ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ

ಶಿರ್ವ: ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮ ವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ ನಮ್ಮ ರಾಷ್ಟ್ರದ ಸೇನೆಯ ಅಪಾರ ಕೊಡುಗೆ ಎನ್ ಸಿ ಸಿ ಕ್ಯಾಡೆಟ್ ಗಳಿಗಿವೆ. ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್‌ಸಿಸಿ ದಿನಾಚರಣೆಯನ್ನು ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿ,ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರೀಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು.ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆ ವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ. ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನವನ್ನು ಮಾಡಿ, ಅವರನ್ನು ಸ್ಮರಿಸುತ, ನಮ್ಮ ಸಂವಿಧಾನ ಪ್ರಪಂಚದಲ್ಲಿ ಉತ್ತಮವಾದ ಸಂವಿಧಾನ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ, ಎಲ್ಲರಿಗೂ ಶುಭಹಾರೈಸಿದರು.

ಕ್ಯಾಡೆಟ್ ಸೋನಾಲಿ ಕುಲಾಲ್ ಎನ್‌ಸಿಸಿ ದಿನದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿ, ಕ್ಯಾಡೆಟ್ ಉಳಿದ್ರಾ ಖುಷಿ ಸಂವಿಧಾನ ದಿನದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು

ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಲಾಯ್ ವಿನ್ಸ್ಟನ್ ಫರ್ನಾಂಡಿಸ್, ಸ್ಮಿತಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ, ವಿಜೇತ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ,ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್, ಶೆಟ್ಟಿಗಾರ ಹೇಮಶ್ರೀ ಸುದರ್ಶನ್ , ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್.ಸಿ.ಸಿ ಅಧಿಕಾರಿ ಜಾನ್ ವಿಲಿಯಂ ವೇಗಾಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಸ್ವಾಗತಿಸಿ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ವಂದಿಸಿದರು. ಸುಶ್ಮಿತಾ ಎಸ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ : ರಾಜೇಂದ್ರ ಪ್ರಸಾದ್

ಶ್ರೀನಿವಾಸಪುರ : ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಅಭಿವೃದ್ಧಿ ಪರವಾದ ಅಭ್ಯರ್ಥಿ ಆಯ್ಕೆಗಾಗಿ ಕಾಯುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು.

ಪಟ್ಟಣದ ಮುಳಬಾಗಲು ವೃತ್ತದ ಸಮೀಪ ಸಭಾಂಗಣದಲ್ಲಿ ಏರ್ಪಡಿಸ ಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ನಾಲ್ಕು ದಶಕಗಳಿಂದ ಇಬ್ಬರು ವ್ಯಕ್ತಿಗಳು ಮಾತ್ರ ತಾಲ್ಲೂಕಿನ ಶಾಸಕರಾಗಿ ಆಯ್ಕೆಯಾಗುತ್ತ ಬಂದಿದ್ದಾರೆ . ಆದರೆ ಅಭಿವೃದ್ಧಿ ವಿಷಯದಲ್ಲಿ ಕ್ಷೇತ್ರ ಹಿಂದುಳಿದೆ ಎಂದು ಹಾಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಹೆಸರು ಹೇಳದೆ ಟೀಕಿಸಿದರು.

ಕ್ಷೇತ್ರದಲ್ಲಿ ಮುಖಂಡ ಗುಂಜೂರು ಶ್ರೀನಿವಾಸರೆಡ್ಡಿ ಪರ್ಯಾಯ ರಾಜಕೀಯ ಶಕ್ತಿಯಾಗಿ ರೂಪಗೊಳ್ಳುತ್ತಿದ್ದಾರೆ. ಎರಡು ವರ್ಷಗಳಿಂದ ತಮ್ಮನ್ನು ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದನ್ನು ಸಹಿಸದ ಕೆಲವು ರಾಜಕೀಯ ಮುಖಂಡರು ಅವರ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಗೆದ್ದರೂ ತಾಲ್ಲೂಕಿನಲ್ಲಿ ವಾಸಿಸುವುದಿಲ್ಲ ಎಂದೆಲ್ಲಾ ಹೇಳಿ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಹೇಳಿದರು .

ಮುಖಂಡ ಗುಂಜೂರು ಶ್ರೀನಿವಾಸರೆಡ್ಡಿ ಮಾತನಾಡಿ , ತಾಲ್ಲೂಕಿನಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ . ಜೆಡಿಎಸ್ ನಲ್ಲಿ ನಾಯಕತ್ವದ ಕೊರತೆ ಇದೆ . ಇತರ ಪಕ್ಷಗಳಿಗೆ ನೆಲೆಯಿಲ್ಲ . ಹಾಗಾಗಿ ಮತದಾರರ ಮನೋಭಾವದಲ್ಲಿ ಬದಲಾವಣೆ ಕಂಡು ಬರುತ್ತಿದೆ .

ಕ್ಷೇತ್ರದಲ್ಲಿನ ಸಾಂಪ್ರದಾಯಿಕ ಎದು ರಾಳಿಗಳ ಬಗ್ಗೆ ಒಲವು ಕಡಿಮೆಯಾಗುತ್ತಿದೆ . ಇದು ಬದಲಾವಣೆಗೆ ದಾರಿಮಾಡಿಕೊಡುತ್ತದೆ . ಚುನಾವಣೆಗೆ ಸ್ಪರ್ಧಿಸುವ ವಿಷಯದಲ್ಲಿ ಬೆಂಬಲಿಗರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದು ಹೇಳಿದರು .

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜ ಶೇಖರರೆಡ್ಡಿ ಮಾತನಾಡಿ , ತಾಲ್ಲೂಕಿ ನಲ್ಲಿ ವಿವಿಧ ರಾಜಕೀಯ ಪಕಗಳ ಕಾರ್ಯಕರ್ತರು ಬದಲಾವಣೆ ಬಯಸಿ , ಗುಂಜೂರು ಶ್ರೀನಿವಾಸರೆಡ್ಡಿ ಅವರ ಬೆನ್ನಿಗೆ ನಿಂತಿದ್ದಾರೆ .

ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿ ಬಯಸಿದ ಅನ್ಯ ಪಕ್ಷಗಳ ಕೆಲವು ಮುಖಂಡರು ಹಾಗೂ ಕಾರ್ಯಕರ್ತರು ನಿಷ್ಠೆ ಬದಲಿಸಿದ್ದಾರೆ ಎಂದು ಹೇಳಿದರು .

ಬೇರೆ ಬೇರೆ ಪಕ್ಷಗಳ ಮುಖಂಡರಾದ ಸಮಿವುಲ್ಲಾ , ನಾಗೇಶ್ , ಸಾಗರ್ , ಕೀರ್ತಿ , ನಾಗಭೂಷಣ್ , ನವೀನ್ , ಸುರೇಶ್ , ರವಿ ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು .

ಮುಖಂಡರಾದ ಪಠಾಣ್ ಸಮೀಉಲ್ಲಾ ಖಾನ್, ದೊರೆಸ್ವಾಮಿ , ಶ್ರೀರಾಮರೆಡ್ಡಿ , ಗವಿರೆಡ್ಡಿ , ಈರಪ್ಪ , ರಮೇಶ್ , ಶ್ರೀನಾಥ್ , ಚಂದ್ರಪ್ಪ ಕೆಂಪರೆಡ್ಡಿ ಇದ್ದರು .

ಭಂಡಾರ್ಕಾರ್ಸ್ ಕಾಲೇಜ್ :ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ

ನವೆಂಬರ್ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ,ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ ಮಾತನಾಡಿ ದೇಶದಲ್ಲಿ ಅನಕ್ಷರತೆ ಮತ್ತು ವೈ ವೈವಿಧ್ಯತೆಯನ್ನು ಹೊಂದಿದ ನಮ್ಮ ದೇಶದಲ್ಲಿ ಎಲ್ಲರನ್ನೂ ಒಂದಾಗಿಸುವ ಸಂವಿಧಾನದ ಅಗತ್ಯ ಇತ್ತು. ಈ ಸಂದರ್ಭದಲ್ಲಿ ಸಂವಿಧಾನ ಸಮಿತಿಯನ್ನು ರಚಿಸಲಾಯಿತು. ನಂತರ ಕರಡು ಸಮಿತಿ ರಚಿಸಲಾಯಿತು. ಭಾರತದ ಸಂವಿಧಾನ ರಚನಾ ಸಮಿತಿಯು ವಿವಿಧ ದೇಶಗಳಿಗೆ ಸಂಚರಿಸಿ ಭಾರತದ ಸಂವಿಧಾನ ರಚಿಸಲಾಯಿತು ಎಂದು ಹೇಳಿದರು. ಜನತೆಗೆ ಪೂರಕ ಶ್ರೇಷ್ಠ ಸಂವಿಧಾನ ನಮ್ಮ ಭಾರತ ದೇಶದ್ದಾಗಿದೆ. ನಾವು ಮೊದಲು ಮನುಷ್ಯರಾಗಬೇಕು. ಸಂವಿಧಾನವನ್ನು ಗೌರವಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ವಕೀಲರಾದ ಸಂತೋಷ್ ಕುಮಾರ್ ಶೆಟ್ಟಿ ಗಿಳಿಯಾರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸೇವೆಯನ್ನು ನೀಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಕಾನೂನು ಸೇವೆಯನ್ನು ನೀಡುವುದು ಇದರ ಉದ್ದೇಶವಾಗಿದೆ. ನಮಗೆ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ನಿಮಗೆ ಅನಿಸಿದ್ದನ್ನು ಅಭಿವ್ಯಕ್ತಿಸುವ ಹಕ್ಕು ಇದೆ. ಆದರೆ ದೇಶದ ಸಮಗ್ರತೆ ಒಗ್ಗಟ್ಟು ಮತ್ತು ಐಕ್ಯತೆಗೆ ತೊಂದರೆ ಮಾಡಬಾರದು. ಹೀಗೆ ಹಲವು ಹಕ್ಕುಗಳನ್ನು ಸಂವಿಧಾನದ ನೆಲೆಯಲ್ಲಿ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ಉಪನ್ಯಾಸಕಿ ಅಕ್ಷತಾ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಉಡುಪಿಯ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರಿನ ಬಿಷಪ್ ಹೌಸ್ ಗೆ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆನಡಿ ಶಾಂತ್ ಕುಮಾರ್ ರವರ ಭೇಟಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುವ ಮಾಹಿತಿ ಕಾರ್ಯಗಾರವು ಇಂದು ಮಂಗಳೂರಿನ ಬಿಷಪ್ ನಿವಾಸದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತೀ ವಂದನೀಯ ಬಿಷಪ್ ಡಾ//ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಜೆ. ಕೆನಡಿ ಶಾಂತಕುಮಾರ್ ,(ಅಧ್ಯಕ್ಷರು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಕರ್ನಾಟಕ ಸರ್ಕಾರ)ಶ್ರೇಷ್ಠ ಗುರುಗಳಾದ ವಂದನೀಯ ರೆ//ಫಾ//ಮ್ಯಾಕ್ಸಿಂ ನೊರೋನ್ಹಾ,ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರೋಯ್ ಕ್ಯಾಸ್ಟೇಲಿನೋ,ಕೇಂದ್ರಿಯ ಪಾಲನ ಸಮಿತಿಯ ಕಾರ್ಯದರ್ಶಿ ಶ್ರೀ ಜಾನ್ ಡಿಸಿಲ್ವ, ಕಥೋಲಿಕ್ ಸಭೆಯ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೊ ಸಮುದಾಯ ನಾಯಕರಾದ ಶ್ರೀ ಜೋಯಲ್ ಮೆಂಡೋನ್ಸಾ , ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀ ಜಿನೇಂದ್ರ ಎಂ ಕೋಟ್ಯಾನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
 ಇದೇ ಸಂಧರ್ಭದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಾರ್ಯಗಾರದಲ್ಲಿ ಆನೇಕ ವಿಚಾರ ವಿನಿಮಯಗಳ ಜೊತೆಗೆ ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಾಯಿತು.
ಕಾರ್ಯಕ್ರಮವನ್ನು ಮಿಥುನ್ ಸಿಕ್ವೇರಾರವರು ನಿರೂಪಿಸಿದರು

ಪಡುಕೋಣೆ: ಸಂತ ಅಂತೋನಿ ಹಿ.ಪ್ರಾ.ಶಾಲೆಯಲ್ಲಿ ನಿವ್ರತ್ತ ಶಿಕ್ಷಕಿ ಡೇರಿ ಸುವಾರಿಸ್‌ ರವರಿಗೆ ಸನ್ಮಾನ – ಪ್ರತಿಭಾ ಸಿಂಚನ ಕಾರ್ಯಕ್ರಮ

ಪಡುಕೋಣೆ: ಸ್ಥಳೀಯ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ  ನ.14 ರಂದು ಮಕ್ಕಳ ದಿನಾಚರಣೆ ಮತ್ತು ಪ್ರತಿಭಾ ಸಿಂಚನ ಕಾರ್ಯಕ್ರಮ ಆಚರಿಸಲಾಯಿತು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ನಿವ್ರತ್ತ ಶಿಕ್ಷಕಿ ಶ್ರೀಮತಿ ಡೇರಿ ಸುವಾರಿಸ್‌ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

   ಶಾಲಾ ಸಂಚಾಲಕರಾದ ವಂದನೀಯ ಫ್ರಾನ್ಸಿಸ್‌ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ಶಾಲಾ ನಾಯಕಿ ಜಿಸ್ಸಿಕಾ ಡಿ’ಆಲ್ಮೇಡಾ ದೀಪ ಬೆಳಗಿಸಿ. ಕಾರ್ಯಕ್ರಮ ಉದ್ರಾಟಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಸಹಕರಿಸಿದರು .

   ಶ್ರೀ ಕೆನಡಿ ಪಿರೇರಾ, ಶ್ರೀ ಫಿಲಿಪ್‌ ಡಿಸಿಲ್ವ ಶ್ರೀ ಜೋಸೆಫ್‌ ಡಿಸಿಲ್ವ ಶ್ರೀ ಜೀನಾ ಕ್ರಾಸ್ತಾ, ಶ್ರೀ ವಿನ್ಸೆಂಟ್‌ ಡಿಸೋಜ, ಶ್ರೀ ಸ್ಟ್ಯಾನಿ ಡಿಆಲ್ಮೇಡ , ಶ್ರೀ ಸ್ಟ್ಯಾನಿ ಲುವಿಸ್‌, ಶ್ರೀ ಸ್ಟೀವನ್‌ ಡಿಸೋಜ, ಸಿ.ಆರ್.ಪಿ ರಾಮನಾಥ ಮೇಸ್ತ ಹಾಗೂ ಸಿಸ್ಟರ್‌ ಮರ್ಸಿ ವೇದಿಕೆಯಲ್ಲಿ ಹಾಜರಿದ್ದರು.  

     ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು, ವಿದ್ಯಾರ್ಥಿಗಳಿಂದ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದೆವು. ವಿದ್ಯಾರ್ಥಿಳು, ವಿದ್ಯಾರ್ಥಿಗಳ ಪೋಷಕರು, ಊರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಶಾಂತಿ ಪಾಯ್ಸ್‌ ಸ್ವಾಗತಿಸಿದರು. ಶಿಕ್ಷಕಿ ನಿರ್ಮಲ ಫೆರ್ನಾಂಡಿಸ್‌ ಧನ್ಯವಾದ ಅರ್ಪಿಸಿದರು. ಕುಮಾರಿ ವಿನುತ ಕಾರ್ಯಕ್ರಮ ನಿರೂಪಿಸಿದರು.

ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಮಹಾ ಭಿಕ್ಷೆ ಪಾದಯಾತ್ರೆ

ಶ್ರೀನಿವಾಸಪುರದಲ್ಲಿ ಬುಧವಾರ ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನೇತೃತ್ವದಲ್ಲಿ ಮಹಾ ಭಿಕ್ಷೆ ಪಾದಯಾತ್ರೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರ ರಾಘವರೆಡ್ಡಿ, ತಾಲ್ಲೂಕು ಅಧ್ಯಕ್ಷ ಇಮ್ರಾನ್ ಮತ್ತಿತರ ಪದಾಧಿಕಾರಿಗಳು ಇದ್ದರು

ನಾರಾಯಣಪುರ ಗ್ರಾಮದ ವಕೀಲ ಆರ್.ಶಿವಣ್ಣ (43) ಗುರುವಾರ ನಿಧನ


ಶ್ರೀನಿವಾಸಪುರ: ತಾಲ್ಲೂಕಿನ ನಾರಾಯಣಪುರ ಗ್ರಾಮದ ವಕೀಲ ಆರ್.ಶಿವಣ್ಣ (43) ಗುರುವಾರ ನಿಧನರಾದರು.
ಅವರು ಅನಾರೋಗ್ಯದಿಂದ ಬಳಲಿದ್ದರು.
ತಾಲ್ಲೂಕು ಮಡಿವಾಳ ಮಚಿದೇವರ ಕ್ಷೇಮಾಭಿವೃದ್ಧಿ ಸಂಘದ ಖಚಾಂಚಿಯಾಗಿದ್ದ ಅವರಿಗೆ, ಪತ್ನಿ, ಮಗ ಮತ್ತು ಮಗಳು ಅಗಲಿದ್ದಾರೆ.
ಗ್ರಾಮದ ಹೊರವಲಯದ ಸ್ಮಶಾನದಲ್ಲಿ ಶಾಸ್ತ್ರೊವದ ಪ್ರಕಾರ ಅಂತ್ಯ ಸಂಸ್ಕಾರ ನಡೆಸಲಾಯಿತು.

ಹೋಲಿ ರೋಜರಿ ಕಿಂಡರ್ ಗಾರ್ಟನ್ ಸ್ಕೂಲ್: ಶಿಕ್ಷಕ ರಕ್ಷಕ ಸಭೆಯಲ್ಲಿ ಮಕ್ಕಳ ಪಾಲನೆ ಬಗ್ಗೆ ತಿಳುವಳಿಕೆ ಕಾರ್ಯಕ್ರಮ

ಕುಂದಾಪುರ,ನ.25; ಕೆಲವು ದಿನಗಳ ಹಿಂದೆ ಕುಂದಾಪುರ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಮತ್ತು ವಿದ್ಯಾರ್ಥಿಗಳ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ವಹಿಸಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳ ರಕ್ಷಕರಿಗೆ ತಿಳುವಳಿಕೆ ನೀಡಿದರು.

    ಸಣ್ಣ ಮಕ್ಕಳ ಪಾಲನೆ ಬಗ್ಗೆ ಡಾ|ಸೋನಿ ಡಿಕೋಸ್ತಾ “ಮಕ್ಕಳು ಚಿಕ್ಕರಿರುವಾಗಲೇ ಉತ್ತಮ ಸಂಸ್ಕಾರವನ್ನು ಕಲಿಸುವುದು, ಮಗುವಿಗೆ ಅರಿವಿನ ಶಕ್ತಿಯನ್ನು ಹೆಚ್ಚಿಸಲು ಪ್ರಯತ್ನಿಸುವುದು, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪ್ರಯತ್ನ ಪಡುವುದು, ಹಾಗೇ ಮಕ್ಕಳಲ್ಲಿ ದೇವ ಭಕ್ತಿಯನ್ನು ಹೇಳಿಕೋಡುವುದು, ಗುರು ಹಿರಿಯರಿಗೆ ಗೌರವನ್ನು ನೀಡುವಂತೆ ಮಕ್ಕಳನ್ನು ಪಾಲಿಸಬೇಕು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲೆಯ ಶಿಕ್ಷಕರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

     ಶಾಲೆಯ ಮುಖ್ಯ ಶಿಕ್ಷಕಿ ಶೈಲಾ ಡಿಆಲ್ಮೇಡಾ ಪ್ರಸ್ತಾವಿಸಿ ಸ್ವಾಗತಿಸಿದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಅಧ್ಯಾಪಕರು, ವಿದ್ಯಾರ್ಥಿಗಳಿಂದ ಶೈಕ್ಷಣಿಕ ಅಧ್ಯಾಯನ ಪ್ರವಾಸ

ಶಿರ್ವ : ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಹಾಗೂ ಐಟಿ ಕ್ಲಬ್ ಜಂಟಿಯಾಗಿ ,ತಮ್ಮ ಜ್ಞಾನ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕೇಂಜಾರು ಶ್ರೀದೇವಿ ಸಮೂಹ ಸಂಸ್ಥೆಯಲ್ಲಿ ಏರ್ಪಡಿಸಿದ ಐಓಟಿ ಯೋಜನೆಯ ಅಭಿವೃದ್ಧಿಯ ಕಾರ್ಯಗಾರವನ್ನು ಅಧ್ಯಾಯನ ಮಾಡಲು ಭೇಟಿ ನೀಡಿದ್ದರು. ಇಂತಹ ಅಧ್ಯಯನಗಳು ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿ ಪ್ರಗತಿಗಳನ್ನು ತಿಳಿಯಲು, ಭವಿಷ್ಯದಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುತ್ತದೆ.
ಮುಖ್ಯ ಅತಿಥಿ ಮಂಗಳೂರಿನ ಐಕ್ಯೂ ಮ್ಯಾಟ್ರಿಕ್ಸ್ ನಿರ್ದೇಶಕ ಅಜಯ್ ಪ್ರಿನ್ಸ್ಟನ್ ಪಿಂಟೋ ರವರು ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡುತ್ತಾ ಐಓಟಿ ಅಭಿವೃದ್ಧಿ ಎಂದರೆ ಹಾರ್ಡ್‌ವೇರ್ ಭಾಗಗಳು ಮತ್ತು ಸಾಫ್ಟ್‌ವೇರ್ ಪ್ರೋಗ್ರಾಂಗಳನ್ನು ಸಂಯೋಜಿಸುವುದು.ಅಂತಿಮ ಉತ್ಪನ್ನವು ನಿರ್ದಿಷ್ಟ ಮೌಲ್ಯಗಳನ್ನು ಮೇಲ್ವಿಚಾರಣೆ ಮಾಡಲು, ಡೇಟಾವನ್ನು ಸಂಗ್ರಹಿಸಲು ಮತ್ತು ವರ್ಗಾಯಿಸಲು, ನೀಡಿರುವ ಡೇಟಾವನ್ನು ವಿಶ್ಲೇಷಿಸಲು ಮತ್ತು ಭೌತಿಕ ಸಾಧನವು ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಕಾರಣವಾಗುತ್ತದೆ. ಅಂತಹ ವ್ಯವಸ್ಥೆಗಳನ್ನು ರಚಿಸುವುದು ನಿಜವಾದ ಸವಾಲು.ಇದಲ್ಲದೆ, ಇಂಟರ್ನೆಟ್ ಆಫ್ ಥಿಂಗ್ಸ್ ಈಗಾಗಲೇ ತನ್ನದೇ ಆದ ಉದ್ಯಮವಾಗಿ ರೂಪಾಂತರಗೊಂಡಿದೆ, ಆದ್ದರಿಂದ ವಿಶ್ವಾಸಾರ್ಹ ಮತ್ತು ಸಮಗ್ರ ಡೆವಲಪರ್ ಟೂಲ್ಕಿಟ್ಗಳ ಅಗತ್ಯವೂ ಹೆಚ್ಚಾಗಿದೆ. ಸಂಕೀರ್ಣ ಅಪ್ಲಿಕೇಶನ್‌ಗಳನ್ನು ರಚಿಸಲು ಅಗತ್ಯವಿರುವ ಐಓಟಿ ಅಭಿವೃದ್ಧಿ ಸಾಧನಗಳನ್ನುಐಓಟಿ ಹಾರ್ಡ್‌ವೇರ್ ಸಾಧನಗಳು ಪ್ರತಿನಿಧಿಸುತ್ತವೆ ಎಂದು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಐಕ್ಯೂ ಮ್ಯಾಟ್ರಿಕ್ಸ್ ಸಿಬ್ಬಂದಿ ಪದ್ಮ ಪ್ರಸಾದ್ ರವರು ಆಧುನಿಕತೆಯ ಕಾಣ್ಕೆಯಾದ ತಾಂತ್ರಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೊಸ ಆವಿಷ್ಕಾರಗಳಿಗೆ ಪೂರಕವೆಂಬಂತೆ ಹಲವಾರು ಶೈಕ್ಷಣಿಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪ್ರಾತ್ಯಕ್ಷಿಕೆಯ ಪ್ರದರ್ಶನದೊಂದಿಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾಗ೯ದಶ೯ದಲ್ಲಿ ನಡೆಯಿತು. ಶ್ರೀದೇವಿ ಸಮೂಹ ಸಂಸ್ಥೆಯ ಪ್ರಾಂಶುಪಾಲ ಡಾ ಕೆ ಇ ಪ್ರಕಾಶ್, ಎಂಸಿಎ ವಿಭಾಗದ ಮುಖ್ಯಸ್ಥರಾದ ಆನಂದ್ ಎಸ್ ಉಪ್ಪಾರ್, ಪ್ರೊ! ಸರಸ್ವತಿ, ಪ್ರೊ! ಪ್ರಕೃತಿ ಎಸ್ ಬಂಡಾರಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ಡೈರೆಕ್ಟರ್ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಉಪನ್ಯಾಸಕ ಪ್ರಕಾಶ್,ಬಿಸಿಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳಾದ ದೀಪಕ್ ಎಂ, ಭವಾನಿ ಶೇಷ, ಸುಕೇಶ್ , ಅನುಪ್ ನಾಯಕ್ ಮತ್ತು ಅಲಿಸ್ಟರ್ ಕಾರ್ಯಾಗಾರದಲ್ಲಿ ಸಹಕರಿಸಿದರು. ರೋಲ್ಯಾಂಡ್ ಮೆಂಡೋನ್ಕಾ ವಂದಿಸಿ ಪ್ರತೀಕ್ಷಾ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.