

ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ ಮ್ರತರ ಸಂಖೆ 8 ಕ್ಕೆ ಎರಿದೆ. ಕಟ್ಟಡ ಅನಧಿಕ್ರತ ಹಾಗೂ ಕಳಪೆ ಮಟ್ಟದ ಕಾಮಗಾರಿಯೆಂದು ಪರಿಗಣಿಸಿ, ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್ ಅವರನ್ನು ಅಮಾನತು ಮಾಡಲಾಗಿದೆ.ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್ ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಕಟ್ಟಡದ ಅವಷೇಶಗಳಡಿ ಇನ್ನೂ ಇಬ್ಬರು ಇದ್ದಾರೆಂದು ತಿಳಿದು ಬಂದು ಶೋಧ ಕಾರ್ಯ ಮುಂದುವರಿದಿದೆ.
ನಿಗದಿ ಅವಧಿಯಲ್ಲಿ ನೋಟಿಸ್ ನೀಡಿದ್ದರೂ, ಅಕ್ರಮ ಕಟ್ಟಡ ಎಂದು ತಿಳಿದರೂ ತೆರವು ಮಾಡುವಲ್ಲಿ ಎಇಇ ಯಾವುದೇ ಕ್ರಮ
ಕೈಗೊಂಡಿಲ್ಲ. ಹೀಗಾಗಿ, ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರ ವರದಿ ಮೇರೆಗೆ ಅಮಾನತು ಮಾಡಿ ಆದೇಶಿಸಲಾಗಿದೆ.