ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ ಮದನಪಲ್ಲಿ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ಆಂಧ್ರಪ್ರದೇಶದ ಮದನಪಲ್ಲಿಗೆ ಟಾಟಾ ಸುಮೋ ವಾಹನದಲ್ಲಿಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ರೂ.1.20 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆಂಧ್ರಪ್ರದೇಶದ ಎಸ್.ಮೌಲಾನಾ, ಎಂ.ಜಿ.ಬೀವುಲ್ಲಾ ಬೇಗ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಅಬಕಾರಿ ಸರ್ಕಲ್ ಇನ್ಸ್‍ಪೆಕ್ಟರ್ ಟಿ.ಎಸ್.ರೋಹಿತ್, ಸಬ್ ಇನ್ಸ್‍ಪೆಕ್ಟರ್ ಕೆ.ಸಿ.ಕೃಷ್ಣಪ್ಪ, ಸಿಬ್ಬಂದಿ ಕೆ.ಆರ್.ಮಂಜುನಾಥ್ ಎನ್.ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.

