ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ 5 ದಿನಗಳ ಕಾಲ ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿನ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಇನ್ನೂ ಮೂರು ದಿನ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನಂತರದ ನಾಲ್ಕು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರಿ ಮಳೆ ಮತ್ತು ನಿರಂತರ ಗಾಳಿಯು 30 ರಿಂದ ಕಿಲೋಮೀಟರ್ ಪ್ರತಿಗಂಟೆಗೆ ತಲುಪಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ನಿರಂತರ ಗಾಳಿ ಬೀಸಲಿದೆ.
ಕಾರವಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9, ಉಡುಪಿ ಜಿಲ್ಲೆಯ ಕೋಟದಲ್ಲಿ ಹಾಗು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 7, ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಮತ್ತು ಕುಂದಾಪುರಲ್ಲಿ 6, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ 6, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಕುಮಟಾ, ಜೋಯಿಡಾ, ಗೇರ್ಸೊಪ್ಪ, ಗೋಕರ್ಣದಲ್ಲಿ, ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ 5 ಸೆ ಮೀ ಮಳೆಯಾಗಿದೆ.