ಕೋಟ: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿದ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದು, ಇದು ವಡ್ಡರ್ಸೆಯ ಅಭಿಮಾನಿಗಳಿಗೆ, ಹುಟ್ಟೂರಿನವರಿಗೆ ಸಂಭ್ರಮ ತಂದಿದೆ. ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪಿಸಿ ಪ್ರತಿ ವರ್ಷ ನೀಡಲಾಗುವ ಮಹತ್ವದ ಘೋಷಣೆ ಮಾಡಿರುವುದು ವಡ್ಡರ್ಸೆ ರಘುರಾಮ ಶೆಟ್ಟಿ ಅಭಿಮಾನಿಗಳಿಗೆ ಖುಷಿ ತಂದಿದೆ.
ನಮ್ಮೂರಿನ ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿದ ಮಹತ್ವದ ಘೋಷಣೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಂಬಂಧಿಸಿದಂತೆ ಮಾಡಿರುವುದು ಸಂತಸ ತಂದಿದೆ ಎಂದು ಕೊತ್ತಾಡಿ ಶರತ್ ಶೆಟ್ಟಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.ಬಾಕ್ಸ್ ಮಾಡಿ ಹಾಕಿ
ಬ್ರಹ್ಮಾವರ ಪತ್ರತಕರ್ತರ ಸಂಘಕ್ಕೆ ಹರ್ಷ
ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಡ್ಡರ್ಸೆ ಅವರ ಹೆಸರು ಶಾಶ್ವತವಾಗಿ ಉಳಿಯಬೇಕೆನ್ನುವ ದೃಷ್ಟಿಯಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ರಾಜ್ಯ ಮಟ್ಟದ ಪತ್ರಿಕೋದ್ಯಮ ಪ್ರಶಸ್ತಿಯನ್ನು ಕಳೆದ 7 ವರ್ಷಗಳ ಹಿಂದೆ ಸ್ಥಾಪಿಸಿದ್ದು, ವಿಜಯಲಕ್ಷ್ಮೀ ಶಿಬರೂರು, ರವಿ ಬೆಳೆಗೆರೆ, ಜೋಗಿ, ಚಂದ್ರಶೇಖರ ಪಾಲತ್ತಾಡಿ, ಗಂಗಾಧರ ಹಿರೇಗುತ್ತಿ, ಯು.ಎಸ್.ಶೆಣೈ, ವಿಶ್ವೇಶ್ವರ ಭಟ್ ಅವರಿಗೆ ಪ್ರದಾನ ಮಾಡಲಾಗಿದ್ದು, ಇದೀಗ ಸರಕಾರ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಘೋಷಿಸಿರುವುದು ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತ ಸಂಘಕ್ಕೆ ಹರ್ಷ ತಂದಿದೆ ಎಂದು ಸಂಘದ ಅಧ್ಯಕ್ಷ ಅಚ್ಲಾಡಿ ರಾಜೇಶ್ ಗಾಣಿಗ ತಿಳಿಸಿದ್ದಾರೆ.