ಶ್ರೀನಿವಾಸಪುರ:ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿಸಬೇಕು – ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್

ಶ್ರೀನಿವಾಸಪುರ: ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿಸಬೇಕು ಎಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.
ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬ್ಯಾಂಕ್ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್ ರೈತರು ಮತ್ತಿತರ ಫಲಾನುಭವಿಗಳಿಗೆ ಶೇ.3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇಷ್ಟು ಕಡಿಮೆ ಬಡ್ಡಿ ದರದಲ್ಲಿ ಯಾವುದೇ ಬ್ಯಾಂಕ್ ಸಾಲ ನೀಡುವುದಿಲ್ಲ ಎಂದು ಹೇಳಿದರು.
ಮುಖ್ಯವಾಗಿ ರೈತ ಸಮುದಾಯದ ಹಿತ ಕಾಯಲು ಬ್ಯಾಂಕ್ ಸ್ಥಾಪಿಸಲಾಗಿದೆ. ಆದರೆ ಸಾಲಗಾರರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಲ ಮರುಪಾವತಿ ಆಗುತ್ತಿಲ್ಲ. ಹಾಗಾಗಿ ಹೊಸ ಸಾಲ ನೀಡಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿ ಬದಲಾಗಬೇಕಾದರೆ, ಸಾಲ ವಸೂಲಾತಿ ಪ್ರಮಾಣ ಹೆಚ್ಚಬೇಕು. ಬ್ಯಾಂಕ್ ನಿರ್ದೇಶಕರು ಸಾಲಗಾರರ ಮನೆಗಳಿಗೆ ಹೋಗಿ, ಸಾಲಗಾರರ ಮನವೊಲಿಸಿ ಸಾಲ ಮರುಪಾವತಿ ಮಾಡುವಂತೆ ಮನವೊಲಿಸಬೇಕು ಎಂದು ಹೇಳಿದರು.
ಸಧ್ಯಕ್ಕೆ ರೂ.8.88 ಕೋಟಿ ಸಾಲ ವಸೂಲಾಗಬೇಕಾಗಿದೆ. ಸಾಲ ಮರುಪಾವತಿಯಾದರೆ 256 ಸಾಲಗಾರರಿಗೆ ರೂ.1.95 ಕೋಟಿ ಬಡ್ಡಿ ಮನ್ನಾ ಮಾಡಲಾಗುವುದು. ಸಾಲಗಾರರು ತಮ್ಮ ಹಾಗೂ ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ರೂ.57.45 ಲಕ್ಷ ಬ್ಯಾಕ್ ನಿರ್ವಹಣಾ ಬಜೆಟ್‍ಗೆ ಅನುಮೋದನೆ ನೀಡಲಾಯಿತು. ಬ್ಯಾಂಕ್‍ಗೆ ಹೊಸ ಕಂಪ್ಯೂಟರ್ ಖರೀದಿಸಲು ಹಾಗೂ ಹಳೆ ಜೀಪ್ ಹರಾಜುಹಾಕಲು ನಿರ್ಧರಿಸಲಾಯಿತು.
ಬ್ಯಾಂಕ್ ಉಪಾಧ್ಯಕ್ಷ ಕೆ.ಬಿ.ಸುಬ್ಬಾರೆಡ್ಡಿ, ನಿದೇಶಕರಾದ ಎಲ್.ಗೋಪಾಲಕೃಷ್ಣ, ಎಂ.ಎನ್.ರಾಮಚಂದ್ರಾರೆಡ್ಡಿ, ಎಸ್.ಜಿ.ಜಗದೀಶ್ ಕುಮಾರ್, ಟಿ.ಎನ್.ಕೃಷ್ಣಾರೆಡ್ಡಿ, ವ್ಯವಸ್ಥಾಪಕ ಸಿ.ಎನ್.ಕೃಷ್ಣನ್, ಲೆಕ್ಕಾಧಿಕಾರಿ ಬಿ.ಶ್ರೀನಿವಾಸ್, ಮಂಜುನಾಥಾಚಾರ್, ಕೆ.ಬಿ.ನರೇಶ್, ಆರ್.ಎನ್.ರವೀಂದ್ರ, ಕೆ.ಎನ್.ಸತೀಶ್, ಜಿ.ಎನ್.ಗೋವಿಂದರೆಡ್ಡಿ, ಶಶಿಕುಮಾರ್, ಸೀತಾರಾಮರೆಡ್ಡಿ, ಮಂಜುನಾಥರೆಡ್ಡಿ, ಎನ್.ತಿಮ್ಮಯ್ಯ ಇದ್ದರು.

ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು – ತಹಶೀಲ್ದಾರ್ ಶಿರಿನ್ ತಾಜ್

ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಜನಪ್ರಿಯವಾಗಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳಿಗೋಸ್ಕರ ನಡೆಸುವ ಸರ್ಕಾರವನ್ನು ಪ್ರಜಾಪ್ರಭುತ್ವ ಸರ್ಕಾರ ಎಂದು ಕರೆಯುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಇಲ್ಲಿ ತಮ್ಮ ಪ್ರತಿನಿಧಿಗಳನ್ನು ಚುನಾವಣೆ ಮೂಲಕ ಆಯ್ಕೆಮಾಡುವ ಅವಕಾಶ ಪ್ರಜೆಗಳಿಗಿದೆ. ಇನ್ನಾವ ವ್ಯವಸ್ಥೆಯಲ್ಲೂ ಅಂಥ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಹಿರಿದು. ವಿವಿಧತೆಯಲ್ಲಿ ಏಕತೆ ಸಾಧಿಸಲು ಸಂವಿಧಾನ ನೆರವಾಗುತ್ತದೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸರ್ವ ಸಮ್ಮತವಾದ ಸಂವಿಧಾನ ನೀಡುವುದರ ಮೂಲಕ ಬಾಬಾ ಸಾಹೇಬರು ವಿಶ್ವಮಾನ್ಯರಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಓದಲಾಯಿತು. ಸಂವಿಧಾನ ಪಾಲಿಸುವ ಪ್ರತಿಜ್ಞಾ ವಿಧಿ ಕೈಗೊಳ್ಳಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ಶಿವಕುಮಾರಿ, ಉಪ ತಹಶೀಲ್ದಾರ್ ಕೆ.ಎಲ್.ಜಯರಾಮ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಬಿಸಿಎಂ ಅಧಿಕಾರಿ ಎನ್.ನರಸಿಂಹಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್, ವ್ಯವಸಾಯ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಅಭಿಷೇಕ್, ಮುಖಂಡರಾದ ರಾಮಚಂದ್ರ, ನರಸಿಂಹ, ನಾರಾಯಣಸ್ವಾಮಿ, ಶ್ರೀನಿವಾಸ್, ಪಿ.ವಾಸು, ಮುಳಬಾಗಿಲಪ್ಪ, ಗೋಪಾಲ್ ಇದ್ದರು.

ಉದ್ಯಮಿಗೆ 5 ಕೋಟಿ ರೂ. ವಂಚನೆ ಎಸಗಿದ ಚೈತ್ರಾ ಕುಂದಾಪುರ ವಿಚಾರಣೆ ವೇಳೆ ಕುಸಿದು ಬಿದ್ದುದು ಕೂಡ ವಂಚನೆಯ ನಾಟಕವೇ ?

ಬೆಂಗಳೂರು: ಉದ್ಯಮಿಗೆ 5 ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ, ವಿಚಾರಣ ಸಮಯದಲ್ಲಿ ಕುಸಿದು ಬಿದ್ದುದರಿಂದ ಇವಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದು, 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ. ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾಳೆ.

ಆದರೆ ಇತ್ತೀಚೆಗಿನ ವರದಿ ಬಂದಂತೆ, ಆಸ್ಪತೆಯಲ್ಲಿ ಚೈತ್ರಗೆ ತಪಾಸಣೆ ನೆಡೆದಾಗ, ಮೂರ್ಛೆ ರೋಗದ ಲಕ್ಷಣಗಳು ಕಾಣಲಿಲ್ಲ ಎಂದು ವೈದ್ಯಕೀಯ ವರದಿ ತಿಳಿಸಿದೆ. ಅಂದ ಹಾಗೇ ನಿನ್ನೆ ಚೈತ್ರ ಬಟ್ಟೆ ತೊಳೆಯುವ ಸಾಬುನನನ್ನು ತರಿಸಿದ್ದಳೆಂದು ತಿಳಿದುಬಂದಿದೆ. ಹಾಗಾಗಿ ವಂಚಕಿ ಚೈತ್ರ ಕುಸಿದು ಬಿದ್ದದು ಕೂಡ ವಂಚಿಸಲು ರೂಪಿಸಿದ ನಾಟಕವೆಂಬತ್ತೆ ಅನುಮಾನ ವ್ಯಕ್ತವಾಗುತ್ತದೆ.

ಮಣಿಪುರ ನಾಲ್ಕು ತಿಂಗಳ ಹಿಂಸಾಚಾರದಲ್ಲಿ 175 ಮಂದಿ ಸಾವು 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದ ತತ್ತರಿಸಿರುವ ಜನಾಂಗೀಯ ಕಲಹದಲ್ಲಿ 175 ಮಂದಿ ಸಾವನ್ನಪ್ಪಿದ್ದು, 1,108 ಮಂದಿ ಗಾಯಗೊಂಡಿದ್ದು, 32 ಮಂದಿ ನಾಪತ್ತೆಯಾಗಿದ್ದಾರೆ ಎಂದು IGP (ಕಾರ್ಯಾಚರಣೆ) I K Muivah ತಿಳಿಸಿದ್ದಾರೆಂದು ಪಿಟಿಐ ಮೂಲಗಳಿಂದ ತಿಳಿದು ಬಂದಿದೆ.

ಈ ತನಕ ಒಟ್ಟಾರೆಯಾಗಿ, 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ (ಕಾರ್ಯಾಚರಣೆ) ಐ ಕೆ ಮುಯಿವಾ, “ಮಣಿಪುರದ ಈ ಸವಾಲಿನ ಸಮಯದಲ್ಲಿ, ಪೊಲೀಸರು, ಕೇಂದ್ರ ಪಡೆಗಳು ಮತ್ತು ನಾಗರಿಕ ಆಡಳಿತವು ಸಹಜ ಸ್ಥಿತಿಗೆ ಮರಳಲು ಹಗಲಿರುಳು ಪ್ರಯತ್ನಿಸುತ್ತಿದೆ ಎಂದು ನಾವು ಸಾರ್ವಜನಿಕರಿಗೆ ಭರವಸೆ ನೀಡಬಹುದು” ಎಂದು ಹೇಳಿದರು.

ಹಿಂಸಾಚಾರದ ಸಂದರ್ಭದಲ್ಲಿ ಗಲಭೆಕೋರರು ಪೊಲೀಸರ ದೊಡ್ಡ ಸಂಖ್ಯೆಯ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದುಹೋದ ಶಸ್ತ್ರಾಸ್ತ್ರಗಳಲ್ಲಿ 1,359 ಬಂದೂಕುಗಳು ಮತ್ತು 15,050 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಯಿವಾ ಗುರುವಾರ ಹೇಳಿದ್ದಾರೆ.

5,172 ಅಗ್ನಿಸ್ಪರ್ಶ ಪ್ರಕರಣಗಳು ವರದಿಯಾಗಿವೆ, 386 ಧಾರ್ಮಿಕ ರಚನೆಗಳು – 254 ಚರ್ಚ್‌ಗಳು ಮತ್ತು 132 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಮುಯಿವಾ ಹೇಳಿದರು.

ಬಿಷ್ಣುಪುರ ಜಿಲ್ಲೆಯ ಫೌಗಕ್‌ಚಾವೊ ಇಖೈಯಿಂದ ಚುರಚಂದಪುರ ಜಿಲ್ಲೆಯ ಕಾಂಗ್‌ವೈವರೆಗಿನ ಭದ್ರತಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ಐಜಿಪಿ (ಆಡಳಿತ) ಕೆ ಜಯಂತ ಮಾತನಾಡಿ, ಮೃತಪಟ್ಟ 175 ಜನರ ಪೈಕಿ ಒಂಬತ್ತು ಮಂದಿ ಇನ್ನೂ ಪತ್ತೆಯಾಗಿಲ್ಲ.

“ಎಪ್ಪತ್ತೊಂಬತ್ತು ದೇಹಗಳು ಹಕ್ಕು ಪಡೆಯದಿದ್ದರೂ 96 ಹಕ್ಕುಗಳಿಲ್ಲದೆ ಉಳಿದಿವೆ. RIMS ಮತ್ತು JNIMS (ಇಂಫಾಲ್‌ನ ಆಸ್ಪತ್ರೆಗಳು), ಕ್ರಮವಾಗಿ 28 ಮತ್ತು 26 ದೇಹಗಳನ್ನು ಇರಿಸಲಾಗಿದೆ, ಆದರೆ 42 ಚುರಾಚಂದ್‌ಪುರ ಆಸ್ಪತ್ರೆಯಲ್ಲಿವೆ” ಎಂದು ಅವರು ಮಾಹಿತಿ ನೀಡಿದರು.

9,332 ಪ್ರಕರಣಗಳು ದಾಖಲಾಗಿದ್ದು, 325 ಜನರನ್ನು ಬಂಧಿಸಲಾಗಿದೆ ಎಂದು ಜಯಂತ ತಿಳಿಸಿದರು.

ಏತನ್ಮಧ್ಯೆ, NH-32 ಮತ್ತು NH-2 ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು IGP (ವಲಯ-3) ನಿಶಿತ್ ಉಜ್ವಲ್ ಹೇಳಿದ್ದಾರೆ.

ಮೇ 3 ರಂದು ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು, ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಲಾಗಿತ್ತು.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ, ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ತಿರುಪತಿ ಯಾತ್ರೆ ಮುಗಿಸಿ ಹಿಂದಿರುಗುವ ವೇಳೆ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕದ ಐವರ ಸಾವು

ಆಂಧ್ರಪ್ರದೇಶ: ತಿರುಪತಿ ಯಾತ್ರೆ ಮುಗಿಸಿ ಹಿಂದಿರುಗುವ ವೇಳೆ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕದ ಐವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ. ಮಠಂಪಲ್ಲಿಯಲ್ಲಿ ನಡೆದಿದೆ. ಅಪಘಾತಕೊಳ್ಳಗಾದವರನ್ನು ಬೆಳಗಾವಿ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ
ಮಠಂಪಲ್ಲಿ ಗ್ರಾಮದ ಬಳಿ ತಮ್ಮ ಕ್ರೂಸರ್‌ ವಾಹನ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.

ಕರಾವಳಿಯಲ್ಲಿ ಮುಂದಿನ 3 ದಿನಗಳ ತನಕ ಭಾರಿ ಮಳೆಯ ಮುನ್ಸೂಚನೆ ನೀಡಿ,  -ಯೆಲ್ಲೋ ಅಲರ್ಟ್​ ಘೋಷಣೆ

ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್​ ಘೋಷಿಸಿದ್ದು್ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆಇನ್ನು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆಯೆಂದು ಹವಮಾನ ಇಲಾಖೆ ತಿಳಿಸಿದೆ.

ಕ್ಷಯದ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು : ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್

ಶ್ರೀನಿವಾಸಪುರ: ಕ್ಷಯದ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್ ಹೇಳಿದರು.
ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷಯ ರೋಗಿಗಳನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಗ್ರಾಮೀಣ ಪ್ರದೇಶದ ಕ್ಷಯ ರೋಗಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸಂಬಂಧಿಸಿದ ಆಸ್ಪತ್ರೆಗೆ ಕಳಿಸಿಕೊಡಬೇಕು ಎಂದು ಹೇಳಿದರು.
ಮುತ್ತಕಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇಘ ಶ್ಯಾಮ್ ಮಾತನಾಡಿ, ಸಾರ್ವಜನಿಕರು ಕ್ಷಯ ರೋಗದ ಬಗ್ಗೆ ಗಾಬರಿಪಡಬೇಕಾದ ಅಗತ್ಯವಿಲ್ಲ. ಅದೊಂದು ವಾಸಿಯಾಗಬಲ್ಲ ರೋಗವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತದೆ. ರೋಗ ಕಾಣಿಸಿಕೊಂಡ ತಕ್ಷಣ ವಿಳಂಬ ಮಾಡದೆ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಆರೋಗ್ಯ ಕಾರ್ಯಕರ್ತರು ಗ್ರಾಮೀಣ ಪ್ರದೇಶದ ನಾಗರಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಬೇಕು. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾವಂತ ಸಮುದಾಯ ಭಾಗಿಯಾಗಬೇಕು. ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿಸಲು ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
ಮುತ್ತಕಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಗಿರೀಶ್ ಮಾತನಾಡಿ, ಕಾಯಿಲೆ ಬಗ್ಗೆ ನಿರ್ಲಕ್ಷ್ಯ ವಹಿಸುವುದರಿಂದ ಅದು ಉಲ್ಬಣಗೊಳ್ಳುತ್ತದೆ. ಕಾಯಿಲೆ ಬಂದ ಮೇಲೆ ವಾಸಿಮಾಡಿಕೊಳ್ಳಲು ಹೆಣಗಾಡುವ ಬದಲು, ಕಾಯಿಲೆ ಬರದಂತೆ ಎಚ್ಚರ ವಹಿಸಬೇಕು. ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದು ವಾಸಿಮಾಡಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಆರೋಗ್ಯ ನಿರೀಕ್ಷಕ ಧರ್ಮರಾಜ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಯೋಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿ ಆಕಾಶ್ ಆಯ್ಕೆ

ಶ್ರೀನಿವಾಸಪುರ : ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಹೋಬಳಿ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಯೋಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಜೆ ತಿರುಮಲಪ್ಪ ಎಜುಕೇಶನಲ್ ಟ್ರಸ್ಟ್ ನ ಶ್ರೀ ಸಪ್ತಗಿರಿ ವಿದ್ಯಾಲಯದ ಆಕಾಶ್ ಆರ್ ಎಂಬ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಬಚ್ಚಿರೆಡ್ಡಿಗಾರಪಲ್ಲಿ ಗ್ರಾಮದ ಆಕಾಶ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹಾಗೂ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಜಿಲ್ಲಾಮಟ್ಟದಲ್ಲಿ ಜಯಗಳಿಸಿ ಶಾಲೆಗೆ ಆಗಮಿಸಿದ ಕ್ರೀಡಾಪಟು  ಆಕಾಶ್ ಗೆ ಶಾಲಾ ಆಡಳಿತ ಮಂಡಳಿ ಹಾಗೂ  ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು ಇದೇ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಯಗಳಿಸಿ ಉತ್ತಮ ಸಾಧನೆಮಾಡಿ ನಮ್ಮ ಶಾಲೆ,ತಾಲ್ಲೂಕಿನ ಹಾಗೂ ಪೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಜಿಲ್ಲಾ ಮಟ್ಟದಲ್ಲಿ ಆರು ತಾಲ್ಲೂಕುಗಳಿಂದ ಹಲವು ಕ್ರೀಡಾಪಟುಗಳು ಭಾಗವಹಿಸಿರುತ್ತಾರೆ ಜಯಗಳಿಸುವುದು ಸುಲಭ ಪ್ರಶ್ನೆಯಲ್ಲ ಕ್ರೀಡಾಪಟುವಿಗೆ ತರಬೇತಿ ನೀಡಿರುವ ಗಣಿತ ಶಿಕ್ಷಕ ಗುರುಪ್ರಸಾದ್ ರವರಿಗೂ ಅಭಿನಂದನೆಗಳನ್ನು ತಿಳಿಸಿದರು ಇನ್ನೂ ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರು ಭಾಗ್ಯಲಕ್ಷ್ಮಿ,ಶಾಲಾ ಕಾರ್ಯದರ್ಶಿ ಟಿ ವೆಂಕಟೇಶ್, ಮುಖ್ಯಶಿಕ್ಷಕರ ಲಕ್ಷ್ಮೀರಮಣ ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರ.

ಶ್ರೀನಿವಾಸಪುರ : ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಶ್ರೀನಿವಾಸಪುರ : ಪುರಸಭಾ ಕಚೇರಿಯ  ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು

ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ  ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.