

ಕುಂದಾಪುರ: ನವೆಂಬರ್ 8ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ್ದ “ಬದುಕಿಗಾಗಿ ಇಂಧನ” ಎಂಬ ಕಾರ್ಯಕ್ರಮ ನಡೆಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಪರಿಸರವನ್ನು ಉಳಿಸಿ ಮುಂದಿನ ಪೀಳಿಗೆಗೆ ಹಂಚಬೇಕಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹೇಳಿದರು.
ಕಾಲೇಜಿನ ವಿಶ್ವಸ್ಥರಾದ ಶ್ರೀ ಯು.ಎಸ್.ಶೆಣೈ ಮಾತನಾಡಿ ಇಂತಹ ಕಾರ್ಯಾಗಾರಗಳು ಇಲ್ಲಿಯೇ ನಿಲ್ಲಬಾರದು. ಇದು ಸಮಾಜದ ಎಲ್ಲಾ ನೆಲೆಗಳಿಗೆ ತಲುಪಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ತಾ ಸ್ವಾಗತಿಸಿದರು. ಬೆಲಿಟಾ ವಂದಿಸಿದರು.

