ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಬಾಬು ಜಗಜೀವನ ರಾಂ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಅಸ್ಪಶ್ಯತಾ ನಿವಾರಣೆಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಗಜೀವನ ರಾಂ ಅವರ 114ನೇ ಜನ್ಮದಿನ ಸಮಾರಂಭದಲ್ಲಿ, ಜಗಜೀವನ ರಾಂ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಕೃಷಿ ಸಚಿವರಾಗಿ ಗಣನೀಯ ಸಾಧನೆ ಮಾಡಿದ್ದಾರೆ. ಹಸಿರು ಕ್ರಾಂತಿಯ ಹರಿಕಾರ ಎಂಬ ಮಾತಿಗೆ ಭಾಜನರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ, ಶಿರಸ್ತೇದಾರ್ ಮನೋಹರ ಮಾನೆ, ಉಪ ತಹಶೀಲ್ದಾರ್ ಚಂದ್ರಪ್ಪ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಮುಖಂಡರಾದ ಎಂ.ಶ್ರೀನಿವಾಸನ್, ರಾಮಾಂಜಮ್ಮ, ಈರಪ್ಪ, ಶಂಕರ್ ಇದ್ದರು.