ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” ವು 26,27,28 ಮಾರ್ಚ್ 2024ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 24ರಂದು “ಜಾನಪದ ಲೋಕ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂದ್ಕಲಾ ಅವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಾರ್ಚ್ 27ರಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜು ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ಶಾಂತಾರಾಮ್.ಎ. ಭಂಡಾರ್ಕರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಎಸ್.ನಾಯಕ್, ಹಿರಿಯ ಪಾಲುದಾರರು, ಎಸ್.ಎಸ್.ನಾಯಕ್ ಮತ್ತು ಅಸೋಸಿಯೇಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್, ಬೆಂಗಳೂರು ಮತ್ತು ಮಂಗಳೂರು ಇವರು ಆಗಮಿಸಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ.
ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು “ಗುರುದಕ್ಷಿಣೆ” ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾರ್ಚ್ 28ರಂದು ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಎಸ್.ಶ್ರೀಹರಿ ಚಾತ್ರ,ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪೋಲೀಸ್ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಕೆ.ಆರ್. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿಗಳಾದ ಸಂದೇಶ್ ಶೆಟ್ಟಿ ಸಳ್ವಾಡಿ ಇವರು ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ .