

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನ.10 ರಂದು ಪ್ರಾತ: ಕಾಲ ಗಂಟೆ 5:00ಕ್ಕೆ ಹಣತೆ ದೀಪಗಳ ಬೆಳಕಿನಲ್ಲಿ ಶ್ರೀ ದೇವರ ವಿಶ್ವರೂಪ ದರ್ಶನ ಜರುಗಲಿದೆ. ಆ ಸಂದರ್ಭದಲ್ಲಿ ದೇವಸ್ಥಾನದ ಸುತ್ತ ಚಿತ್ತಾಕರ್ಷಕ ರಂಗೋಲಿಗಳು ಪ್ರದರ್ಶನಗೊಳ್ಳಲಿವೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.