JANANUDI.COM NETWORK

ಬೆಂಗಳೂರು : ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ.ಮೃತಪಟ್ಟ ವಿದ್ಯಾರ್ಥಿನಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಕ್ರಿಸ್ ಪೀಟರ್ ಗಂಭೀರ ಗಾಯಗೊಂಡಿದ್ದಾನೆ.
ಸೆಂಟ್ ಜೋಸೆಫ್ ಕಾಲೇಜ್ನಲ್ಲಿ ದ್ವಿತೀಯ ವರ್ಷದ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾಗಿರುವ ಇಬ್ಬರೂ ಇವತ್ತು ಶಾಪಿಂಗ್ಗೆ ಬಂದಿದ್ದರು. ಈ ವೇಳೆ ಕಾಲು ಜಾರಿ ಕಟ್ಟಡದ ಎರಡನೇ ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಹಿಡಿದುಕೊಳ್ಳಲು ಹೋಗಿ ಯುವಕ ಕೂಡ ಬಿದ್ದಿದ್ದಾನೆ. ಯುವತಿಯ ಮೇಲೆಯೇ ಯುವಕ ಬಿದ್ದಿದ್ದರಿಂದ ಬದುಕಿದ್ದಾನೆ. ಯುವಕನ ಕಾಲು ಮುರಿದಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಆದರೆ, ಯುವತಿ ಲಿಯಾ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.
ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
