JANANUDI.COM NETWORK

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ವೆಂಬಲ್ಲಿ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಅವರ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಪೊಲೀಸರು ಬಜರಂಗ ದಳದ ಪ್ರಾಂತ್ಯ ಸಂಚಾಲಕ ರಘು ಸೇರಿ ಹಲವಾರು ಬಜರಂಗ ದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಬಜರಂಗದಳದ ಕಾರ್ಯಕರ್ತರ ನಡುವೆ ಮಾತಿನ ಮೂಲಕ ಘರ್ಷಣೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತವರಣ ಉಂಟಾಗಿತ್ತು ಎಂದು ತಿಳಿದು ಬಂದಿದೆ.