ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆಯಲ್ಲಿ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ.

JANANUDI.COM NETWORK

“ತಂಬಾಕು ಸೇವನೆಯು ಆರಂಭದಲ್ಲಿ ಆಕರ್ಷಕವಾಗಿ ಕಂಡರು ಅದರ ದೀರ್ಘಾವಧಿ ದುಷ್ಪರಿಣಾಮಗಳನ್ನು ನಾವು ಅರಿಯಬೇಕು .ತಂಬಾಕಿನಿಂದ ಮುಕ್ತ ಜೀವನವನ್ನು ಮಾಡಿದಲ್ಲಿ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು. ಈ ದಿಸೆಯಲ್ಲಿ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಅತಿ ಅಗತ್ಯ” ಎಂದು ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರವೀಂದ್ರ ಬೋರ್ಕರ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇದರ ಅನ್ವಯ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ನಡೆದ ತಂಬಾಕು ಸೇವನೆಯ ದುಷ್ಪರಿಣಾಮಗಳು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿದ್ದರು. ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀಮತಿ ಜೆಸಿಂತಾ ನತಾಲಿಯಾ ಲೋಬೋ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಜೋಸೆಫ್ ಡಿಸೋಜ ವಂದಿಸಿದರು .ಇತಿಹಾಸ ಉಪನ್ಯಾಸಕ ನವೀನ್ ಕೊರೆಯ ನಿರೂಪಿಸಿದರು ಎನ್ಎಸ್ಎಸ್ ಕಟಕ ನಾಯಕ ಶನ್ವಿನ್, ಘಟಕ ನಾಯಕಿ ಧನಲಕ್ಷ್ಮಿ , ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ರಾಜೀವಿ, ಶಿಕ್ಷಕ ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.