

ಶ್ರೀನಿವಾಸಪುರ ೨ : ತಾಲೂಕಿನ ಚಲ್ದಿಗಾನಹಳ್ಳಿ ಬೈಪಾಸ್ ಬಳಿ ಶ್ರೀನಿವಾಸಪುರ ತಹಶೀಲ್ದಾರ್ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಣ್ಣಪುಟ್ಟ ಗಾಯಗಳೋಂದಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹಾಗೂ ಕಾರು ಚಾಲಕ ಬಚಾವ್ ಆಗಿರುವ ಘಟನೆ ಮಂಗಳವಾರ ರಾತ್ರಿ ಸುಮಾರು ೭ ಗಂಟೆಯಿಂದ ೭:೩೦ ಸಮಯದಲ್ಲಿ ನಡೆದಿದೆ.
ಖಾಸಗಿ ಬಸ್ ಕಾರು ಡಿಕ್ಕಿ ಹೊಡೆದು, ಬಳಿಕ ಮೊತ್ತೊಂದು ಬೈಕ್ಗೆ ಡಿಕ್ಕಿ ಹೊಡೆದ ಹಿನ್ನಲೆಯಲ್ಲಿ ದ್ವಿಚಕ್ರವಾಹನ ಸವಾರನಿಗೂ ಸಣ್ಣಪಟ್ಟಗಾಯಗಳೊಂದಿಗೆ ಬಚಾವ್ ಆಗಿದ್ದು, ಖಾಸಗಿ ಬಸ್ ಪಣಸಮಾಕನಹಳ್ಳಿ ಬಳಿ ಬಸ್ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಎಂ.ಡಿ .ನಾರಾಯಣಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.


































