“ಅಸಾನಿ” ಚಂಡಮಾರುತದ ಪರಿಣಾಮ ರಾಜ್ಯಾಧ್ಯಂತ 3 ದಿನ ಭಾರೀ ಗಾಳಿ ಮಳೆ ಯೆಲ್ಲೋ ಅಲರ್ಟ್ ಘೋಷಣೆ

JANANUDI.COM NETWORK

ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಮುಂದಿನ 3 ಮೂರು ದಿನ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಭಾರೀ ಮಳೆಯಾಗಿದೆ ಇಂದು ಕೂಡ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಹಾಸನ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾವೇರಿ, ಮೈಸೂರು, ಚಾಮರಾಜನಗರ, ಗದಗ, ದಾವಣಗೆರೆ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ಮೂರು ದಿನ ಮಳೆ ಮುಂದುವರೆಯಲಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ಕಾರಣ, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.