತಿಯ ಮೃತದೇಹ ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಅಂಕೋಲಾ ತಾಲೂಕಿನ ಮಂಜಗುಣಿ ಬಳಿಯಲ್ಲಿ ಸಿಕ್ಕಿದೆ. ಇಲ್ಲಿಯವರೆಗೆ 7 ಮೃತದೇಹ ಸಿಕ್ಕಿದೆ. ಸದ್ಯ ನದಿಯಲ್ಲಿ ಹುಡುಕಾಟದ ಕಾರ್ಯಾಚರಣೆ ಮುಂದುವರೆದಿದೆ.
