ಕೋಲಾರ,ಏ.30: ಪೆನ್ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಲು ಮತ್ತು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಳೆದ ಕೆಲವು ದಿನಗಳಿಂದ ಪ್ರಭಾವಿ ರಾಜಕಾರಣಿಯೊಬ್ಬರದು ಎನ್ನಲಾದ ಆಶ್ಲೀಲ ಚಿತ್ರಗಳಿರುವ ಪೆನ್ಡ್ರೈವ್ಗಳನ್ನು ಹಾಸನದ ಬೀದಿ ಬೀದಿಗಳಲ್ಲಿ ಹಂಚಲಾಗುತ್ತಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸ್ಫ್ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು, ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರತೀದಿನ ಹೊಸ ಹೊಸ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿರುವ ವರದಿಗಳಿವೆ. ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ಪೆನ್ಡ್ರೈವ್ ಹೊರ ಬರುತ್ತದೆಯೋ, ಅದರಲ್ಲಿ ಯಾವೆ ಮಹಿಳೆಯ ಖಾಸಗಿ ಚಿತ್ರಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕ ಮತ್ತು ಕುತೂಹಲ ಎಲ್ಲೆಡೆ ಹರಡಿದೆ. ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಹಾಸನದ ಸಂಸದ, ಎನ್.ಡಿ.ಎ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೊಳೆನರಸೀಪುರದ ಶಾಸಕ ಎಚ್.ಡಿ.ರೇವಣ್ಣ ಅವರ ಮೇಲೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದ್ದು, ಅವರುಗಳನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕವಾಗಿ ಇಷ್ಟೆಲ್ಲಾ ಅನಾಹುತ ನಡೆದು ಆತಂಕ ಹರಡಿರುವಾಗ ಈ ಕುರಿತು ತಡವಾಗಿಯಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಇಡೀ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದು ಸ್ವಾಗತಾರ್ಹವಾಗಿದೆ. ಈಗಾಗಲೇ ಎಫ್ ಐ.ಆರ್ ನಲ್ಲಿ ಬಿಟ್ಟಿರುವ 354ಬಿ ಮತ್ತು 254ಸಿ ಕಾಯ್ದೆಗಳನ್ನು ಸೇರಿಸಬೇಕು ಮತ್ತು ಯಾವುದೇ ಒತ್ತಡಗಳಿಗೆ ಮಣಿಯದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ಮತ್ತು ನ್ಯಾಯವನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ವ್ಯಕ್ತಿಯ ಖಾಸಗಿ ಬದುಕಿನ ವಿಚಾರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಅಪರಾದವಾಗುತ್ತದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಲಾಭವನ್ನಷ್ಟೇ ಗುರಿಯಾಗಿಸಿಕೊಂಡು ಮಹಿಳೆಯರ ಖಾಸಗಿ ಬದುಕಿನ ಲೈಂಗಿಕ ಚಿತ್ರಗಳುಮತ್ತು ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸುವುದು ಅತ್ಯಂತ ಹೀನ ಕೃತ್ಯವಾಗಿದೆ.
ರಾಜಕೀಯ ಅಧಿಕಾರ, ಆಸ್ತಿ ಮತ್ತು ಜಾತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ಪ್ರಜ್ವಲ್ ರೇವಣ್ಣ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಿಸಿಕೊಂಡಿದ್ದಾನೆ. ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಮಹಿಳೆಯರನ್ನು ಈ ಕುಕೃತ್ಯಕ್ಕೆ ಅವನು ತನಗಿರುವ ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾನೆ ಎನ್ನುವುದೂ ಸ್ಪಷ್ಟವಾಗಿದೆ ಅವನು ತನ್ನ ಕಾಮತೃಷೆಗಾಗಿ ನೂರಾರು ಮಹಿಳೆಯರನ್ನು ಬಳಸಿಕೊಂಡು ಸಾವಿರಾರು ವೀಡಿಯೋಗಳನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎನ್ನುವ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದೆ. ಈ ದೃಶ್ಯಗಳಲ್ಲಿ ಅವನದೇ ಪಕ್ಷದ ಮಹಿಳಾ ಮುಖಂಡರು, ಮಹಿಳಾ ಕಾರ್ಯಕರ್ತೆಯರು, ಖಾಸಗಿ ಮತ್ತು ಸರ್ಕಾರಿ ಮಹಿಳಾ ನೌಕರರು ಹಾಗೂ ಅಧಿಕಾರಿಗಳು ಜೊತೆಗೆ ಮಹಿಳಾ ಪೆÇೀಲೀಸು ಅಧಿಕಾರಿಗಳೊಂದಿಗೆ ನಡೆಸಿರುವ ಲೈಂಗಿಕ ಚಟುವಟಿಕೆಗಳೂ ಇವೆ ಎನ್ನಲಾಗುತ್ತಿದೆ. ಅವನ ಮನೆಯ ಕೆಲಸ ಹೆಂಗಸಿನ ಮೇಲೂ ಬಲಾತ್ಕಾರವಾಗಿ ಅತ್ಯಾಚಾರ ನಡೆಸಿ ಆ ದೃಶ್ಯಗಳನ್ನೂ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಇಂತಹ ವಿಕೃತ ಮತ್ತು ವಿಕ್ಷಿಪ್ತ ಮನಸ್ಸಿನ ವ್ಯಕ್ತಿ ಜನಪ್ರತಿನಿಧಿಯಾಗಿ ಇರುವುದಿರಲಿ ನಾಗರಿಕ ಸಮಾಜದಲ್ಲಿ ಮುಕ್ತವಾಗಿ ಓಡಾಡಿಕೊಂಡಿರುವುದು ಬಹಳ ಅಪಾಯಕಾರಿಯಾದ ಮತ್ತು ಆತಂಕಕಾರಿಯಾದ ಸಂಗತಿಯಾಗಿದೆ. ಈತನ ಈ ಕುಕೃತ್ಯದಿಂದಾಗಿ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದರು.
ವಿಶ್ವ ಗುರು ಎಂದು ಹೇಳಿಕೊಳ್ಳುವ ನಮ್ಮ ಪ್ರಧಾನ ಮಂತ್ರಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಪತ್ತೆ ಹಚ್ಚಿ (SIಖಿ) ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಲು ಆಗ್ರಹಿಸುತ್ತಿದ್ದೇವೆ.
ಇಂತಹ ಹೀನ ಕೃತ್ಯ ನಡೆಸಿರುವ ವ್ಯಕ್ತಿಯ ಮತ್ತು ಕುಟುಂಬದ ರಾಜಕೀಯ ಪ್ರಭಾವ ಕೆಲಸ ಮಾಡಿರುವ ಸಾಧ್ಯತೆಯಿದೆ. ಆದರೆ ಯಾವ ಯಾವ ಒತ್ತಡಗಳ ಕಾರಣಕ್ಕೂ, ಕೆಲಸ ಕಾರ್ಯ ಮತ್ತು ಪ್ರಯೋಜನದ ಕಾರಣಕ್ಕೋ ಆತನಿಂದ ಲೈಂಗಿಕವಾಗಿ ಬಳಕೆಯಾಗಿ ವೀಡಿಯೋ ದೃಶ್ಯಗಳಲ್ಲಿ ಸೆರೆಯಾಗಿ ಸಾರ್ವಜನಿಕವಾಗಿ ಮಾನ ಕಳೆದುಕೊಳ್ಳುತ್ತಿರುವ ಮಹಿಳೆಯರು ಮತ್ತವರ ಕುಟುಂಬದ ಗೋಳು ಮಾತ್ರ ಹೇಳತೀರದಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕಿದೆ.
ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಹೊಳೆನರಸಿಪುರದ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಎಂಬುವವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ 2 ನಾವಿರಕ್ಕೂ ಹೆಚ್ಚು ಫೋಟೊ ವೀಡಿಯೋಗಳಿವೆ ಆ ಕುರಿತು ಬಿಜೆಪಿ ಹೈಕಮಾಂಡ್ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಪೆÇೀಲೀಸರು ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿದಲ್ಲಿ ಆ ವೀಡಿಯೋಗಳನ್ನು ಚಿತ್ರೀಕರಿಸಿರುವ ವ್ಯಕ್ತಿ ಯಾರು? ದೇವರಾಜೇಗೌಡರಿಗೆ ಆ ವೀಡಿಯೋಗಳನ್ನು ನೀಡಿರುವ ವ್ಯಕ್ತಿ ಯಾರು? ಎನ್ನುವುದು ಗೊತ್ತಾಗುತ್ತದೆ ಮತ್ತು ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದರೆ ಆ ವ್ಯಕ್ತಿ ಯಾರ್ಯಾರಿಗೆ ಈ ವೀಡಿಯೋಗಳನ್ನು ನೀಡಿದ್ದಾನೆ. ಹಾಗೂ ಯಾರು ಈ ವೀಡಿಯೋಗಳನ್ನು ಪೆನ್ಡ್ರೈವ್ ಮುಖಾಂತರ ಸಾರ್ವಜನಿಕರಿಗೆ ಹಂಚುತ್ತಿದ್ದಾರೆ ಎನ್ನುವುದು ತಿಳಿಯಲಿದೆ. ಆಗ ಇನ್ನುಮುಂದೆ ವೀಡಿಯೋಗಳು ಬಿಡುಗಡೆಯಾಗುವುದನ್ನು ತಡೆಯಬಹುದಾಗಿದೆ ಹಾಗೂ ಹಲವು ಮಹಿಳೆಯರ ಮಾನ, ಪ್ರಾಣಗಳು ಉಳಿಯಲಿವೆ. ಜೊತೆಗೆ ಇಡೀ ಈ ಲೈಂಗಿಕ ಅಕ್ರಮದ ಮೂಲ ವ್ಯಕ್ತಿಯನ್ನು ಬಂಧಿಸಿ ಸಮಾಜದಲ್ಲಿ ಮುಂದೆ ಆಗುವ ಅನಾಹುತಗಳನ್ನು ತಡೆಯಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ಬಿಜೆಪಿ ಮುಖಂಡ ಜಿ ದೇವರಾಜಿಗೌಡರನ್ನು ವಿಚಾರಣೆಗೆ ಒಳಪಡಿಸಿ ಸಾಧ್ಯವಾದಷ್ಟೂ ಬೇಗ ನೂರಾರು ಮಹಿಳೆಯರ ಮೇಲೆ ಲೈಂಗಿಕ ಅಕ್ರಮ, ಅತ್ಯಾಚಾರ ನಡೆಸಿ ಅವುಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಜ್ವಲ್ ರೇವಣ್ಣನನ್ನೂ ಹಾಗೂ ಅವುಗಳನ್ನು ಸಾರ್ವಜನಿಕರಿಗೆ ಪೆನ್ಟೈವ್ ಮುಖಾಂತರ ಹಂಚುತ್ತಿರುವ ವ್ಯಕ್ತಿಗಳನ್ನೂ ಬಂಧಿಸಬೇಕೆಂದು ಮತ್ತು ಸಂತ್ರಸ್ತ ಮಹಿಳೆಯರು ಮತ್ತವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಕೋಲಾರ ಜಿಲ್ಲಾ ಪ್ರಗತಿ ಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
ತಡವಾಗಿಯಾದರೂ ಕರ್ನಾಟಕ ಸರ್ಕಾರ ಹಾಸನದ ಪೆನ್ಡೈವ್ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ‘ವಿಶೇಷ ತನಿಕಾ ದಳ [SIಖಿ) ರಚಿಸಿರುವುದನ್ನು ನಾವು ಸ್ವಾಗತಿಸುತ್ತೇವೆ ಜೊತೆಗೆ ಪ್ರಕರಣದ ತನಿಖೆಗೆ ಹಾಗು ಆರೋಪಿಗಳ ಬಂಧನಕ್ಕೆ ಆಗತ್ಯವಿರುವ ಎಲ್ಲಾ ರೀತಿಯ ಅಧಿಕಾರ ಮತ್ತು ಸೂಕ್ತ ವ್ಯವಸ್ಥೆಯನ್ನು ಎಸ್ ಐಟಿಗೆ ಒದಗಿರಬೇಕು ಇಡೀ ಪ್ರಕರಣದ ತನಿಖೆಗೆ ಜನಸ್ನೇಹಿ ಹಾಗೂ ಮಹಿಳಾಪರ ಸಂವೇದನೆ ಹೊಂದಿರುವ ಪೆÇೀಲೀಸು ಆಧಿಕಾರಿಗಳನ್ನು ಬಳಸಿಕೊಳ್ಳಬೇಕು, ತನಗಿರುವ ಅಧಿಕಾರ, ಅಂತಸ್ತು, ಕುಟುಂಬದ ಪ್ರಭಾವ ಮತ್ತು ಜಾತಿ ಪ್ರಭಾವವನ್ನು ಬಳಸಿ ನೂರಾರು ಮಹಿಳೆಯರನ್ನು ತನ್ನ ಕಾನುದಾಹಕ್ಕೆ ಬಳಸಿಕೊಂಡು ನಡೆಸಿದ ಲೈಂಗಿಕ ಕ್ರಿಯೆ ಮತ್ತು ಅವರೊಂದಿಗೆ ನಡೆಸಿದ ನಗ್ನ ವೀಡಿಯೋ ಚಾಟ್ಗಳನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾವಿರಾರು ವೀಡಿಯೋಗಳನ್ನು ಸಂಗ್ರಹಿಸಿಕೊಂಡಿರು ವನಡ್ರೈನ್ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಬಾಡಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಆತನ ಮೇಲೆ ಪ್ರಕರಣ ದಾಖಲಿಸಬೇಕು, ಮಹಿಳೆಯರ ಖಾಸಗಿ ಮತ್ತು ಲೈಂಗಿನ ಚಿತ್ರಗಳು ಮತ್ತು ದೃಶ್ಯಗಳನ್ನು ಪೆನ್ಡ್ರೈವ್ ಮುಖಾಂತರ ಸಾರ್ವಜನಿಕರಿಗೆ ವಿತರಿಸಿ ವಾಟ್ಸ್ಅಪ್ ಮುಖಾಂತರ ಎಲ್ಲೆಡೆ ಹರಡಲು ಕಾರಣವಾರವರನ್ನು ಪತ್ತೆಹಚ್ಚಿ ಅವರನ್ನು ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು, ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ ಸಾವಿರಾರು ವೀಡಿಯೋಗಳನ್ನು ಒಳಗೊಂಡಿರುವ ಪೆನಡೈವ್ ತನ್ನ ಬಳಿ ಇದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿರುವ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ವಿಚಾರಣೆಗೆ ಒಳಪಡಿಸಿ ಅವರಿಗೆ ಪೆನ್ಡೈವ್ ಯಾರಿಂದ ಬಂತು ಆ ವ್ಯಕ್ತಿಯಿಂದ ಯಾರ್ಯಾರಿಗೆ ಪೆನ್ ಡ್ರೈವ್ ಹಂಚಿಕೆಯಾಗಿದೆ ಮತ್ತು ಯಾವ ಮೊಬೈಲ್ನಿಂದ ಚಿತ್ರೀಕರಣವಾಗಿದೆ ಎನ್ನುವುದನ್ನು ಪತ್ತೆಹಚ್ಚಬೇಕು. ಹಾಗೂ ಮೊಬೈಲ್ ಮತ್ತು ಪೆನ್ ಡ್ರೈವ್ಗಳನ್ನು ವಶಪಡಿಸಿಕೊಳ್ಳಬೇಕು ಹಾಗೂ ಅವುಗಳು ಸಾರ್ವಜನಿಕವಾಗಿ ಮತ್ತಷ್ಟು ಹಂಚಿಕೆಯಾಗದಂತೆ ತಡೆಗಟ್ಟ ಅವುಗಳನ್ನು ನಾಶಪಡಿಸಬೇಕು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವುಗಳನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಆ ದೃಶ್ಯಗಳನ್ನು ಪೆನ್ ಡ್ರೈವ್ ಮುಖಾಂತರ ಎಲ್ಲೆಡೆ ಹಂಚೆ ವಾಟ್ಸ್ ಆಪ್ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಮಾಡಲು ಕಾರಣರಾಗಿರುವ ಎಲ್ಲರನ್ನೂ ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು, ಪೆನ್ಡ್ರೈವ್ ಲೈಂಗಿಕ ದೌರ್ಜನ್ಯದಲ್ಲಿ ಸಂತ್ರಸ್ತರಾಗಿರುವ ಮಹಿಳೆಯ ಗೌಪ್ಯತೆಯನ್ನು ಕಾಪಾಡಬೇಕು ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್ ಕೇಂದ್ರಗಳನ್ನು ತೆರೆಯಬೇಕು. ಹಾಗೂ ಸಂತ್ರಸ್ಥ ಮಹಿಳೆಯರಿಗೆ ದೂರು ದಾಖಲಿಸಲು ಸಾಧ್ಯವಾಗುವಂತೆ ಹಾಸನದಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತ್ಯೇಕವಾದು ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ಜೊತೆಗೆ ದೂರು ದಾಖಲಿಸಲು ಬರುವ ಸಂತ್ರಸ್ಥ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಪ್ರಯಾಣ ವ್ಯವಸ್ಥೆ ಒದಗಿಸಬೇಕು, ಇಡೀ ಪ್ರಕರಣದ ತನಿಖೆಯಲ್ಲಿ ಹಾಗೂ ಆರೋಪಿಗಳನ್ನು ಬಂಧಿಸುವ ಯಾವುದೇ ರಾಜಕೀಯ ಪ್ರಭಾವ ಹಾಗೂ ಒತ್ತಡಕ್ಕೆ ಒಳಗಾಗದಂತೆ ಎಸ್ಐಟಿ ಕೆಲಸ ಮಾಡುವುದನ್ನು ರಾಜ್ಯ ಸರ್ಕಾರ ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಕೋಲಾರ ಜಿಲ್ಲಾ ಪ್ರಗತಿ ಪರ ಸಂಘಟನೆಗಳು ಮುಖಂಡರುಗಳಾದ ಗಮನ ಮಹಿಳಾ ಸಂಘದ ಶಾಂತಮ್ಮ, ಈನೆಲ ಈಜಲ ವೆಂಕಟಾಚಲಪತಿ, ಯುವ ಜಾಗೃತಿ ಸಮಿತಿ ಸುಬ್ರಮಣಿ, ವಕೀಲ ಸತೀಶ್, ರೈತ ಸಂಘದ ನಳಿನಿಗೌಡ, ಗಮನ ಲಕ್ಷ್ಮಿ, ಹೂಹಳ್ಳಿ ನಾಗರಾಜ್, ಡಿ.ವೈ.ಫ್.ಐ ಸೌಮ್ಯ ಕೆ.ಎಂ, ಗ್ರೇಸಿ ಪ್ರಕ್ರಿಯೆ, ನವ್ಯ ಆರ್, ಅಗ್ರಹಾರ ವೀಣಾ, ಕೃಷ್ಣಮೂರ್ತಿ, ಮಲ್ಲಿಕಾ, ಡಾ.ನೇತ್ರಾವತಿ, ವೆಂಕಟರಾಜಮ್ಮ ಇನ್ನಿತರರು ಉಪಸ್ಥಿತರಿದ್ದರು.