

ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಚುರುಕಾಗಿ ನಡೆಯುತ್ತಿದೆ. ಸಮೀಕ್ಷಾ ಕಾರ್ಯಕ್ಕಾಗಿ ನೇಮಕಗೊಂಡಿರುವ ಸಿಬ್ಬಂದಿ ರೂಹೀ ನಾಸ್ ರವರು ಮನೆಮನೆಗೆ ತೆರಳಿ ನಾಗರಿಕರಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ಪ್ರತಿ ಪ್ರಶ್ನೆಗೆ ಸರಿಯಾದ ಉತ್ತರ ಪಡೆದು ನೋಂದಣಿ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
ಸಮೀಕ್ಷೆಯ ಪ್ರಗತಿ ಕುರಿತು ಮಾಹಿತಿ ನೀಡಿದ ರೂಹೀ ನಾಸ್ ರವರು, ಸಮೀಕ್ಷೆ ನಿಖರವಾಗಿ ಹಾಗೂ ಸುಗಮವಾಗಿ ನಡೆಯುತ್ತಿದೆ. ಇಂದು ಯಾವುದೇ ರೀತಿಯ ನೆಟ್ವರ್ಕ್ ಸಮಸ್ಯೆ ಅಥವಾ ಸರ್ವರ್ ತೊಂದರೆ ಎದುರಾಗದೆ ಕಾರ್ಯ ನಿರ್ವಹಣೆ ಸುಗಮವಾಗಿದೆ. ಜನರು ಸಹಕಾರ ನೀಡುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.
ಸ್ಥಳೀಯ ನಾಗರಿಕರೂ ಸಹ ಸಮೀಕ್ಷೆಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದು, ಹಿಂದುಳಿದ ವರ್ಗಗಳ ಆಯೋಗದ ಈ ಕ್ರಮವು ಭವಿಷ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಹಿತಾಸಕ್ತಿಗಳ ಬಲಪಡಿಸಲು ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

