JANANUDI.COM NETWORK

ಬೆಂಗಳೂರು.ಜೂ.24: ಬೆಂಗಳೂರಿನ ಮಾಜಿ ಲೇಡಿ ಕಾರ್ಪೊರೇಟರ್ ಒಬ್ಬಳನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಹತ್ಯೆ ಮಾಡಲಾದ ದಾರುಣಕರ ಘಟನೆ ನಡೆದಿದೆ.
ಬೆಂಗಳೂರು ಛಲವಾದಿ ಪಾಳ್ಯದ ಫವರ್ ಗಾರ್ಡನ್ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರೇ ದುಷ್ಕರ್ಮಿಗಳು ಹತ್ಯೆಯಾದ ನತದ್ರಷ್ಟೆ. ದುಷ್ಕರ್ಮಿಗಳು ಅವರನ್ನು ಮನೆಯಿಂದ ಹೊರ ಕರೆಸಿಕೊಂಡು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದದ್ದು, ರಕ್ತದ ಮಡುವಲ್ಲಿ ಬಿದ್ದಿದ್ದ ರೇಖಾ ಅವರನ್ನು ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲಾಗಿಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಅವರ ಪತಿಯನ್ನು ಕೂಡ ಈ ಹಿಂದೆ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಹಿಂದೆ 2018 ರ ಫೆಬ್ರವರಿ 8 ರಂದು ರೇಖಾ ಪತಿ ಕದಿರೇಶ್ ಅವರನ್ನು ಮುನೇಶ್ವರ ದೇವಸ್ಥಾನದ ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಶೋಬನ್ ಗ್ಯಾಂಗ್, ಕದಿರೇಶ್ ಅವರನ್ನು ಕೊಚ್ಚಿ ಕೊಲೆಗೈದಿತ್ತು. ಇದೀಗ ಅದೇ ಗ್ಯಾಂಗ್ ರೇಖಾ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ ಘಟನಾ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಹಾಗೂ ಕಾಟನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.