ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ33ನೇ ಪದವಿ ಪ್ರದಾನ ಸಮಾರಂಭ


ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 33ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 29.04.2023 ರಂದು ಪೂರ್ವಾಹ್ನ 10.00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಸಲಾಯಿತು.
ಸಮಾರಂಭದಲ್ಲಿ 97 ಪದವಿ ವಿದ್ಯಾರ್ಥಿಗಳಿಗೆ ಹಾಗೂ 18 ಸ್ನಾತಕೋತ್ತರ ಪದವೀದರರಿಗೆ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು. ವಿನಾಯಕ ಮಿಷನ್ ರಿಸರ್ಚ್ ಫೌಂಡೇಶನ್, ಡೀಮ್ಡ್ ಟು. ಬಿ. ಯುನಿವರ್ಸಿಟಿ. ಸೇಲಂ, ತಮಿಳುನಾಡು ಇದರ ಉಪಕುಲಪತಿಯಾದ ಡಾ. ಪಿ. ಕೆ. ಸುಧೀರ್ ರವರು ಮುಖ್ಯ ಅತಿಥಿಯಾಗಿ ಪ್ರಮಾಣ ಪತ್ರ ವಿತರಿಸಿದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಸಂಸ್ಥೆಯ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ಸಭೆಯನ್ನು ಸ್ವಾಗತಿಸಿ ವೈದ್ಯಕೀಯ ಕ್ಷೇತ್ರದಲ್ಲಿ ಹೋಮಿಯೋಪಥಿ ವೈದ್ಯಪದ್ದತಿಯು ಜಗತ್ತಿನಾದ್ಯಂತ 65 ದೇಶಗಳಲ್ಲಿ ಜನಪ್ರಿಯಗೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯಿಂದ ವಿಶ್ವದಲ್ಲಿ 2ನೇ ಅತೀ ದೊಡ್ಡ ವೈದ್ಯ ಪದ್ದತಿಯೆಂದು ಗುರುತಿಸಲಾಗಿದೆ ಎಂದು ತಿಳಿಸಿದರು. ಹಲವು ರ್ಯಾಂಕ್ ಹಾಗೂ ಚಿನ್ನದ ಪದಕವನ್ನು ಗಳಿಸುವುದರ ಮೂಲಕ ಸಂಸ್ಥೆಯ ಹೆಮ್ಮೆಗೆ ಕಾರಣರಾಗಿರುವ ಪದವೀದರರನ್ನು ಅಬಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ. ಪ್ರಭು ಕಿರಣ್ ರವರು ವಾರ್ಷಿಕ ವರದಿಯಲ್ಲಿ 2022-23ರಲ್ಲಿ ಕಾಲೇಜಿನಲ್ಲಿ ನಡೆದ ಚಟುವಟಿಕೆಗಳನ್ನು ಪ್ರಸ್ತುತಪಡಿಸಿದರು ಮತ್ತು ಪದವಿ ಸ್ವೀಕರಿಸಿದ ಹೋಮಿಯೋಪಥಿ ವೈದ್ಯರ ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾದ ಡಾ. ಪಿ. ಕೆ. ಸುಧೀರ್ ರವರು ಪದವಿ ಪ್ರಧಾನ ಸಮಾರಂಭದ ಸಂದೇಶದೊಂದಿಗೆ ಪ್ರತಿಷ್ಠಿತ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪದವಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಿಕ್ಕಿದ ಅವಕಾಶಕ್ಕಾಗಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.
ಫಾದರ್ ಮುಲ್ಲರ್ ಸಂಸ್ಥೆಯಲ್ಲಿನ ತಮ್ಮ ಅನುಭವವನ್ನು ಸಭೆಯಲ್ಲಿ ಹಂಚಿಕೊಂಡು ಅಂದಿನ ನಿರ್ದೇಶಕರು, ಆಡಳಿತಾಧಿಕಾರಿಗಳು ಹೋಮಿಯೋಪಥಿ ಕಾಲೇಜನ್ನು ಮುಂದುವರೆಸಲು ಪಟ್ಟ ಪರಿಶ್ರಮವನ್ನು ಸ್ಮರಿಸಿದರು. ಘಟಿಕೋತ್ಸವದ ದಿನವು ಪ್ರತಿ ಪದವೀಧರರ ಜೀವನದಲ್ಲಿ ಸ್ಮರಣೀಯ ದಿನ ಹಾಗೂ ಈ ದಿನಕ್ಕಾಗಿ ಅವರ ಪರಿಶ್ರಮ ಹಾಗೂ ಪೆÇೀಷಕರ ಬೆಂಬಲವನ್ನು ಶ್ಲಾಘಿಸಿದರು.
ಪದವೀದರರ ಪರವಾಗಿ ಡಾ. ದರ್ಶನಾ ಪದ್ಮನಾಭನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು.
  ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಘೋಷಿಸಿದ 2 ಚಿನ್ನದ ಪದಕವನ್ನು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪದವೀಧರೆ ಡಾ. ಆಶ್ರಿತಾ ಬಿ.ಎ. ಹಾಗೂ ಮತ್ತೊಂದು ಚಿನ್ನದ ಪದಕವನ್ನು ಸ್ನಾತಕೋತ್ತರ ಪದವಿಯ ಮೆಟಿರಿಯಾ ಮೆಡಿಕಾ ವಿಭಾಗದಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಡಾ. ರೆಮ್ಯಾ ವರ್ಗೀಸ್ ಪಡೆದಿದ್ದು ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅಕ್ಟೋಬರ್ 2022 ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ 10 ಸ್ನಾತಕೋತ್ತರ ವಿದ್ಯಾರ್ಥಿಗಳನ್ನೂ ಬಿಷಪ್‍ರವರು ಸನ್ಮಾನಿಸಿದರು. ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಹೋಮಿಯೋಪಥಿ ವತಿಯಿಂದ ಸ್ನಾತಕೋತ್ತರ ಪದವಿಯ ಅತ್ಯುತ್ತಮ ಪ್ರಬಂದ ಮಂಡಣೆಗಾಗಿ ನೀಡಿರುವ ವಿದ್ಯಾರ್ಥಿವೇತನವನ್ನು ನಮ್ಮ ಕಾಲೇಜಿನ 2018-19 ರ ಹೋಮಿಯೋಪಥಿ ಸೈಕ್ಯಾಟ್ರಿ ವಿಭಾಗದ ಡಾ. ಸುದಿಪ್ತಿ ಸಿಂಗ್ ರವರು ಪಡೆದಿರುವರು.
6ನೇ ಮುಲ್ಲೇರಿಯನ್ ಬ್ಯಾಚ್ ಪ್ರಾಯೋಜಿಸಿದ ‘ಡಾ. ಸುಮೊದ್ ಜಾಕೊಬ್ ಸೊಲೊಮನ್ ಪ್ರಶಸ್ತಿ’ಯನ್ನು 2019-20 ಬ್ಯಾಚ್ ಹೋಮಿಯೋಪಥಿ ಸ್ನಾತಕೋತ್ತರ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ರೆಮ್ಯಾ ವರ್ಗೀಸ್ ರವರಿಗೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹರವರು ಪ್ರತಿಷ್ಠಿತ ಅಧ್ಯಕ್ಷೀಯ ಚಿನ್ನದ ಪದಕವನ್ನು ಅತ್ಯುತ್ತಮ ಸಾಧನೆ ಮಾಡಿದ ಹೋಮಿಯೋಪಥಿ ಪದವಿ ವಿದ್ಯಾರ್ಥಿನಿ ಡಾ. ಜಿದ್ದು ಸಾಯಿ ಅಖಿಲ ರವರಿಗೆ ಹಾಗೂ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಯನ್ನು ಡಾ. ಸ್ಟೆಫಿ ವರ್ಗೀಸ್ ರವರಿಗೆ ನೀಡಿ ಗೌರವಿಸಿದರು.
ಬಿಷಪ್‍ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪದವೀಧರರನ್ನು ಅಭಿನಂದಿಸಿ, ಹೋಮಿಯೋಪಥಿ ವೈದ್ಯ ಪದ್ಧತಿಯು ವಿಶ್ವದ ಎರಡನೇ ಅತೀ ದೊಡ್ಡ ಪದ್ಧತಿಯೆಂದು ಪರಿಗಣಿಸಲ್ಪಟ್ಟರೂ ಇದನ್ನು ಮುಂದುವರೆಸಲು ಅನೇಕ ಅಡೆ ತಡೆಗಳನ್ನು ದಾಟಿ ಹೋಗಬೇಕು. ಉದಯೋನ್ಮುಖ ವೈದ್ಯರು ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಅದನ್ನು ತೆರವುಗೊಳಿಸಬಹುದು ಎಂದು ಪದವೀದರರಿಗೆ ಒತ್ತಿ ಹೇಳಿದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ ರೋಶನ್ ಕ್ರಾಸ್ತಾರವರು ವಂದನಾರ್ಪಣೆಗೈದರು.
ಡಾ. ದೀಪಾ ರೆಬೆಲ್ಲೊ ಹಾಗೂ ಡಾ. ಮನಿಷ್ ಎಸ್ ತಿವಾರಿ ರವರು ಪದವಿ ಪ್ರದಾನ ಕಾರ್ಯಕ್ರಮವನ್ನು ನಿರೂಪಿಸಿದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿ’ಸೋಜ, ಹೋಮಿಯೋಪಥಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಗಿರೀಶ್ ನಾವಡ ಯು.ಕೆ., ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ರಂಜನ್ ಕ್ಲೆಮೆಂಟ್ ಬ್ರಿಟ್ಟೊರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಐ ಎಂ ಜೆ ಐ ಎಸ್ ಸಿ ಮೂಡ್ಲಕಟ್ಟೆ : ಯುವಜನ ವಿಕಾಸ ಕಾರ್ಯಗಾರ 

ಕುಂದಾಪುರ: ಏ:25 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ “ಸ್ವಾತಂತ್ರ್ಯ” ಎಂಬ ಒಂದು  ದಿನದ  “ಯುವಜನ ವಿಕಾಸ”  ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಪ್ರಾಧ್ಯಾಪಕರು ಮತ್ತು ಪರಿಣಿತ ಎಚ್ ಆರ್ ಡಿ.ಯ ಶಿಕ್ಷಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. “ಯಾ ವಿದ್ಯಾ ಸ ವಿಮುಕ್ತಯೇ” ಎಂದು ವಿದ್ಯಾರ್ಥಿಗಳಿಂದ ಹೇಳಿಸಿದ ಅವರು ಎಲ್ಲ ಬಂಧಗಳಿಂದಲೂ ಬಿಡುಗಡೆಗೊಳಿಸುವ ಮುಕ್ತಿದಾಯಿನಿಯಾಗಿದೆ ವಿದ್ಯೆ ಎಂದರು. ಶರೀರ, ಬುದ್ಧಿ, ಮನಸ್ಸುಗಳನ್ನು ಮುಕ್ತಗೊಳಿಸಿ ಮತ್ತೆ ಬಲಗೊಳಿಸಬೇಕು. ಇಂತಹ ಸಮರ್ಥ ಸಜ್ಜನರ ಸಂತುಷ್ಟ ಜೀವನವೇ ಸಮಾಜದ ಸೌಖ್ಯಗಳ ಮೂಲವಾಗಿದೆ. ಅಂತಹ ವ್ಯಕ್ತಿಗಳ ಸಮರಸ ಸಮುದಾಯವೇ ಸುಖಿ ಸ್ವತಂತ್ರ ಸಮಾಜ, ಈ ಸ್ವಾತಂತ್ರ್ಯ ನಮ್ಮ ಭಾರತದ ಅಮೂಲ್ಯ ಸಂಪತ್ತು ಅದಕ್ಕಾಗಿ ನಮ್ಮ ಯುವಜನರನ್ನು ಪ್ರಜ್ಞಾವಂತರಾಗಿಸುವ ಮಾನವೀಯರಾಗಿಸುವ ಸದುದ್ದೇಶ ನಮ್ಮದು ಎಂದು ತಿಳಿಸಿದರು. ಅಲ್ಲದೆ, ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾದ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ನ ಶ್ರೀಯುತ ನಂದಗೋಪಾಲ, ಹಿರಿಯ ಪತ್ರಕರ್ತರು ಟೈಮ್ಸ್ ಆಫ್ ಇಂಡಿಯಾ, ಕಾರ್ಯಗಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

  ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಅಧ್ಯಕ್ಷೀಯ ಮಾತುಗಳಲ್ಲಿ, “ವಿದ್ಯಾರ್ಥಿಗಳು, ಗಣ್ಯರು ತಿಳಿಸಿದ ವಿಚಾರತತ್ವವನ್ನು  ಅರಿತು ನಿಮ್ಮ ಬದುಕನ್ನು ರೂಪಿಸಿಕೊಳ್ಳಲು  ಅವಕಾಶಗಳು ಸಾವಿರಾರು ಇವೆ ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಿ.ಸಿ.ಎ.  ವಿದ್ಯಾರ್ಥಿಗಳಾದ ಕು| ನೇತ್ರಾವತಿ ಸ್ವಾಗತಿಸಿದರು. ಕು| ರಿಯಾನ್ ಕಾರ್ಯಕ್ರಮ ನಿರ್ವಹಿಸಿದರು. ಕು| ಪ್ರತಿಭಾ ವಂದಿಸಿದರು. ಪ್ರೋ| ಸುಮನ ಅತಿಥಿ ಪರಿಚಯ ನೀಡಿದರು.

ತುಂಬೆಯ ಫಾದರ್ ಮುಲ್ಲರ್ : ದಶಮನೋತ್ಸವ ಸಂಭ್ರಮದ ಪತ್ರಿಕಾಗೋಷ್ಟಿ

ಮಂಗಳೂರಿನ ಹೃದಯ ಭಾಗದಲ್ಲಿರುವ ಎಲ್ಲರಿಗೂ ಚಿರ ಪರಿಚಿತವಾದ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‍ಷ್ಟಿಟ್ಯೂಷನ್ ಪೂಜನೀಯ ಫಾದರ್ ಆಗಸ್ಟಸ್ ಮುಲ್ಲರ್‍ರವರಿಂದ 1880ನೇ ಇಸವಿಯಲ್ಲಿ ಕಂಕನಾಡಿಯಲ್ಲಿ ಸ್ಥಾಪನೆಯಾಗಿ ಇಂದು ಬೃಹದಾಕಾರವಾಗಿ ಬೆಳೆದು, ಅತ್ತ್ಯುತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವುದರಲ್ಲಿ ಹೆಸರುವಾಸಿಯಾಗಿದೆ.

ಈ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಒಂದು ಸಹ ಸಂಸ್ಥೆಯಾಗಿರುವ ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯನ್ನು 01.05.2013 ರಂದು ತುಂಬೆಯ ಬಿ.ಎ. ಸಮೂಹ ಸಂಸ್ಥೆಯಿಂದ ಫಾದರ್ ಮುಲ್ಲರ್ ಸೇವಾ ಸಂಸ್ಥೆಯು ಖರೀದಿಸಿತು ಮತ್ತು ಈ ಆಸ್ಪತ್ರೆಯು 02.06.2013 ರಂದು ಉದ್ಘಾಟನೆಗೊಂಡಿತು. ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆಯು ಈ ವರ್ಷ ದಶಮನೋತ್ಸವ ಆಚರಿಸುತ್ತದೆ ಎಂದು ತಿಳಿಸಲು ಸಂತೋಷವಾಗುತ್ತದೆ. ಆಸ್ಪತ್ರೆಯು 50 ಹಾಸಿಗೆಗಳಿಂದ ಈಗ 100 ಹಾಸಿಗೆಗಳನ್ನು ಹೊಂದಿದೆ. ಮಲ್ಟಿ ಸ್ಪೆಷಾಲಿಟಿಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಸೇವೆಗಳು ಲಭ್ಯವಿದೆ. ಓಂಃಊ ಪ್ರವೇಶ ಪೂರ್ವ ಮಾನ್ಯತೆ ಪಡೆದು ಈ ಆಸ್ಪತ್ರೆಯು ಉನ್ನತ ದರ್ಜೆಗೇರಿದೆ.
ಈ ಆಸ್ಪತ್ರೆಯು 24 ತಾಸುಗಳ ತುರ್ತು ಮತ್ತು ಅಪಘಾತ ಚಿಕಿತ್ಸೆ, 16 ಸ್ಲೈಸ್ ಸಿಟಿ ಸ್ಕ್ಯಾನ್, 24×7 ಪ್ರಯೋಗಾಲಯದ ಸೇವೆಗಳು, ಔಷಧಾಲಯ, ಪ್ರಸೂತಿ/ಹೆರಿಗೆ ವಿಭಾಗ, ಸುಸರ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳು, ದಾದಿಯರ ಸೇವೆಗಳಿಗೆ ಹೆಸರುವಾಸಿಯಾಗಿದೆ. ಕಳೆದ 10 ವರ್ಷಗಳಿಂದ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವಿಟ್ಲ ಹಾಗೂ ನೆರೆರಾಜ್ಯ ಕೇರಳದಿಂದ ಆರೋಗ್ಯ ಸೇವೆಯನ್ನು ಪಡೆಯಲು ರೋಗಿಗಳು ಬರುತ್ತಾರೆ. ಈ ಗ್ರಾಮೀಣ ಪ್ರದೇಶದ ಜನರಿಗೆ ಪ್ರತ್ಯೇಕವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಕಳೆದ ವರ್ಷ ದಶಮಾನೋತ್ಸವದ ಕೊಡುಗೆಯಾಗಿ ಬಂಟ್ವಾಳ ತಾಲೂಕಿನ ಪ್ರಥಮ ಃ.Sಛಿ ನರ್ಸಿಂಗ್ ಕಾಲೇಜನ್ನು (40 ಸೀಟುಗಳು) ಆರಂಭಿಸಿದೆ ಹಾಗೂ ಕಾಲೇಜಿನ ಹೊಸ ಕಟ್ಟಡದ ಕೆಲಸವು ಭರದಿಂದ ಸಾಗುತ್ತಿದೆ.
ಆಸ್ಪತ್ರೆಯು ದಶಮನೋತ್ಸವ ಪೂರೈಸುವ ಸಂದರ್ಭದಲ್ಲಿ ಮೇ 1, 2023 ರಂದು ಎಲ್ಲಾ ವಿಭಾಗಗಳ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಶಿಬಿರದ ಸೌಲಭ್ಯವನ್ನು ಒಂದು ತಿಂಗಳಿಗೆ ಉಚಿತವಾಗಿ ಒದಗಿಸಲಾಗುತ್ತದೆ.


ಕೆಸಿ ವ್ಯಾಲಿ ನೀರುನಿಂದಾಗಿ ಈ ಭಾಗದ ಜನರಿಗೆ ವರದವಾಗಲಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್

ಶ್ರೀನಿವಾಸಪುರ 2 : ಕೆಸಿ ವ್ಯಾಲಿ ನೀರುನಿಂದಾಗಿ ಈ ಭಾಗದ ಜನರಿಗೆ ವರದವಾಗಲಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.
ತಾಲೂಕಿನ ವೆಲಗಲಬುರ್ರೆ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದವತಿಯಿಂದ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಈ ಹಿಂದೆ ಜಿಲ್ಲೆಯಲ್ಲಿ ನೀರಿನ ಮಟ್ಟವು 1400 ಅಡಿಗಳಷ್ಟು ಆಳಕ್ಕೆ ದಾಟಿತ್ತು, ಆದರೆ ಇಂದು ನೀರಿನ ಮಟ್ಟವು 600 ಕ್ಕೆ ಬಂದಿರುವುದು ಸಂತಸದ ವಿಚಾರ ಎನಿಸಿದೆ. ಕಾಂಗ್ರೆಸ್ ಪಕ್ಷವು ಆಡಳಿತಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ವಿತರಣೆ 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಪಕ್ಷಾತೀತವಾಗಿ ಮನೆಗಳನ್ನು ನೀಡಲಾಗುವುದು, ಸಿಸಿ ರಸ್ತೆ, ಸರ್ಕಾರಿ ಶಾಲೆಗಳ ಪುನಃಶ್ಚೇತನ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನಾನು ನಿಮ್ಮ ಸೇವೆ ಮಾಡಲ್ಲಿಕ್ಕೆ ಅವಕಾಶ ಮಾಡಿಕೊಡಿ. ನೀವು ನನ್ನನ್ನು ಗೆಲ್ಲಿಸುವುದರ ಮೂಲಕ ಆರ್ಶೀವಾದ ಮಾಡಿದರೆ ವಿಧಾನ ಸೌದದಲ್ಲಿ ನಿಮ್ಮ ಪರವಾಗಿ ದ್ವನಿ ಎತ್ತುತ್ತೇನೆ ಎಂದರು . ಇಲ್ಲವಾದರೆ ನನ್ನ ತೋಟಕ್ಕೆ ಹೋಗಿ ಕುರಿ, ಮೇಕೆ ಮೇಯಿಸಿಕೊಂಡು ವಿಶ್ರಾಂತಿ ಪಡೆಯುತ್ತೇನೆ ಎಂದರು.
ಆಂಬೇಡ್ಕರ್ ರವರ ತತ್ವದ ಹಾಗೂ ಆಶಯದ ಬಗ್ಗೆ ಹೋರಾಟ ಮಾಡುತ್ತಾ ಬಂದಿದ್ದೇನೆ . ಯುವ ಸಮುದಾಯವು ಅಂಬೇಡ್ಕರ್ ವಿಚಾರ ಧಾರೆಗಳನ್ನು ಅರಿತುಕೊಳ್ಳಬೇಕು.
ಕೇಂದ್ರ ಸರ್ಕಾರ ವೈಪಲ್ಯದ ಯೋಜನೆಗಳ ವಿರುದ್ದ ಟಾಂಗ್ ನೀಡಿದರು. ಎಂಎಲ್‍ಸಿ ಅನಿಲ್‍ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಜನ್ನಘಟ್ಟ ಕೃಷ್ಣಪ್ಪ, ತೋಟಗಾರಿಕೆ ವಿಶ್ವವಿದ್ಯಾನಿಲಯದ ನಿರ್ದೇಶಕ ಮಾದಮಂಗಲ ಮಂಜುನಾಥ್, ಕೋಲಾರ ಜಿಲ್ಲಾ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಶಶಿಧರ್, ಸುಗಟೂರು ಸೊಸೈಟಿ ಅಧ್ಯಕ್ಷ ಬಾಬು, ಗ್ರಾ.ಪಂ. ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ಪಿ.ಎಸ್.ನಾಗೇಂದ್ರಶೆಟ್ಟಿ, ಸುಗಟೂರು ವಿಶ್ವನಾಥ್, ಮುಳ್ಳಳ್ಳಿ ಚಂದ್ರು, ಸುಮನ್, ಕೇಶವ, ಡಾ.ಮಂಜುನಾಥ್, ವಿ.ಪ್ರಕಾಶ್, ವಿಜಯಕುಮಾರ್, ಮುರಳಿ, ಸಂತೋಷ್, ನವೀನ್ , ಅಭಿಲಾಷ್ ಇದ್ದರು
.

ಡಾ.ಹೆಚ್. ಶಾಂತಾರಾಮ್ ಹೆಸರಿನಲ್ಲಿ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ 2021ರಿಂದ 2022ರ ಅವದಿ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಕೊಡ ಮಾಡುವ ಪ್ರಶಸ್ತಿಗೆ ಅಹ್ವಾನ

Dark northern lights gradient blur abstract color background pattern design.

ಕುಂದಾಪುರ : ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ.ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಗಳನ್ನು ಪರಿಗಣಿಸಲಿದ್ದು, 2021ರಿಂದ 2022ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು ಅಥವಾ ಲೇಖಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಮೇ 20ರೊಳಗೆ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ -576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ.
ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಹದಿನೈದು ಸಾವಿರ ರೂಪಾಯಿಯೊಂದಿಗೆ ಬೆಳ್ಳಿಫಲಕ ನೀಡಲಾಗುವುದೆಂದು ಪ್ರಶಸ್ತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ – 9449257263 ಸಂಪರ್ಕಿಸಬಹುದು.

ಜೆಸಿಐ ಕುಂದಾಪುರ ಸಿಟಿ ಘಟಕದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ನರ್ಸ್ ರಾಧಿಕಾರವರಿಗೆ ಸನ್ಮಾನ

ಜೆಸಿಐ ಕುಂದಾಪುರ ಸಿಟಿ ಘಟಕದ ಆಶ್ರಯದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಎಂಬ ಕಾರ್ಯಕ್ರಮದಲ್ಲಿ ಎಲೆಮರೆಯ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಕುಂದಾಪುರದ ಸುಮುಖ ಮಿನಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ತಿಂಗಳ ಮೌನ ಸಾಧಕರಾಗಿ ಕುಂದಾಪುರದ ಶ್ರೀ ರಾಮಕೃಷ್ಣ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ರಾಧಿಕಾ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಪೂರ್ವ ವಲಯ ಅಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ವಲಯ ಉಪಾಧ್ಯಕ್ಷರಾದ ಅಭಿಲಾಶ್ ಬಿ ಏ, ವಲಯದ ವಿವಿಧ ಘಟಕಗಳ ಘಟಕ ಅಧ್ಯಕ್ಷರುಗಳಾದ ಅನಿಲ್ ಕುಮಾರ್, ಜ್ಯೋತಿಶಂಕರ್, ಪ್ರದೀಪ್ ಶೆಟ್ಟಿ, ನಾಗೇಂದ್ರ ಪ್ರಭು ಉಪಸ್ಥಿತರಿದ್ದರು. ಘಟಕದ ಪೂರ್ವ ಅಧ್ಯಕ್ಷರುಗಳಾದ ಗಿರೀಶ್ ಹೆಬ್ಬಾರ್ ರಾಘವೇಂದ್ರ ನಾವಡ, ನಾಗೇಶ್ ನಾವಡ, ಮಂಜುನಾಥ ಕಾಮತ್, ಶ್ರೀಧರ್ ಸುವರ್ಣ, ವಿಜಯ್ ಭಂಡಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಸೋನಿ ಡಿಕೋಸ್ಟ ಅವರು ವಹಿಸಿದ್ದರು. ಪ್ರೇಮ ಡಿಕುನ್ನ ಧನ್ಯವಾದ ಸಮರ್ಪಿಸಿದರು.

ಮತದಾನವೆಂದರೆ ಸಂವಿಧಾನದ ಪ್ರಕಾರ ೧೮ ವರ್ಷ ತುಂಬಿದ ಪ್ರಾಯದ ಪ್ರತಿಯೊಬ್ಬರು ಆ ಪವಿತ್ರ ಹಕ್ಕನ್ನು ಚಲಾಯಿಸಲೇಬೇಕು:ಜಿ.ಎಸ್.ಸತೀಶ್‌ಕುಮಾರ್

ಶ್ರೀನಿವಾಸಪುರ ೧ : ಮತದಾನವೆಂದರೆ ನಮ್ಮ ದೇಶದ ಸಂವಿಧಾನದ ಪ್ರಕಾರ ೧೮ ವರ್ಷ ತುಂಬಿದ ಪ್ರಾಯದ ಪ್ರತಿಯೊಬ್ಬರು ಆ ಪವಿತ್ರ ಹಕ್ಕನ್ನು ಚಾಲಾಯಿಸಲೇಬೇಕು. ನಮ್ಮ ಮತ ಬಹಳ ಪವಿತ್ರವಾದದ್ದು, ಅದು ನಮ್ಮ ಹಕ್ಕು ಅದರ ಜೊತೆಗೆ ನಮ್ಮ ಕರ್ತವ್ಯವೂ ಇದೆ. ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಹಾಗು ತಾ.ಪಂ.ಇಒ ಜಿ.ಎಸ್.ಸತೀಶ್‌ಕುಮಾರ್ ಹೇಳಿದರು.
ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಶುಕ್ರವಾರ ವಿದ್ಯಾರ್ಥಿಗಳಿಗೆ ಹಾಗೂ ಬಸ್ ಚಾಲಕರಿಗೆ ಪ್ರಯಾಣಿಕರಿಗೆ ಮತದಾನದ ಅರಿವು ಕರಪತ್ರಗಳನ್ನು ನೀಡುವುದರ ಮೂಲಕ ಮಾತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವಕರಿಗೆ ಚುನಾವಣೆಯಲ್ಲಿ ಯುವ ಮತದಾರರ ಪಾತ್ರ ಮತ್ತು ಅವರ ಭವಿಷ್ಯಕ್ಕೆ ಮತದಾನ ಎಷ್ಟು ಮುಖ್ಯ ಎನ್ನುವದರ ಕುರಿತು ವಿವರಿಸಿದರು ಹಾಗು ಮೇ ೧೦ ರಂದು ನಡೆಯುವ ಸಾವರ್ತ್ರಿಕ ಚುನವಾಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು, ಮಾಡಿಸಬೇಕು ಎಂದು ಕರೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ಗ್ರಾಮೀಣ ಭಾಗದಲ್ಲಿ ಯುವ ಸಮುದಾಯವು ಗ್ರಾಮಗಳಲ್ಲಿನ ಹಿರಿಯರಿಗೆ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಿ, ಮತದಾನ ಮಾಡಲಿಲ್ಲವೆಂದರೆ ದೇಶದ ಪರಿಸ್ಥಿತಿ ಏನಾಗುತ್ತದೆ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿವರಿಸಿ ಕಡ್ಡಾಯವಾಗಿ ಮತದಾನವನ್ನು ಮಾಡಿಸುವುದಕ್ಕೆ ಪ್ರೇರೇಪಣೆ ನೀಡಿ ಮತದಾನವನ್ನು ಮಾಡಿಸಬೇಕು ಎಂದರು.
ಸರ್ಕಾರಿ ಮತ್ತು ಖಾಸಗಿ ಬಸ್ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಮತದಾನದ ಕರಪತ್ರ ನೀಡುವುದರ ಮೂಲಕ ಹಾಗು ಗುಲಾಬಿ ಹೂವುಗಳನ್ನು ನೀಡುವುದರ ಮೂಲಕ ಅರಿವು ಮೂಡಿಸಲಾಯಿತು.
ತಾ.ಪಂ.ಸಹಾಯಕ ನಿರ್ದೇಶಕ ರಾಮಪ್ಪ, ತಾ.ಪಂ ಸಿಬ್ಬಂದಿಗಳಾದ ಲಕ್ಷ್ಮಿಶ್ ಕಾಮತ್ , ಚೇತನ್ , ಪುರಸಭೆಯ ಕಂದಾಯ ಅಧಿಕಾರಿ ವಿ.ನಾಗರಾಜ್, ಕಂದಾಯ ನಿರೀಕ್ಷಕ ಶಂಕರ್, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ವ್ಯವಸ್ಥಾಪಕ ನವೀನಚಂದ್ರ, ಸಿಬ್ಬಂದಿಗಳಾದ ಸುರೇಶ್, ಸಂತೋಷ, ಪ್ರತಾಪ್,ಎಸ್.ಶಿವಪ್ರಸಾದ್ ಇದ್ದರು.

ಭಂಡಾರ್ಕಾರ್ಸ್ : ಉಪನ್ಯಾಸಕರಾದ ಡಾ. ಮೋಹನ ಬಿ. ಇವರ ಕೃತಿ ” ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ” ಪುಸ್ತಕ ಬಿಡುಗಡೆ ಕಾರ್ಯಕ್ರಮ

ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಾ. ಮೋಹನ ಬಿ. ಇವರ ಕೃತಿ ” ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ” ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕರಾದ ಡಾ ರೇಖಾ ಬನ್ನಾಡಿ ಅವರು ಬಸವಣ್ಣ ಮತ್ತು ನಾರಾಯಣಗುರು ಇಬ್ಬರು ಜನಸಾಮಾನ್ಯರ ಸ್ವಸ್ಥವಾಗಿ ಬದುಕಬೇಕು ಎಂಬುದರಲ್ಲಿ ನೆಲೆ ಕಂಡುಕೊಂಡವರು. ಅಂದು ಸಾಮಾಜಿಕ ವ್ಯವಸ್ಥೆಯಲ್ಲಿ ವರ್ಗ ಮತ್ತು ವರ್ಣಭೇದದಿಂದ ಶೈಕ್ಷಣಿಕ ಮತ್ತು ಸಮಾನ ಜೀವನದಲ್ಲಿ ತಾರತಮ್ಯತೆ ಇತ್ತು. ಕೇವಲ ಮಠ ಮಂದಿರಗಳಲ್ಲಿ ಶಿಕ್ಷಣ ದೊರೆಯುತ್ತಿತ್ತು. ಈ ಕಾಲಘಟ್ಟದಲ್ಲಿ ಬಸವಣ್ಣ ತಾರತಮ್ಯವನ್ನು ಎಂದಿಗೂ ಒಪ್ಪಲಿಲ್ಲ. ತನ್ನ ಸಮಾಜದ ತಾರತಮ್ಯ ನೀತಿಯ ಕುರಿತು ತನ್ನನ್ನೇ ತಾನು ಪ್ರಶ್ನೆ ಮಾಡಿಕೊಳ್ಳುತ್ತಾನೆ. ಭಕ್ತಿಯ ಆಂದೋಲನದಲ್ಲಿ ಬಸವಣ್ಣ ತನ್ನನ್ನು ಕಂಡರು. ನಾರಾಯಣಗುರುಗಳ ತತ್ವ ಆದರ್ಶಗಳು ಸಹ ಸಾಮ್ಯತೆ ಇದೆ. ಇಬ್ಬರೂ ಸಮಾಜದ ಸಮಾನ ಬದುಕಿನಲ್ಲಿ ತಮ್ಮನ್ನು ಕಂಡುಕೊಂಡವರು. ಪ್ರಜಾಸತ್ತಾತ್ಮಕತೆ ಇವರಿಬ್ಬರಲ್ಲೂ ಇತ್ತು. ಇವರಿಬ್ಬರನ್ನು ಇಂದಿನ ಭಕ್ತರು ಬಂಧಿಯಾಗಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿ ಪ್ರಕಟಿತ ಪುಸ್ತಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ, ಸತ್ಯನಾರಾಯಣ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ರಾಮಚಂದ್ರ ಆಚಾರ್ಯ ಕನ್ನಡ ವಿಭಾಗದ ಮುಖ್ಯಸ್ಥರಾದ ಮೈತ್ರಿ ಉಪಸ್ಥಿತರಿದ್ದರು.