ಕೋಲಾರ: ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಕಡಲ ತೀರದಲ್ಲಿ ನಡೆದ ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ. ಡಿಸೆಂಬರ್ 10 ರಂದು ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಹಾಗೂ 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಮಂಗಳವಾರ ಸಂಜೆ ಬೀಚ್ ನಲ್ಲಿ ಆಟವಾಡುತ್ತಿದ್ದಾಗ, ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದು. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಮೃದೇಹವನ್ನು ಹೊರತೆಗೆಯಲಾಗಿದೆ.
ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಅವರನ್ನು ಸಮುದ್ರದಿಂದ ಮೇಲಕ್ಕೆ ಎತ್ತಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Jananudi News Network
ಶ್ರೀನಿವಾಸಪುರ ; ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಉದ್ಘಾಟನೆ
ಶ್ರೀವಾಸಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭದಲ್ಲಿ ಹಿರಿಯ ಛಾಯಾ ಗ್ರಾಹಕ ವಿಶ್ವನಾಥಸಿಂಗ್ ಹಾಗೂ ವೈದ್ಯಾಧಿಕಾರಿ ಡಾ.ಟಿ.ಎನ್.ಉಮಾಶಂಕರ್ ಅವರನ್ನು ಸನ್ಮಾನಿಸಲಾಯಿತು.
ಮೂಲಭೂತ ಹಕ್ಕುಗಳು ಅರಿವು ಅಗತ್ಯ
ಶ್ರೀನಿವಾಸಪುರ: ಸಮಾನತೆ ತತ್ವ ಸಾಕಾರಗೊಳ್ಳಲು ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳ ಅರಿವು ಅಗತ್ಯ ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಹಾಗೂ ಸ್ಥಳೀಯ ವಕೀಲರ ಸಂಘದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮೂಲಭೂತ ಹಕ್ಕುಗಳ ಚಲಾವಣೆ ಸಂದರ್ಭದಲ್ಲಿ, ಬೇರೆಯವರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ ಮಾತನಾಡಿ, ಪ್ರತಿಯೊಬ್ಬರಿಗೂ ಹುಟ್ಟಿನಿಂದ ಸಾಯುವವರೆಗೆ ಬದುಕುವ ಹಕ್ಕಿದೆ. ಮಾನವ ಹಕ್ಕುಗಳ ಉಲಂಘನೆಯಾದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಳುವ ಹಕ್ಕಿದೆ. ಲಿಂಗ ತಾರತಮ್ಯ ಸೇರಿದಂತೆ ಯಾವುದೇ ತಾರತಮ್ಯಕ್ಕೆ ಅವಕಾಶ ಇರುವುದಿಲ್ಲ. ವ್ಯಕ್ತಿ ಹುಟ್ಟಿನಿಂದ ಸಾಯುವ ವರೆಗೆ ನ್ಯಾಯದ ನೆರಳಿನಲ್ಲಿ ಜೀವಿಸುತ್ತಾನೆ. ಅಗತ್ಯ ಇದ್ದಲ್ಲಿ ಉಚಿತ ಕಾನೂನು ನೆರವು ಪಡೆಯುವ ಸೌಲಭ್ಯ ಇದೆ ಎಂದು ಹೇಳಿದರು. ಹದಿಹರೆಯದವರು ಅಂಕೆ ಮೀರದೆ ಬದುಕು ಕಟ್ಟಿಕೊಳ್ಳಬೇಕು. ಕಾನೂನಿನ ಅಡಿಯಲ್ಲಿ ಬದುಕಲು ಬದ್ಧವಾಗಬೇಕು ಎಂದು ಹೇಳಿದರು.
ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ಕುಬೇರಗೌಡ ಮಾತನಾಡಿ, ಸಂಸ್ಥೆ ವಿಶ್ವ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲೇ ಮಾನವ ಹಕ್ಕುಗಳ ಉಲಂಘನೆಯಾದರೂ, ಬಾಧಿತರ ರಕ್ಷಣೆಗೆ ಮುಂದಾಗುತ್ತದೆ. ಭ್ರಷ್ಟಾಚಾರ ಅತ್ಯಂತ ಅವಮಾನಕರ ಸಂಗತಿಯಾಗಿದೆ. ಬ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬರೂ ಟೊಂಕಕಟ್ಟಿ ನಿಲ್ಲಬೇಕು. ಕಾನೂನಿನ ಚೌಕಟ್ಟಿನಲ್ಲಿ ಬ್ರಷ್ಟಾಚಾರ ತಡೆಗೆ ಪ್ರಯತ್ನಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಎಸ್.ಸಣ್ಣೀರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ತೆ ಪಾಲನೆಯಾಗಲು ಕಾನೂನಿನ ಅರಿವು ಅಗತ್ಯ. ವಿದ್ಯಾವಂತ ಯುವ ಸಮುದಾಯ ಸಮಾಜದಲ್ಲಿ ಕಾನೂನು ಅರಿವು ಮೂಡಿಸಲು ಶ್ರಮಿಸಬೇಕು ಎಂದು ಹೇಳಿದರು.
ಈ ಸಂರ್ಭದಲ್ಲಿ ತಾಲ್ಲೂಕಿನ ಹಿರಿಯ ಛಾಯಾ ಗ್ರಾಹಕ ವಿಶ್ವನಾಥಸಿಂಗ್ ಹಾಗೂ ಪ್ರತಿಭಾವಂತ ವೈದ್ಯಾಧಿಕಾರಿ ಡಾ.ಟಿ.ಎನ್.ಉಮಾಶಂಕರ್ ಅವರನ್ನು ಸನ್ಮಾನಿಸಲಾಯಿತು.
ಪ್ರಾಧ್ಯಾಪಕರಾದ ಡಾ. ಶಾರದ, ಡಾ. ಮೃತ್ಯುಂಜಯ, ಡಾ.ನವೀನ್, ಡಾ.ದಿಲೀಪ್ ಇದ್ದರು.
Sad Demise – Mr. Ronald DAlmeida-(69) Holy Rosary Church, Kundapur, Carmel Ward
Sad Demise – Sad Demise – Mr. Ronald DAlmeida (69) Holy Rosary Church, Kundapur, Carmel Ward
H/o Diana DAlmeida
S/O (Late) Paul and (Late) Mary DAlmeida
F/o Renila / Donson, Rynish / Reema
G/o Dervin & Delona.
Funeral cortege leaves residence, Kundapura, On Thursday 12th December 2024 at 3:30 pm. followed by mass at 4:00 pm. Holy Rosary church, Kundapur.
Contact : 9744353958, 9945589631
ಬ್ಲಾಕ್ ಕಾಂಗ್ರೆಸ್ ಕುಂದಾಪುರ – ಅಗಲಿದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣರವರಿಗೆ ನುಡಿ ನಮನ
ಕುಂದಾಪುರ, ಡಿ.೧೦ಃ ಇಂದು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕಚೇರಿಯಲ್ಲಿ ಅಗಲಿದ ಮಾಜಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣರವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗ್ಯಾರಂಟಿ ಸಮಿತಿಗಳ ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆಯವರು ‘ ಎಸ್ಎಂ ಕೃಷ್ಣ ರವರು ಮುಖ್ಯಮಂತ್ರಿಗಳಾಗಿದ್ದಾಗ ತೆಗೆದುಕೊಂಡ ದೂರದೃಷ್ಟಿಯ ನಿರ್ಧಾರಗಳು ಇಂದು ರಾಜ್ಯ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರವಾಗಿ ನಿರ್ಮಾಣ ವಾಗಲು ಸಾಧ್ಯವಾಯಿತು’ ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು ಮಾತನಾಡಿ ‘ಕಾಂಗ್ರೆಸ್ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಎಸ್ಎಂ ಕೃಷ್ಣರವರು ಸಮರ್ಥವಾಗಿ ನಿಭಾಯಿಸಿ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟರು. ಅವರ ಮುಖ್ಯಮಂತ್ರಿ ಅವಧಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆ ಶಿಕ್ಷಣ ಕ್ರಾಂತಿಗೆ ಸಾಕ್ಷಿಯಾಯಿತು’ ಎಂದರು .
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಐ ಟಿ ಸೆಲ್ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ,ಮಹಿಳಾ ಬ್ಲಾಕ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ ,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮುನಾಫ್ ಕೋಡಿ, ಪುರಸಭೆಗೆ ಕರ್ನಾಟಕ ಸರ್ಕಾರದಿಂದ ನಾಮ ನಿರ್ದೇಶಕ ಸದಸ್ಯತ್ವಕ್ಕೆ ಸೂಚಿತರಾಗಿರುವ ಅಶೋಕ ಸುವರ್ಣ , ಶಶಿಧರ ನಂದಿ ಬೆಟ್ಟ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್ , ಕುಂದೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿಟ್ಟಲ್ ಕಾಂಚನ್ , ಸೀಮಾ ಚಂದ್ರ ಪೂಜಾರಿ, ಅರುಣ್ ಪಟೇಲ್ , ಜೋಸೆಫ್ ರೆಬೆಲ್ಲೋ , ಎಡಾಲ್ಫ್ ಡಿಕೋಸ್ತಾ , ಜಾಯ್ ರೆಬೆಲ್ಲೊ , ಸಂಗೀತಾ ಇನ್ನಿತರರು ಉಪಸ್ಥಿತರಿದ್ದರು.
ಶ್ರೀನಿವಾಸಪುರ ಮುತ್ತಕಪಲ್ಲಿ ಗ್ರಾಮ – ಒತ್ತುವರಿ ರೈತರು ತೆರುವು ಕಾನೂನನ್ನು ಉಲ್ಲಂಘನೆ ಮಾಡಿದ ರೈತರಿಗೆ ನೋಟೀಸ್ ಜಾರಿ ಮಾಡಿರುವುದಕ್ಕೆ ಖಂಡನೆ
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಸಭೆ. ರೈತರು ಕಾನೂನು ಬದ್ದವಾಗಿ ಭೂಮಿಯ ಹಕ್ಕು ಪಡೆದು ಮೂರು ನಾಲ್ಕು ದಶಕಗಳಿಂದ ಅನುಭವ ದಲ್ಲಿರುವ ಭೂಮಿಗೆ ಅರಣ್ಯ ಇಲಾಖೆಯವರು ನೋಟೀಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಮುತ್ತಕಪಲ್ಲಿ, ಪಾತೂರು,ಕಾರಂಗೀ, ಗಂಗನತ್ತ, ಎಮ್ಮನೂರು, ಚನ್ನಯ್ಯಗಾರಿಪಲ್ಲಿ ರೈತರು ತಮ್ಮ ಭೂಮಿಯ ಹಕ್ಕು ಉಳಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನ.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರಿ ಮಾತನಾಡಿ ಕೋಲಾರ ಜಿಲ್ಲೆಯ ಅರಣ್ಯ ಅಧಿಕಾರಿಗಳು ರಾಜ್ಯ ಸರ್ಕಾರದ ಇತ್ತೀಚಿನ ಆದೇಶಗಳಾದ ಜಂಟಿ ಸರ್ವೆ ಆಗುವ ತನಕ ಮತ್ತು ಮೂರು ಎಕರೆ ಒಳಗಿನ ಒತ್ತುವರಿ ರೈತರಿಗೆ ಯಾವುದೇ ಕಾರಣಕ್ಕೂ ತೆರುವು ಮಾಡಬಾರದನ್ನುವ ಕಾನೂನನ್ನು ಉಲ್ಲಂಘನೆ ಮಾಡಿ ರೈತರಿಗೆ ನೋಟೀಸ್ ಜಾರಿ ಮಾಡಿರುವುದನ್ನು ಖಂಡಿಸಿದರು.
ಇಲ್ಲಿನ ರೈತರು ಅರಣ್ಯಕ್ಕೆ ಹೋಗಿಲ್ಲ. ಬದಲಿಗೆ ಅರಣ್ಯ ಇಲಾಖೆಯವರೆ ಕಾನೂನು ಬಾಹಿರವಾಗಿ ನಕ್ಷೆ ತಯಾರಿಸಿಕೊಂಡು ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ರೈತರ ಭೂಮಿ ಮೊದಲಿಗೆ ಸರ್ಕಾರದ ಕಂದಾಯ ಭೂಮಿ ಗೋಮಾಳ ವಾಗಿದ್ದ ರಿಂದ ಸರ್ಕಾರ ಕಾನೂನು ಬದ್ದವಾಗಿ ರೈತರ ಹೆಸರಿಗೆ ಮಂಜೂರು ಮಾಡಲಾಗಿದೆ. ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ರೈತರು ಹೆದರಬಾರದು ಸಂಘಟಿತ ಹೋರಾಟ ನಡೆಸಬೇಕೆಂದು ತಿಳಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ ಇಡೀ ರಾಜ್ಯದಲ್ಲಿ ಅರಣ್ಯ ಭೂಮಿ,ಬಗರ್ ಹುಕ್ಕುಂ ಸಾಗುವಳಿ ಸಕ್ರಮ, ರೈತವಿರೋಧಿ ಭೂಸ್ವಾಧೀನ ಪ್ರಶ್ನೆಗಳ ಪರಿಹಾರಕ್ಕೆ ಮುಂದಿನ ತಿಂಗಳು ಬೆಂಗಳೂರಿಗೆ ರೈತರ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಹೇಳಿದರು.
ಭೂಮಿ ಹೋರಾಟ ಸಮಿತಿ ಕಾರ್ಯದರ್ಶಿ ಸೈಯದ್ ಫಾರೂಖ್ ಮಾತನಾಡಿ *ಜಿಲ್ಲೆಯಲ್ಲಿ ಭೂಮಿ ಕಳೆದುಕೊಂಡ ಸಾವಿರಾರು ರೈತರ ಬಗ್ಗೆ ಎಂದು ಬಾಯಿ ಬಿಚ್ಚಿದ ರೈತ ನಾಯಕ ರೊಬ್ಬರು ಅರಣ್ಯ ಇಲಾಖೆ ಪರ ವಕಾಲತ್ತು ವಹಿಸಿ ಮಾತನಾಡುವುದು ರೈತ ಕುಲಕ್ಕೆ ಬಗೆದ ದ್ರೊಹವಾಗಿದೆ ಎಂದರು.
ಮುಖಂಡರಾದ ವೆಂಕಟ್ರಾಮರೆಡ್ಡಿ, ಚಂದ್ರಶೇಖರ ರೆಡ್ಡಿ, ಶ್ರೀನಿವಾಸರೆಡ್ಡಿ, ಮುತ್ತಕಪಲ್ಲಿ ಹನುಮಪ್ಪ, ಯಮ್ಮನೂರು ನಾಗರಾಜ್, ರಾಮಕೃಷ್ಣಪ್ಪ, ಮುಜಾಮಿಲ್, ಗಂಗನತ್ತ ಪೆದ್ದನಾರಾಯಣಪ್ಪ,ಪೆದ್ದಣ್ಣ ಮುಂತಾದವರು ಉಪಸ್ಥಿತರಿದ್ದರು.
ಶ್ರೀನಿವಾಸಪುರ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮ
ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮವನ್ನು ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಹೆಚ್.ಆರ್.ಸಚಿನ್ ರವರು, ತಹಶೀಲ್ದಾರ್ ಶ್ರೀ ಜಿ.ಎನ್.ಸುಧೀದ್ರರವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶಿವಕುಮಾರಿ, ಪುರಸಭಾ ಮುಖ್ಯಾಧಿಕಾರಿ ಶ್ರೀ ವಿ.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ಶ್ರೀ ಎನ್.ವಿ.ಜಯರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮುನಿ ಲಕ್ಷ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಅಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣರವರು ಇಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಕುಂದಾಪುರ ಕೋಟೇಶ್ವರ ಸಮೀಪ ಅಂಕದ ಕಟ್ಟೆಯಲ್ಲಿ ಕಚ್ಚಾ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ
ಕುಂದಾಪುರ: ಮಂಗಳೂರಿನಿಂದ ನಾಗಪುರಕ್ಕೆ ಎಂ ಆರ್ ಪಿಎಲ್ ನಿಂದ ಕಚ್ಚಾ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕೋಟೇಶ್ವರ ಸಮೀಪ ಅಂಕದ ಕಟ್ಟೆಯಲ್ಲಿ ಡಿವೈಡರಿಗೆ ಡಿಕ್ಕಿಯಾಗಿ ಲಾರಿ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ.
ಮಂಗಳೂರಿನ ಎಂಆರ್ ಪಿಎಲ್ ನಿಂದ ಕಚ್ಚಾ ಸಾಮಗ್ರಿಗಳನ್ನು ಮಹಾರಾಷ್ಟ್ರದ ನಾಗಪುರಕ್ಕೆ ಸಾಗಿಸುತ್ತಿದ್ದ 17 ಚಕ್ರದ ಲಾರಿ ಇಂದು ಬೆಳಗಿನ ಜಾವ ಮೂರು ಗಂಟೆ ಹೊತ್ತಿಗೆ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಚೀಲಗಳೆಲ್ಲ ಸರ್ವಿಸ್ ರಸ್ತೆಯಲ್ಲಿ ಬಿದ್ದು ಚೆಲ್ಲಾಪಿಲ್ಲಿಯಾಗಿದೆ.
ಅಪಘಾತದಲ್ಲಿ ಚಾಲಕ ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗ್ಗಿನ ಜಾವ ರಸ್ತೆ ಸಂಚಾರ ವಿರಳವಾಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ, ಬೇರೆ ಯಾವುದೇ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದ್ದರೆ ಪ್ರಾಣಕ್ಕೆ ಕಂಟಕವಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ – ಟೀಚರ್ ಟ್ರೈನಿಂಗ್ ಅಕಾಡೆಮಿ “ಸೈನ್ಸ್ಟೀಚಿಂಗ್ಸ್ಕಿಲ್ಸ್” ವಿಶೇಷಕಾರ್ಯಾಗಾರ
ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರ ಇವರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು.
ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ ಪ್ರಕ್ರಿಯೆ ಆಟದ ಆಧಾರದಲ್ಲಿ ನಡೆಯಬೇಕು” ಎಂಬುದನ್ನು ಒತ್ತಿಹೇಳಿ, ಕಲಿಕೆಯ ಸಲಕರಣೆಗಳ ರೂಪುರೇಷೆ, ಆಕರ್ಷಕ ಚಟುವಟಿಕೆಗಳ ಮಹತ್ವವನ್ನು ಕವಿತಾ ಭಟ್ ವಿವರಿಸಿದರು.
ರವಿಚಂದ್ರ ಇವರು ತಮ್ಮ ಅನನ್ಯ ಶೈಲಿಯ ಮೂಲಕ, ಚಿಕ್ಕ ಮಕ್ಕಳ ಮನಸ್ಸನ್ನು ಸೃಜನಶೀಲತೆಯಿಂದ ತುಂಬಿಸುವಂತೆ ಪ್ರಾಯೋಗಿಕ ಚಟುವಟಿಕೆಗಳನ್ನು ಹಾಗೂ ಮಕ್ಕಳಿಗೆ ಬಣ್ಣಗಳ ಸಂಯೋಜನೆ, ಬೆಳಕು ಮತ್ತು ನೆರಳಿನ ಆಟ, ಮತ್ತು ಸಣ್ಣ ರಸಾಯನ ಪ್ರಕ್ರಿಯೆಗಳ ಪ್ರಸ್ತುತಪಡಿಸಿದರು.
ಸಂಸ್ಥೆಯ ಪ್ರಾಂಶುಪಾಲೆಯಾಗಿರುವ ಡಾ. ಚಿಂತನಾ ರಾಜೇಶ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತಿಯಲ್ಲಿದ್ದರು. ಶಿಕ್ಷಕ ವಿದ್ಯಾರ್ಥಿನಿಯರಾದ ರಜನಿ, ಶಾಲಿನಿ ಮತ್ತು ಶ್ರುತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಎಸ್ಎಂ ಕೃಷ್ಣ ವಿಧಿ ವಶ: ರಾಜ್ಯದಲ್ಲಿ 3 ದಿನ ಶೋಕಾಚರಣೆ- ನಾಳೆ ಡಿಸೆಂಬರ್ 11 ರಂದು ಸರ್ಕಾರಿ ರಜೆ ಘೋಷಣೆ
ಬೆಂಗಳೂರು, ಡಿ. 10; ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು. ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಇವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.