ಬೋಳ ಗರಡಿಯಲ್ಲಿ ನಂದಳಿಕೆ ಅಬ್ಬನಡ್ಕ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ


ಸಾವಿರಾರು ವರ್ಷಗಳ ಇತಿಹಾಸ ಇರುವ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವದ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಶುಕ್ರವಾರ ಬೋಳ ಗರಡಿಯ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.
ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅರ್ಚಕರಾದ ಬೋಳ ಹರೀಶ್ ಪೂಜಾರಿಯವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ಬ್ರಹ್ಮಬೈದರ್ಕಳ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ದಿನೇಶ್ ಪೂಜಾರಿ ಬೀರೊಟ್ಟು, ಉದಯ ಅಂಚನ್ ಬೋಳ, ಸಂಘದ ಮಹಾಪೋಷಕರಾದ ಬೋಳ ನಂದೀಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಆರತಿ ಕುಮಾರಿ, ವೀಣಾ ಪೂಜಾರಿ, ಕೀರ್ತನ್ ಕುಮಾರ್ ಮೊದಲಾದವರಿದ್ದರು