ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲಾ ವಾರ್ಷಿಕೋತ್ಸವ

ಬಸ್ರೂರು, ಜ.6: ಇಲ್ಲಿನ ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ 18 ನೇಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

     ಅಧ್ಯಕ್ಷತೆ ವಹಿಸಿದ್ದ ಧಾರ್ಮಿಕ ಮುಖಂಡ, ಮಾಜಿ ಶಾಸಕ ಜಿ.ಅಪ್ಪಣ್ಣ ಹೆಗ್ಡೆ ಮಾತನಾಡಿ, ಕಳೆದ 18 ವರ್ಷಗಳಿಂದ ಬಸ್ರೂರಿನ ಶ್ರೀ ಶಾರದಾ ಆಂಗ್ಲಮಾಧ್ಯಮ ಶಾಲೆ ಉತ್ತಮ ಶೈಕ್ಷಣಿಕ ಪರಂಪರೆಯನ್ನು ಹೊಂದಿದೆ ಎಂದು ಹೇಳಿದರು.

   ಕಾರ್ಯಕ್ರಮ ಉದ್ಭಾಟಿಸಿದ ಶಿಕ್ಷಣ ಸಂಯೋಜಕ, ರಾಜ್ಯ ಜೆಡಿಎಸ್‌ ವಕ್ತಾರ ಮಹೇಶ್‌ ಗೌಡ ಮಂಡ್ಯ ಮಾತನಾಡಿ, ಈ ಶಾಲೆ ಉತ್ತಮ ಶೈಕ್ಷಣಿಕ ಪರಂಪರೆ ಹೊಂದಿದೆ.ಇಲ್ಲಿ ಪಾಠವಷ್ಟೆ ಅಲ್ಲದೆ ಪಠ್ಯೇತರ ಚಟುವಟಕೆಗಳಿಗೂ ಒತ್ತು ಕೊಟ್ಟಿದ್ದಾರೆ’ ಎಂದರು.

   ದುಬಾಯ್ ಫಾರ್ಜೂನ್‌ ಗ್ರೂಫ್‌ ಆಫ್‌ ಹೊಟೇಲ್ಸ್‌ ಚೆಯೆರ್ ಮೇನ್ ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ. ಸಮಾಜ ಸೇವಕ ಇಬ್ರಾಹಿಂ ಮರವಂತೆ ಹಾಗೂ ಪತ್ರಕರ್ತ ರೂಪೇಶ್‌ ಪೂಜಾರಿ ಬೈಂದೂರು ಅವರಿಗೆ ಕೋಳ್ಕೆರೆ.ರತ್ನಾಕರ ಶೆಟ್ಟಿ ಸಾಧಕ ಪ್ರಶಸ್ತಿಯನ್ನು ನೀಡಲಾಯಿತು.

     ಜಿಪಂ, ಮಾಜಿ. ಸದಸ್ಯ ಎಚ್‌. ದೇವಾನಂದ. ಶೆಟ್ಟಿ. ಶಾಲಾಡಳಿತ ಮಂಡಳಿಯ ಗಿಂಜ್‌. ಆರ್‌. ಶೆಟ್ಟಿ, ಅಬ್ದುಲ್‌ ಜುನೈಜ್‌, ಮೋನೆಸ್‌ ಮನೋಹರ್‌ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಹುಮಾನ ನೀಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮವಾಗಿ ಭಾರತೀಯ ಸಂಪ್ರದಾಯ, ಭಾರತೀಯ ಸಂಸ್ಕೃತಿ, ವೀರ ಭಾರತೀಯ ಸೈನಿಕರು, ಯಕ್ಷಗಾನ, ಹುಲಿ ನೃತ್ಯ (ಹುಲಿ ವೇಷ), ಕೋಲಾಟ, ರೈತ ನೃತ್ಯ, ಸ್ವಚ್ಛ ಭಾರತ್ ಅಭಿಯಾನ, “ಜೈ ಜೋ” ಹಾಡಿನ ಮೇಲೆ ಪಿರಾಮಿಡ್, ಹದಿಹರೆಯದ ಮಕ್ಕಳ ಪ್ರಸ್ತುತ ಸನ್ನಿವೇಶದಲ್ಲಿ ಮೈಮಿಂಗ್, ಅತ್ಯುತ್ತಮ ಐಕಾನ್ ಚಲನಚಿತ್ರಗಳ ಹಾಡುಗಳ ಪ್ರದರ್ಶನ ನಡೆದವು. ಕಾರ್ಯಕ್ರಮ ವಂದೇ ಮಾತರಂ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಗಿ, ಕೆ.ಜಿ. ಮಕ್ಕಳು ಸ್ವಾಗತ ನ್ರತ್ಯ ಮಾಡಿದರು. ಪ್ರೌಢಶಾಲೆ ಮಕ್ಕಳು ಸ್ವಾಗತ ಗೀತೆ ಹಾಡಿದರು.

    ಸಂಚಾಲಕ ಅರುಣ್‌ ಕುಮಾರ್‌ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು  ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ವರದಿ ಮಂಡಿಸಿದರು, ಶಿಕ್ಷಕಿ ರೂಪ  ಸ್ವಾಗತಿಸಿದರು. ಕಾರಕ್ರಮ ಫರಹಾ ನಿರೂಪಿಸಿದರು, ಸುಜಾತಾ ವಂದಿಸಿದರು.

ಬಡ್ಡಿರಹಿತ ಸಾಲ ವಿತರಣೆ ಮಾಡುವಲ್ಲಿ ಶಾಸಕ ಕೆ.ಅರ್.ರಮೇಶ್ ಕುಮಾರ್ ಮತದಾರರ ದಾರಿ ತಪ್ಪಿಸುತ್ತಿದ್ದಾರೆ:ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಬಡ್ಡಿರಹಿತ ಸಾಲ ವಿತರಣೆ ಮಾಡುವಲ್ಲಿ ಶಾಸಕ ಕೆ.ಅರ್.ರಮೇಶ್ ಕುಮಾರ್ ಮತದಾರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಆಪಾದಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಬಾರ್ಡ್ ಮೂಲಕ ಡಿಸಿಸಿ ಬ್ಯಾಕ್‍ಗೆ ನೀಡಿದ ಹಣದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸಾಲ ನೀಡಲಾಗುತ್ತಿದ್ದೆ. ಸಾಲ ನೀಡುವುದಕ್ಕೆ ನನ್ನ ಆಕ್ಷೇಪವಿಲ್ಲ. ಆದರೆ ಶಾಸಕರು ತಮ್ಮ ಜೇಬಿನಿಂದ ಹಣ ತೆಗೆದು ಸಾಲ ನೀಡಿದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುಷ್ಟು ಅಸ್ತಿ ಮಾಡಿಕೊಂಡಿದ್ದಾರೆ ಎಂದು ಹೇಳುವುದರ ಮೂಲಕ, ಆ ಪಕ್ಷದ ಮುಖಂಡರ ನಿಜ ಬಣ್ಣ ಬಯಲು ಮಾಡಿದ್ದಾರೆ. ಸದನದಲ್ಲಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಅವರಿಗೆ ಮಹಿಳೆಯರ ಸಬಲೀಕರಣ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಅಭಿಪ್ರಾಯಪಟ್ಟರು.
ಡಿಸಿಸಿ ಬ್ಯಾಂಕ್ ಸಾಲ ಸಾರ್ವಜನಿಕ ಸಮಾರಂಭದಲ್ಲಿ ವಿತರಿಸುವುದು ನಿಯಮ ಬಾಹಿರವಾಗಿದ್ದರೂ, ಸಾವಿರಾರು ಜನರನ್ನು ಸೇರಿಸಿ ಸಾಲ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 80 ಸಾವಿರ ಸ್ತ್ರೀ ಶಕ್ತಿ ಸಂಘಗಳಿವೆ. ತಾಲ್ಲೂಕಿನಲ್ಲಿ ಸುಮಾರು 15 ಸಾವಿರ ಸಂಘಗಳಿವೆ. ಆ ಪೈಕಿ 1 ಸಾವಿರ ಸಂಘಗಳು ನಿಯಮಬಾಹಿರವಾಗಿವೆ. 50 ಕೋಟಿ ಸಾಲ ನೀಡಲಾಗಿದ್ದು ಆ ಪೈಕಿ 20 ಕೋಟಿ ದುರ್ಬಳಕೆಯಾಗಿದೆ. ಈ ಕುರಿತು ಸಿಬಿಐ ತನಿಖೆ ನಡೆಸುವಂತೆ ಮುಖ್ಯ ಮಂತ್ರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ನಾರಾಯಣಸ್ವಾಮಿ, ಪುರಸಭೆ ಸದಸ್ಯ ಬಿ.ವೆಂಕಟರೆಡ್ಡಿ, ಮುಖಂಡರಾದ ಆನಂದ್, ಏಜಾಜ್ ಪಾಷ, ಪೂಲ ಶಿವಾರೆಡ್ಡಿ, ಜಗದೀಶ್, ಮಂಜುನಾಥ್ ಇದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗುತ್ತಾರೆ- ಸ್ತ್ರೀಶಕ್ರಿ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ಬಡ್ಡಿರಹಿತ ಸಾಲದ ಮೊತ್ತ ಹೆಚ್ಚಿಸಲಾಗುವುದು:ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗುತ್ತಾರೆ. ಆಗ ಸ್ತ್ರೀಶಕ್ರಿ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ನೀಡುವ ಬಡ್ಡಿರಹಿತ ಸಾಲದ ಮೊತ್ತ ಹೆಚ್ಚಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಮುದಿಮಡಗು ಗ್ರಾಮದಲ್ಲಿ ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 65 ಸ್ತ್ರೀಶಕ್ತಿ ಸಂಘಗಳಿಗೆ ರೂ.3.25 ಕೋಟಿ ಹಾಗೂ 99 ರೈತರಿಗೆ ರೂ.99.65 ಲಕ್ಷ ಬಡ್ಡಿರಹಿತ ಸಾಲ ವಿತರಿಸಿ ಮಾತನಾಡಿದರು.
ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ತಲಾ ಈಗ ನೀಡಲಾಗುತ್ತಿರುವ ರೂ.50 ಸಾವಿರಕ್ಕೆ ಬದಲಾಗಿ ರೂ.1 ಲಕ್ಷ ಹಾಗೂ ರೈತರಿಗೆ ಈಗ ನೀಡಲಾಗುತ್ತಿರುವ ರೂ.3 ಲಕ್ಷಕ್ಕೆ ಬದಲಾಗಿ ರೂ.5 ಲಕ್ಷದ ವರೆಗೆ ಬಡ್ಡಿರಹಿತ ನೀಡುವ ಸಂಕಲ್ಪ ಮಾಡಲಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಸಂಕಲ್ಪ ಕಾರ್ಯರೂಪಕ್ಕೆ ಬರಲಿದೆ. ಆ ಬಗ್ಗೆ ಅನುಮಾನ ಬೇಡ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಜಿಎಸ್‍ಟಿ ಮೂಲಕ ಬಡವರ ಜೀವ ಹಿಂಡುತ್ತಿದ್ದಾರೆ. ಕುರಿ ವಿಮೆ ಮಾಡಿಸಲೂ ಜಿಎಸ್‍ಟಿ ಕಟ್ಟಬೇಕಾಗಿ ಬಂದಿದೆ. ಮಕ್ಕಳು ಮರಿ ಇಲ್ಲದ ಪ್ರಧಾನಿಗೆ ಬಡವರು ಮಕ್ಕಳನ್ನು ಸಾಕಬೇಕಾದಾಗ ಪಡುವ ಕಷ್ಟ ಅರ್ಥವಾಗುವುದಿಲ್ಲಎಂದು ಹೇಳಿದರು.
ಶ್ರೀಮಂತ ಉದ್ಯಮಿಗಳು ಸಾವಿರಾರು ಕೋಟಿ ಬ್ಯಾಂಕ್ ಸಾಲ ಪಡೆದು ದೇಶದಿಂದ ಪಲಾಯನ ಮಾಡಿದ್ದಾರೆ. ಆದರೆ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರ ಮೂಲಕ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಮುದಿಮಡಗು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಬಗ್ಗಲಗಟ್ಟ ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷ ರಾಮಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು, ಮಾಜಿ ಅಧ್ಯಕ್ಷ ಎಸ್.ವಿ.ಸುಧಾಕರ್, ಡಿಸಿಸಿ ಬ್ಯಾಖ್ ನಿರ್ದೇಶಕ ವೆಂಕಟರೆಡ್ಡಿ, ಮುಖಂಡರಾದ ಕೊಂಡಸಂದ್ರ ವೆಂಕಟಶಿವಾರೆಡ್ಡಿ, ಲಕ್ಷ್ಮಣ್, ವಿಶ್ವನಾಥರೆಡ್ಡಿ, ಕೃಷ್ಣಮೂರ್ತಿ, ಬೈರೆಡ್ಡಿ, ಗಣೇಶ್ ರೆಡ್ಡಿ, ಸೋಮು, ಕೃಷ್ಣಾರೆಡ್ಡಿ, ಚಿಕ್ಕರೆಡ್ಡಪ್ಪ, ಅಮರನಾರಾಯಣ, ಅಮರನಾಥ್, ಶಂಕರರೆಡ್ಡಿ, ಜಯಣ್ಣ ಇದ್ದರು.

ಮಾವು ಬೆಳೆಗಾರರಿಗೆ, ಸರ್ಕಾರ ಹಾಗೂ ಫಸಲ್ ಬಿಮಾ ಯೋಜನೆ ಅನುಷ್ಠಾನ ಕಂಪನಿಯಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು:ಜಿಲ್ಲಾಧಿಕಾರಿ ವೆಂಕಟ್ ರಾಜಾ

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ, ಸರ್ಕಾರ ಹಾಗೂ ಫಸಲ್ ಬಿಮಾ ಯೋಜನೆ ಅನುಷ್ಠಾನ ಕಂಪನಿಯಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಆಡಳಿತ ರೈತರ ಹಿತರಕ್ಷಣೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಆದರೆ ಮಾಹಿತಿ ಕೊರತೆ ಹಾಗೂ ತಪ್ಪು ಸಂವಹನದ ಪರಿಣಾಮವಾಗಿ ಅದು ರೈತರ ಗಮನಕ್ಕೆ ಬರುತ್ತಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಮಾವು ಬೆಳೆಗಾರರು ಹಾಗೂ ಇತರ ರೈತರಿಗೆ ಉಂಟಾಗಿರುವ ಬೆಳೆ ನಷ್ಟ ಹಾಗೂ ಪರಿಹಾರ ನೀಡುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ನಮ್ಮ ಪ್ರಯತ್ನದ ಅರಿವು ಅಧಿಕಾರಿಗಳಿಗಿದೆ. ಜಿಲ್ಲೆಯಲ್ಲಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯದಲ್ಲಿಯೇ ಮಾದರಿ ಪರಿಹಾರ ದೊರೆಯಲಿದೆ ಎಂದು ಹೇಳಿದರು.
ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ಪದಾಧಿಕಾರಿಗಳಾದ ಚಿನ್ನಪ್ಪರೆಡ್ಡಿ, ಫಾರುಕ್, ಪಿ.ಆರ್.ಸೂರ್ಯನಾರಾಯಣ, ಪಾತಕೋಟ ನವೀನ್ ಕುಮಾರ್, ಪ್ರಭಾಕರ್ ಗೌಡ, ಎನ್.ಶ್ರೀರಾಮರೆಡ್ಡಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ರಾಜ್ಯ ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಶಕೀಲ್ ಅಹ್ಮದ್, ತಹಶೀಲ್ದಾರ್ ಶಿರಿನ್ ತಾಜ್, ಹಿರಿಯ ತೊಟಗಾರಿಕೆ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕೃಷಿ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ಮಾವು ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದರು.
ಡಿವೈಎಸ್‍ಪಿ ಜಯಶಂಕರ್, ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ರೈತ ಮುಖಂಡರಾದ ಬೈಚೇಗೌಡ, ಬೈರಾರೆಡ್ಡಿ, ಶ್ರೀನಿವಾಸರೆಡ್ಡಿ, ಈರಪ್ಪರೆಡ್ಡಿ, ಅಬ್ದುಲ್, ನಳಿನಿ, ಶಾಗತ್ತೂರು ನಾಗರಾಜ್, ನಾಗರಾಜ್ ಇದ್ದರು.
ಧರಣಿ: ಜಿಲ್ಲಾಧಿಕಾರಿ ಸಭೆಗೆ ಮೊದಲು, ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ಆಗಮಿಸಿದ್ದ ಮಾವು ಬೆಳೆಗಾರರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪಟ್ಟಣದ ಮುಳಬಾಗಿಲು ವೃತ್ತದಿಂದ ಎಂಜಿ ರಸ್ತೆಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದರು. ಜಿಲ್ಲಾಧಿಕಾರಿ ಆಗಮನದೊಂದಿಗೆ ಧರಣಿ ಹಿಂಪಡೆದು, ಸಭೆಯಲ್ಲಿ ಭಾಗವಹಿಸಿದರು.

ಅವರೆಕಾಯಿ ವಹಿವಾಟು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಿ- ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರ ಪ್ರತಿಭಟನೆ

ಶ್ರೀನಿವಾಸಪುರ: ಅವರೆ ಕಾಯಿ ವಹಿವಾಟು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಪುರಸಭೆ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವೇದಿಕೆ ಯುವಸೇನೆ ಅಧ್ಯಕ್ಷ ಶ್ರೀನಾಥ್ ಮಾತನಾಡಿ, ಪಟ್ಟಣದ ಏಕೈಕ ಮುಖ್ಯ ರಸ್ತೆಯಾದ ಎಂ.ಜಿ ರಸ್ತೆಯ ಉದ್ದಗಲಕ್ಕೂ ಪ್ರತಿ ದಿನ ಅವರೆ ಕಾಯಿ ವಹಿವಾಟು ನಡೆಸುವುದರಿಂದ, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಾಗರಿಕರ ಓಡಾಟಕ್ಕೂ ತೊಂದರೆಯಾಗಿದೆ. ವಾಹನ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದೆ ಎಂದು ಹೇಳಿದರು.
ಪಟ್ಟಣದ ಚಿಂತಾಮಣಿ ಸರ್ಕ್‍ಲ್‍ನಿಂದ ಇಂದ್ರಾ ಭವನ್ ವೃತ್ತದ ವರೆಗೆ ರಸ್ತೆ ವಿಸ್ತರಣೆ ಹಾಗೂ ದುರಸ್ತಿ ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿದ್ದು, ವಾಹನ ಸಂಚಾರ ಸಾಧ್ಯವಾಗಿಲ್ಲ. ಮುಖ್ಯ ರಸ್ತೆಗಳಲ್ಲಿ ಒಂದಾದ ಚಿಂತಾಮಣಿ ಸರ್ಕಲ್ ರಸ್ತೆ ಮುಚ್ಚಿರುವುದರಿಂದ ನಾಗರಿಕರಿಗೆ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದರು.
ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್ ಅವರಿಗೆ ತಮ್ಮ ಬೇಡಿಕೆ ಒಳಗೊಂಡ ಮನವಿ ಪತ್ರ ನೀಡಿದರು.
ಸಂಘಟನೆ ಜಿಲ್ಲಾಧ್ಯಕ್ಷ ಸುಬ್ರಮಣಿ, ಮುಖಂಡರಾದ ಧನಂಜಯ್, ರಾಜೀವ್, ನವೀನ್, ಸುನಿಲ್, ನಿಶಾಂತ್ ಇದ್ದರು.

ಕಾರ್ಯಕರ್ತರು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು:ಎಂ.ಎಚ್.ರಾಮಾಂಜಿನಪ್ಪ

ಶ್ರೀನಿವಾಸಪುರ: ಕಾರ್ಯಕರ್ತರು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ನವ ಕರ್ನಾಟಕ ಸ್ವಾಭಿಮಾನಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಎಚ್.ರಾಮಾಂಜಿನಪ್ಪ ಹೇಳಿದರು.
ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ವೇದಿಕೆಯ ತಾಲ್ಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ನಾಡು ನುಡಿ ಅಭಿವೃದ್ಧಿ ಹಾಗೂ ಗಡಿ ಪ್ರದೇಶದಲ್ಲಿ ನಾಗರಿಕರಿಗೆ ಮೂಲ ಸೌಕರ್ಯ ದೊರಕಿಸಿಕೊಡಲು ಪ್ರಯತ್ನಿಸಬೇಕು ಎಂದು ಹೇಳಿದರು.
ವೇದಿಕೆ ಪ್ರಧಾನ ಕಾರ್ಯದರ್ಶಿ ಸಾದಿಕ್ ಅಹ್ಮದ್ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರೂ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಬೇಕು. ಕನ್ನಡಿಗರು ಸ್ವಾಭಿಮಾನದಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು. ಭಾಷೆ ಮತ್ತು ಬದುಕು ಜತೆಯಾಗಿ ಸಾಗಬೇಕು ಎಂದು ಹೇಳಿದರು.
ವೇದಿಕೆ ಗೌರವಾಧ್ಯಕ್ಷ ಸಿ.ಎಸ್.ನರಸಿಂಹಯ್ಯ, ಸಂಚಾಲಕ ದೇವರಾಜ್, ಜಿಲ್ಲಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ವೆಂಕಟೇಶಗೌಡ, , ಮುಖಂಡರಾದ ಅಬ್ದುಲ್ಲಾ, ಜಿ.ಎಂ.ಕೃಷ್ಣಪ್ಪ, ಸಾಬೀರ್ ಮಾತನಾಡಿದರು.
ಈ ಸಂದರ್ಭದಲ್ಲಿ ವೇದಿಕೆಯ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳಾಗಿ ಜಿ.ಎಸ್.ರಾಜು, ಕೆ.ವಿ.ವೆಂಕಟೇಶ್ (ಅಧ್ಯಕ್ಷ), ಕೆ.ಸಿ.ಮಂಜುನಾಥ, ಶಿವಪ್ಪ, ಸಾಬೀರ್, (ಉಪಾಧ್ಯಕ್ಷರು), ಲಕ್ಷ್ಮಣರೆಡ್ಡಿ (ಕಾರ್ಯಾಧ್ಯಕ್ಷ), ಕೆ.ವಿ.ಕುಮಾರ್, ಪ್ರಧಾನ ಕಾರ್ಯದರ್ಶಿ, ಕಾರ್ತಿಕ್, ನರೇಶ್, ಅರುಣ್ ಕುಮಾರ್, ಸುಹೇದ್ ಅಹ್ಮದ್ (ಕಾರ್ಯದರ್ಶಿಗಳು), ಕೆ.ಜಿ.ಶ್ರೀನಿವಾಸ್ (ಸಹ ಕಾರ್ಯದರ್ಶಿ), ಅಂಬರೀಶ್ (ಲಕ್ಷ್ಮೀಪುರ ಹೋಬಳಿ ಅಧ್ಯಕ್ಷ) ಅವಿರೋಧ ಆಯ್ಕೆಯಾಗಿದ್ದಾರೆ.

ಕುಂದಾಪುರ: ಇಬ್ಬರು ಅಂತಾರಾಜ್ಯ ಕಳ್ಳರ ಬಂದನ 16 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕುಂದಾಪುರ: ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಇದು ಕಳೆದ ಮೂರು ತಿಂಗಳ ಹಿಂದೆ ನಡೆದ ಪ್ರಕರಣವಾಗಿದೆ.

ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಮತ್ತು ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಹಾಶಿಮ್ ನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ.

ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ, ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ, ಕಳವು ಮಾಡಿದ ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ಜುವೆಲ್ಸರ್ಸ್ ಒಂದರಲ್ಲಿ ಮಾರಾಟ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ . 300 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 1481 ಗ್ರಾಂ ಬೆಳ್ಳಿ ಸಹಿತ ಒಟ್ಟು 15 ಲಕ್ಷ ಮೌಲ್ಯದ ಸೊತ್ತುಗಳನ್ನು ಮತ್ತು ನಗದು 1 ಲಕ್ಷ  ವಶಕ್ಕೆ ಪಡೆಯಲಾಗಿದ್ದು ಆಭರಣಗಳನ್ನು ಮಂಜೇಶ್ವರ ಮಳಿಗೆಯಲ್ಲಿ ಆರೋಪಿಗಳನ್ನು ಮಾರಾಟ ಮಾಡಿದ್ದನ್ನು ಜಪ್ತಿ ಮಾಡಲಾಗಿದೆ. ರಾಜ್ಯದ ಹಲವಾರು ಕಡೆ ಕಳ್ಳತನ ಮಾಡಿದ ಈ ಅಂತರ್ ರಾಜ್ಯ ಕಳ್ಳರನ್ನು ಜ.6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಎಸಿ ಅಕ್ಷಯ್‌ ಎಂ. ಎಚ್‌., ಎಎಸ್ಪಿ ಎಸ್‌. ಟಿ. ಸಿದ್ದಲಿಂಗಪ್ಪ ಅವರ ನಿರ್ದೇಶನದಂತೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್‌. “ನೇತೃತ್ವದಲ್ಲಿ ಕುಂದಾಪುರ ಎಸ್‌ಐಗಳಾದ ಸದಾಶಿವ ಗವರೋಜಿ, ಪ್ರಸಾದ್‌ ಕುಮಾರ್‌ ಕೆ. ,ಎಎಸ್‌ಐ ಸುಧಾಕರ, ಸಿಬಂದಿಯಾದ ಸಂತೋಷ ಕುಮಾರ್‌ ಕೆ.ಯು, ಸಂತೋಷ ಕುಮಾರ್‌, ರಾಮ ಪೂಜಾರಿ ಹಾಗೂ ಜಿಲ್ಲಾ ಪೊಲೀಸ್‌ ಕಚೇರಿಯ ತಾಂತ್ರಿಕ ವಿಭಾಗದ ದಿನೇಶ್‌ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿತ್ತು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ
ಬ್ಯಾಂಕಿಂಗ್ ಉದ್ಯೋಗದ ಅರಿವು ಕಾರ್ಯಕ್ರಮ

ಶಿರ್ವ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿಪುಲ ಉದ್ಯೋಗಾವಕಾಶಗಳಿದ್ದು ಅದನ್ನು ಪಡುವುದರಲ್ಲಿ ಯುವಕರಿಗೆ ಸರಿಯಾದ ಮಾಹಿತಿ ಮತ್ತು ಮಾರ್ಗದರ್ಶನದ ಅರಿವು ಇಂದು ಅತ್ಯಂತ ಅಗತ್ಯವಾಗಿದೆ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಬ್ಯಾಂಕಿಂಗ್ ಉದ್ಯೋಗದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಪೃಥ್ವಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಜುಕೇಶನ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಸಾಮಗಾರವರು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ ವಿಎಚ್ ಇನ್ನಂಜೆ ಪಿಯು ಕಾಲೇಜಿನ ಪ್ರಾಂಶುಪಾಲರು ಶ್ರೀ ಎಪಿ ಕೊಡಂಚಾ ರವರು ಬ್ಯಾಂಕ್ ಕೋಚಿಂಗ್ ಮತ್ತೆ ಟ್ರೈನಿಂಗ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಪ್ರಾತ್ಯಕ್ಷಿತವಾಗಿ ಕಾರ್ಯಗಾರವನ್ನು ನೆರವೇರಿಸಿದರು.

ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಉದ್ಯೋಗಾವಕಾಶಗಳಿವೆ. ವಿದ್ಯಾರ್ಥಿ ದೆಸೆಯಲ್ಲೇ ಇದರ ಬಗ್ಗೆ ಸೂಕ್ತ ತಯಾರಿಕೆಯನ್ನು ನಡೆಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಶ್ಮಿ ಶರ್ಮಿಳಾ ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು. ಅಂತಿಮ ವರ್ಷದ ಬಿಎ, ಬಿಕಾಂ,ಬಿಸಿಎ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಅನುಪ್ ನಾಯಕ್ ಮತ್ತು ಜಾನ್ಸಿ ಸಹಕರಿಸಿದ್ದರು.ರಿಯಾ ಸೇರಿನಾ ಡಿಸೋಜಾ ವಂದಿಸಿ, ಶೆಟ್ಟಿ ತರುಣ್ ರಮೇಶ್ ಸ್ವಾಗತಿಸಿದರು. ಲೋಬೋ ಆನ್ ರಿಯಾ ನೇವಿಲ್ ಕಾರ್ಯಕ್ರಮ ನಿರೂಪಿಸಿದರು.