

ಉಡುಪಿ: ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಹೊರ ಸೂಸುವಸುಡುಮದ್ದುಗಳ (ಅಪಾಯಕಾರಿ ಸುಡುಮದ್ದು) ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು ಉಡುಪಿ ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ
ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಮುಂಬರುವ ದೀಪಾವಳಿ ಸಮಯದಲ್ಲಿ ಪ್ರತಿಯೊಬ್ಬರೂ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸುಡುಮದ್ದನ್ನು ಲೈಸನ್ಸ್ ಹೊಂದಿರುವ ಮರಾಟಗಾರರಿಂದಲೇ ಸುಡುಮದ್ದುಗಳನ್ನು ಖರೀದಿಸಬೇಕು, ಕಾನೂನು ಬಾಹಿರವಾದ ಸುಡುಮದ್ದುಗಳನ್ನು ಉಪಯೋಗಿಸಬಾರದು. ಮಕ್ಕಳು ಸುಡುಮದ್ದುಗಳನ್ನು ಬಳಸಲು ಅನುವು ಮಾಡಿಕೊಡದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.