ಮೂಡ್ಲಕಟ್ಟೆ ಎಂಐಟಿಕೆ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಚಿಪ್ಸಿ ಐ.ಟಿ ಸೆಲೂಶನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಾಂಭವಿ ಭಂಡಾರಕರ್ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಕೌಶಲ್ಯಗಳ ಜೊತೆಗೆ ಉತ್ತಮ ಅಂಕ ತೆಗೆಯುವುದು ಮುಖ್ಯ ಎಂದರು. ಸಂಸ್ಥೆಯ ಧ್ಯೇಯ ವಾಕ್ಯವಾದ “ಸತ್ಯಂವದ ಧರ್ಮಂ ಚರ” ಬಹಳ ಅರ್ಥಪೂರ್ಣವಾಗಿದೆ ಎಂದರು. ಯಾವುದೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗೆ ಭಡ್ತಿ ಪಡೆಯಲು ಸಂಸ್ಥೆಯ ಅಭಿವೃಗಾಗಿ ಮಾಡಿದ ನಿರಂತರ ಕೆಲಸವೇ ಸಹಾಯಕಾರಿ, ಹೊರತು ಉನ್ನತಾಧಿಕಾರಿಗಳ ಕುರಿತು ಮಾಡಿದ ಒಣ ಹರಟೆಗಳಲ್ಲ ಎಂದು ಮಾರ್ಮಿಕವಾಗಿ ನುಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ಮಾತನಾಡಿ ವಿದ್ಯಾರ್ಥಿಗಳು ಮಾಡಿದ ರಾಷ್ಟ್ರಮಟ್ಟದ ಸಾಧನೆಯನ್ನು ಹಾಗೂ ಉನ್ನತ ಮಟ್ಟದ ಕ್ಯಾಂಪಸ್ ಪ್ಲೇಸ್‍ಮೆಂಟ್ ಹೊಂದಿದ್ದಕ್ಕೆ ಸಂತೋಷವ್ಯಕ್ತಪಡಿಸಿದರು. ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜರವರು ಕಾಲೇಜಿನ ವಾರ್ಷಿಕ ವರದಿಯನ್ನು ಓದಿದರು. ತದನಂತರ ವಿದ್ಯಾರ್ಥಿಗಳ ಶೈಕ್ಷಣಿಕ, ಕ್ರೀಡಾ, ಸಾಂಸ್ಕøತಿಕ ಸಾಧನೆಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಐಎಂಜೆ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಪ್ರೊ. ದೋಮಚಂದ್ರಶೇಖರ್ರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬ್ರಾಂಡ್‍ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗಡೆ, ಡೀನ್ ಟಿಪಿಐಆರ್ ಪ್ರೊ. ಅಮೃತಮಾಲಾ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿವೃಂದದವರು ಭಾಗವಹಿಸಿದ್ದರು.
ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರೊ. ಅಕ್ಷತಾ ನಾಯಕ್‍ರವರು ಸ್ವಾಗತಿಸಿದರು. ಕು. ಫಾತಿಮಾ ತಹಸಿರ್‍ರವರು ಮುಖ್ಯ ಅತಿಥಿಯನ್ನು ಪರಿಚಯಿಸಿದರು ಮತ್ತು ಕಾರ್ಯಕ್ರಮ ನಿರೂಪಿಸಿದರು ಡಾ. ನಿಖಿಲಾ ಪೈ ರವರು ವಂದನಾರ್ಪಣೆಗೈದರು.